Breaking News

ಮೂವತ್ತು ಮೂರು ದಿನದಲ್ಲಿ ಕೋಟಿ ಒಡೆಯನಾದ ಮಾದಪ್ಪ

Screenshot 2024 01 04 17 09 38 29 6012fa4d4ddec268fc5c7112cbb265e7 300x164


ವರದಿ : ಬಂಗಾರಪ್ಪ ಸಿ ಹನೂರು
ಹನೂರು: ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರ ಸ್ಥಳವಾದ ಶ್ರೀ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ನಡೆದ ಹುಂಡಿಗಳ ಎಣಿಕೆಯಲ್ಲಿ ಈ ಬಾರಿ 33 ದಿನದ ಅವಧಿಯಲ್ಲಿ 2.90 ಕೋಟಿ ಸಂಗ್ರಹವಾಗಿದೆ.
ಹುಂಡಿ ಎಣಿಕೆ ಕಾರ್ಯವು
ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದಲ್ಲಿನ ವಾಣಿಜ್ಯ ಸಂಕೀರ್ಣದಲ್ಲಿ ಬುಧವಾರ ಬೆಳಗ್ಗೆ ಸಾಲೂರು ಬೃಹನ್ಮಾಠಧ್ಯಕ್ಷ ವಿದ್ವಾನ್ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಸಿಸಿ ಕ್ಯಾಮರಾ ಕಣ್ಣಾವಲು ಹಾಗೂ ಪೋಲಿಸ್ ಬಂದೋಬಸ್ತ್ ನಲ್ಲಿ ಎಣಿಕೆ ಕಾರ್ಯ ಪ್ರಾರಂಭ ಮಾಡಲಾಯಿತು.

ಜಾಹೀರಾತು

ಹೊಸ ವರ್ಷ ಅಮಾವಾಸ್ಯೆ, ಹುಣ್ಣಿಮೆ ಹಾಗೂ ಸರ್ಕಾರಿ ರಜಾ ದಿನಗಳಂದು ಬೆಂಗಳೂರು, ಕನಕಪುರ, ಚನ್ನಪಟ್ಟಣ, ರಾಮನಗರ, ಮೈಸೂರು, ಮಂಡ್ಯ, ಚಾ.ನಗರ, ಮಳವಳ್ಳಿ ಸೇರಿದಂತೆ ರಾಜ್ಯದ ಇನ್ನಿತರೆ ಕಡೆಗಳಿಂದ ಸಾವಿರಾರು ಭಕ್ತರು ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದರು.ಈ ವೇಳೆ ಭಕ್ತರು ಇಷ್ಟಾರ್ಥವಾಗಿ ಹಣ, ಚಿನ್ನ ಹಾಗೂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದರು.

ಈ ದಿಸೆಯಲ್ಲಿ ಬುಧವಾರ ನಡೆದ ಹುಂಡಿ ಎಣಿಕೆಯಲ್ಲಿ 33 ದಿನದ ಅವಧಿಯಲ್ಲಿ ಈ ಬಾರಿ 2,90,00,732 ರೂ ನಗದು, 102 ಗ್ರಾಂ ಚಿನ್ನ ಹಾಗೂ 3.355ಕೆ.ಜಿ ಬೆಳ್ಳಿ ಸಂಗ್ರಹವಾಗಿದೆ. ಎಣಿಕೆ ಸಂದರ್ಭದಲ್ಲಿ ಶ್ರೀ ಮಲೆಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ, ಉಪ ಕಾರ್ಯದರ್ಶಿ ಚಂದ್ರಶೇಖ‌ರ್, ಪ್ರಾಧಿಕಾರದ ನೌಕರರು ಹಾಗೂ ದೇವಸ್ಥಾನದ ಸಿಬ್ಬಂದಿಗಳು ಹಾಜರಿದ್ದರು .

About Mallikarjun

Check Also

unnamed

ಕಟ್ಟಡ ಇತರೆ ನರ‍್ಮಾಣ ಕರ‍್ಮಿಕರ ಆನ್ಲೈನ್ ರ‍್ಜಿ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸಿ. ರ‍್ಕಾರ ಘೋಷಿಸಿದ ಎಲ್ಲಾ ಸೌಲಭ್ಯಗಳನ್ನು ಕೂಡಲೇ ಜಾರಿ ಮಾಡಿ

ಕಟ್ಟಡ ಇತರೆ ನರ‍್ಮಾಣ ಕರ‍್ಮಿಕರ ಆನ್ಲೈನ್ ರ‍್ಜಿ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸಿ. ರ‍್ಕಾರ ಘೋಷಿಸಿದ ಎಲ್ಲಾ ಸೌಲಭ್ಯಗಳನ್ನು ಕೂಡಲೇ ಜಾರಿ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.