Breaking News

ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಈ ಪೋಸ್ಟ್‌ಗೆ೮ಪಾಯಿಂಟ್‌ಗಳಮೂಲಕ.ಕುಮಾರ ಸ್ವಾಮಿಗೆ ತಿರುಗೇಟು

Transport Minister Ramalinga Reddy for this post by 8 points.Reply to Kumara Swamy

ಕುಮಾರಸ್ವಾಮಿ ಫೇಸ್‌ಬುಕ್ ಪೋಸ್ಟ್‌ನಲ್ಲಿ, ‘ಚುನಾವಣೆ ಲಾಭಕ್ಕಾಗಿ ಕರ್ನಾಟಕ ಕಾಂಗ್ರೆಸ್ ರೂಪಿಸಿ ಜಾರಿಗೆ ತಂದಿರುವ ಅಗ್ಗದ ಗ್ಯಾರಂಟಿಗಳು ಮಕ್ಕಳ ಭವಿಷ್ಯಕ್ಕೂ ಎರವಾಗಿವೆ. ಮಹಿಳೆಯರಿಗೆ ಶಕ್ತಿ ತುಂಬುತ್ತೇವೆ ಎಂದು ಹೊರಟ ಆ ಪಕ್ಷದ ಸರಕಾರ, ಅವರು ಹೆತ್ತ ಮಕ್ಕಳ ಜೀವ ತೆಗೆಯುತ್ತಿದೆ. ಇದು ಕರ್ನಾಟಕ ಮಾದರಿ!!’ ಎಂದು ಟೀಕಿಸಿದ್ದರು.


ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಈ ಪೋಸ್ಟ್‌ಗೆ ೮ ಪಾಯಿಂಟ್‌ಗಳ ಮೂಲಕ ತಿರುಗೇಟು ನೀಡಿದ್ದಾರೆ. ಹಿಂದಿನ ರ‍್ಕಾರಗಳು ಸಾರಿಗೆ ಇಲಾಖೆಯಲ್ಲಿ ಮಾಡಿದ ಕೆಲಸಗಳನ್ನು ನೆನಪು ಮಾಡಿಕೊಟ್ಟಿದ್ದಾರೆ.

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದ ‘ಶಕ್ತಿ ಯೋಜನೆ’ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಮಾತು!

೧. ಸಾರಿಗೆ ಸಂಸ್ಥೆಗಳ‌ ಅಭಿವೃದ್ಧಿಯ ಎರಡು ಮುಖಗಳು ಅಂದರೆ, ಕಾಲಕಾಲಕ್ಕೆ ನೇಮಕಾತಿ ಹಾಗೂ ಹೊಸ ಬಸ್ಸುಗಳ ಸರ‍್ಪಡೆ.


೨. ಆದರೆ ದುರಂತವೆಂದರೆ, ಕಳೆದ ೫ ರ‍್ಷಗಳಲ್ಲಿ ಸಾರಿಗೆ ಸಂಸ್ಥೆಗಳಲ್ಲಿ ೧೩,೮೮೮ ಹುದ್ದೆಗಳು ಖಾಲಿ ಇದ್ದರೂ (ನಿವೃತ್ತಿ ಇನ್ನಿತರೆ ಕಾರಣಗಳಿಂದ) ಒಂದೇ ಒಂದು ನೇಮಕಾತಿ ಆಗಿಲ್ಲ. ನಮ್ಮ ರ‍್ಕಾರ ಸಾರಿಗೆ ಸಂಸ್ಥೆಗಳಲ್ಲಿ ೮,೯೦೦ ಖಾಯಂ ನೇಮಕಾತಿಗೆ ಚಾಲನೆ ನೀಡಿದೆ.

೩. ಮತ್ತೊಂದು ಮಹಾ ದುರಂತವೆಂದರೆ, ಸಂಸ್ಥೆಯಲ್ಲಿರುವ ಕೆಲವು ಡಕೋಟಾ ಬಸ್ಸುಗಳು, ಕಳೆದ ೫ ರ‍್ಷಗಳಲ್ಲಿ ಬಸ್‌ಗಳ ಸರ‍್ಪಡೆ ಆಗಿಲ್ಲ, ಕಳಪೆ ಸ್ಥಿತಿಯ ಬಸ್ಸುಗಳನ್ನು ಕರ‍್ಯಾಚರಣೆ‌ ಮಾಡುವುದು ಪ್ರಯಾಣಿಕರ ಹಿತದೃಷ್ಟಿಯಿಂದ ಸಾಧುವಲ್ಲದ ಕಾರಣ, ನಿಷ್ಕ್ರಿಯಗೊಳಿಸುವ ಕರ‍್ಯ ಒಂದೆಡೆಯಾದರೆ, ೯೦೦ ಬಸ್ಸುಗಳನ್ನು ಪುನಶ್ಚೇತನಗೊಳಿಸುವ ಕರ‍್ಯ ಕೂಡ ನಡೆದಿದೆ.


೪. ಇದರೊಂದಿಗೆ, ಸಾರಿಗೆ ಸಂಸ್ಥೆಗಳಲ್ಲಿ ೫,೯೦೦ ಹೊಸ ಬಸ್ಸುಗಳನ್ನು ಸರ‍್ಪಡೆಗೊಳಿಸುವ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದೆ . ನಾಲ್ಕು‌ ನಿಗಮಗಳಲ್ಲಿ ಹೊಸ ಬಸ್ಸುಗಳ ಸರ‍್ಪಡೆ ತ್ವರಿತಗತಿಯಲ್ಲಿ ಸಾಗಿದೆ.

೫. ಸಾರಿಗೆ ಸಂಸ್ಥೆಗಳು ಪ್ರತಿದಿನ ೧,೫೮,೦೦೦ ಟ್ರಿಪ್ ಗಳನ್ನು ಕರ‍್ಯಾಚರಣೆಗೊಳಿಸುತ್ತಿವೆ. ಬಸ್ಸುಗಳ ಕರ‍್ಯಾಚರಣೆ ತೊಂದರೆಯಾಗಿರುವಂತಹ ಒಂದೆರಡು ಘಟನೆಗಳು ಈ ಹಿಂದೆಯೂ ವರದಿಯಾಗುತ್ತಿದ್ದವು. ಆದರೆ ಶಕ್ತಿ ಯೋಜನೆ ತರುವಾಯ, ಈ ಯೋಜನೆಯ ಯಶಸ್ಸನ್ನು ಸಹಿಸದೆ, ಈ ರೀತಿಯ ಒಂದೆರಡು ಘಟನೆಗಳಿಗೂ ಕೂಡ ಶಕ್ತಿ ಯೋಜನೆಯನ್ನು ದೂಷಿಸುವಂತಹ ವ್ಯವಸ್ಥಿತ ಅಪಪ್ರಚಾರವನ್ನು ವಿಪಕ್ಷಗಳು ಮಾಡುತ್ತಿರುವುದು ವಿರ‍್ಯಾಸ.

೬. ಮಾನ್ಯ ಶ್ರೀ. ಕುಮಾರಸ್ವಾಮಿ ಅವರು ಹೇಳಿದಂತೆ, ಶಕ್ತಿ‌ ಯೋಜನೆ ಉಪಯೋಗಿ ಯೋಜನೆ ಎಂದು‌ ಒಪ್ಪಿಕೊಂಡರೂ ಸಹ, ಸರ‍್ವಜನಿಕರಿಗೆ ಸಮಗ್ರ ಸಾರಿಗೆ ಸೌಲಭ್ಯ ಒದಗಿಸುವಲ್ಲಿ, ಃಎP ಏಚಿಡಿಟಿಚಿಣಚಿಞಚಿ ಆಡಳಿತಾವಧಿಯಲ್ಲಿ ನೇಮಕಾತಿ ಹಾಗೂ ಬಸ್ಸುಗಳ ಸರ‍್ಪಡೆಯಾಗದೇ ಇರುವ ಬಗ್ಗೆ ಮಾನ್ಯ ಮಾಜಿ ಮುಖ್ಯಮಂತ್ರಿಗಳು ಚಕಾರವೆತ್ತದಿರುವುದು ಆಶ್ರ‍್ಯಕರ ಸಂಗತಿ
೭. ಶಕ್ತಿ ಯೋಜನೆಯಿಂದ ಮಹಿಳೆಯರು ಪ್ರವಾಸ ಸ್ಥಳಗಳಿಗೆ ಮಾತ್ರ ಮುಗಿಬಿದ್ದಿದ್ದಾರೆ ಎಂದು ರ‍್ಥೈಸುವುದು ಕೆಟ್ಟಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಶಿಕ್ಷಣ, ಉದ್ಯೋಗ, ದೇವರ ರ‍್ಶನ ಮುಂತಾದ ಕಾರಣಗಳಿಗಾಗಿ ನಾಡಿನ ಹೆಣ್ಣುಮಕ್ಕಳು ಈ ಯೋಜನೆಯನ್ನು ಉಪಯೋಗಿಸಿಕೊಂಡು ಅವರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಈ ಯೋಜನೆ ತನ್ನದೇ ಆದ ಕೊಡುಗೆ ನೀಡಿದೆ.

೮. ಶಕ್ತಿ ಯೋಜನೆ ಜಾರಿಯಾಗಿ ೬ ತಿಂಗಳುಗಳಲ್ಲಿ ೧೨೬ ಕೋಟಿಗೂ ಅಧಿಕ ಉಚಿತ ಟಿಕೆಟ್ ಪಡೆದು ಪ್ರಯಾಣಿಸಿದ ಪ್ರತಿಯೊಬ್ಬ ಮಹಿಳೆಯರು ಪ್ರವಾಸಿ ಸ್ಥಳಕ್ಕೆ ಹೋಗಿದ್ದಾರೆ ಎಂಬುದು ಅಕ್ಷಮ್ಯ. ಇದರಲ್ಲಿ ಶಾಲಾ‌ ಕಾಲೇಜಿಗೆ, ಉದ್ಯೋಗಕ್ಕೆ, ಮನೆಕೆಲಸ, ಗರ‍್ಮೆಂಟ್ ಫ್ಯಾಕ್ಟರಿಗೆ ಹೋಗುವ ವಿದ್ಯರ‍್ಥಿನಿಯರು/ ಮಹಿಳೆಯರು ಸೇರಿದ್ದಾರೆ ಎಂಬುದನ್ನು ಮಾನ್ಯ ಶ್ರೀ ಕುಮಾರಸ್ವಾಮಿಯವರು ಮರೆಯಬಾರದು ಎಂದರು.

About Mallikarjun

Check Also

ಖೊಟ್ಟಿ ದಾಖಲೆ ಸೃಷ್ಟಿಸಿ, ಬಿಪಿಎಲ್ ಪಡಿತರ ಚೀಟಿ ಪಡೆದಿದ್ದ ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲು, ದಂಡವಸೂಲಿ.

ಕಾರಟಗಿ: ತಾಲೂಕಿನ ಸಿದ್ಧಾಪುರ ಗ್ರಾಮದ ಬಿಜೆಪಿ ಮುಖಂಡ ಆಗಿರುವ ಮಹಿಬೂಬ್ ಸಾಬ್ ಮುಲ್ಲಾ (ಎಂ.ಡಿ.ಎಸ್) ತಂದೆ ಮೋದಿನ್ ಸಾಬ್ ಈತನು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.