Savitribai Pule Award, Educational Workshop on 6th Jan
ಕನಕಗಿರಿ: ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕೊಪ್ಪಳ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಗಂಗಾವತಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಗಳೂರು, ತಾಲ್ಲೂಕು ಘಟಕ ಕನಕಗಿರಿ ಅವರ ಸಹಯೋಗದಲ್ಲಿ
ಸಾವಿತ್ರಿಬಾಯಿ ಪುಲೆ ಜನ್ಮ ದಿನಾಚರಣೆ ನಿಮಿತ್ತ
ತಾಲ್ಲೂಕು ಮಟ್ಟದ ಸಾವಿತ್ರಿ ಬಾಯಿ ಪುಲೆ ಪ್ರಶಸ್ತಿ , ಶೈಕ್ಷಣಿಕ ಕಾರ್ಯಾಗಾರ, 2023 ನೇ ಸಾಲಿನಲ್ಲಿ ವರ್ಗಾವಣೆಗೊಂಡ ತಾಲ್ಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸನ್ಮಾನ ಹಾಗೂ ಶೈಕ್ಷಣಿಕ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜ.6ರಂದು ಆಯೋಜಿಸಲಾಗಿದೆ.
ಬಸರಿಹಾಳ ಗ್ರಾಮದ ರಸ್ತೆಯಲ್ಲಿ ರುವ ಶ್ರೀ ಸಾಯಿ ಫಂಕ್ಷನ್ ಹಾಲ್ ನಲ್ಲಿ ಬೆಳಿಗ್ಗೆ 9ಗಂಟೆ ನಡೆಯುವ ಕಾರ್ಯಕ್ರಮದ ಸಾನಿಧ್ಯವನ್ನು ಸುಳೇಕಲ್ ಬೃಹನ್ಮಠದ ಭುವನೇಶ್ಬರಯ್ಯ ತಾತ ಹಾಗೂ ಸುವರ್ಣಗಿರಿ ಸಂಸ್ಥಾನ ವಿರಕ್ತ ಮಠದ ಡಾ. ಚನ್ನಮಲ್ಲಸ್ವಾಮಿ ವಹಿಸುವರು.
ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ
ಶಿವರಾಜ ಎಸ್. ತಂಗಡಗಿ ಅವರು ಕಾರ್ಯಕ್ರಮ ಉದ್ಘಾಟಿಸುವರು.
ತಹಶೀಲ್ದಾರ್ ವಿಶ್ವನಾಥ ಮುರುಡಿ ಅಧ್ಯಕ್ಷತೆ ವಹಿಸುವರು. ಸಂಸದ ಸಂಗಣ್ಣ ಕರಡಿ ಅವರು
ಸಾವಿತ್ರಿಬಾಯಿ ಪುಲೆ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೆ. ನಾಗೇಶ ಹಾಗೂ ಪ್ರಧಾನ ಕಾರ್ಯದರ್ಶಿ
ಚಂದ್ರಶೇಖರ ನುಗ್ಗಲಿ ಅವರು
ಶೈಕ್ಷಣಿಕ ಪತ್ರಿಕೆ ಬಿಡುಗಡೆಗೊಳಿಸುವರು.
ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ
ಶ್ರೀಶೈಲ ಬಿರಾದಾರ ಅವರು
ಸಾವಿತ್ರಿಬಾಯಿ ಪುಲೆ ಪ್ರಶಸ್ತಿ ಪ್ರದಾನ ಮಾಡುವರು.
ಕ್ಷೇತ್ರ ಶಿಕ್ಷಣಾಧಿಕಾರಿ
ವೆಂಕಟೇಶ ರಾಮಚಂದ್ರಪ್ಪ, ಸಂಘದ ಜಿಲ್ಲಾಧ್ಯಕ್ಷ ಶರಣಬಸನಗೌಡ ಪಾಟೀಲ ಅವರು
ವರ್ಗಾವಣೆಗೊಂಡ ಶಿಕ್ಷಕರಿಗೆ ಸನ್ಮಾನಿಸವರು.
ಸಂಘದ ತಾಲ್ಲೂಕು ಅಧ್ಯಕ್ಷೆ ಶಂಶಾದಬೇಗಂ ಅವರು ಆಶಯ ನುಡಿ ವ್ಯಕ್ತಪಡಿಸುವರು.
ಅಂತರಾಷ್ಟ್ರೀಯ ಕಲಾವಿದ ಹಾಗೂ ಕುಷ್ಟಗಿಯ ಕ್ಷೇತ್ರ ಸಂಪನ್ಮೂಲ ವ್ಯಕ್ತಿ
ಜೀವನಸಾಬ ಬಿನ್ನಾಳ ಅವರು
ಉಪನ್ಯಾಸ ನೀಡುವವರು. ಶಿಕ್ಷಕರು ಹಾಗೂ ನೌಕರರ ಸಂಘಟನೆಗಳ ಪದಾಧಿಕಾರಿಗಳುಹಾಗೂ ಅಧಿಕಾರಿಗಳಾದ
ಶಂಭುಲಿಂಗನಗೌಡ ಪಾಟೀಲ ಹಲಗೇರಿ, ಚೇತನ ಎಚ್.ಎಸ್.
ಬಸವರಾಜ ಗುರಿಕಾರ,
ಮೆಹಬೂಬಪಾಷ ಮೂಲಿಮನಿ, ಅಧಿಕಾರಿಗಳಾದ
ಸುರೇಶಗೌಡ, ಮಂಜುನಾಥ ವಸ್ತ್ರದ, ಚಂದ್ರಶೇಖರ ಕಂದಕೂರು, ವಿರೂಪಾಕ್ಷಿ ಸ್ವಾಮಿ,
ಬಿ. ಮಂಜುನಾಥ, ಬಸವರಾಜ ರ್ಯಾವಳದ,
ದತ್ತಾತ್ರೇಯ ಹೆಗಡೆ, ಜಗದೀಶ ಹಾದಿಮನಿ,
ಜಗದೀಶ ಕೆಜಿ, ವಿ. ಮಧುಸೂದನ , ಡಿ.ಜಿ.ಸಂಗಮ್ಮನವರ್, ಅನಿಲಕುಮಾರ, ಪ್ರಾಂಶುಪಾಲರಾದ
ಬಜರಂಗ ಬಲಿ, ಮಾರೆಪ್ಪ ಎನ್ , ಸಮುದಾಯ ಆರೋಗ್ಯ ಕೇಂದ್ರದ ಡಾ. ಸತೀಶ, ಡಾ. ಪವನಕುಮಾರ ಅರವಟಗಿಮಠ ಭಾಗವಹಿಸುವರು ಎಂದು ಸಂಘದ ಗೌರವಾಧ್ಯಕ್ಷ ಶೇಖರಯ್ಯ ಕಲ್ಮಠ ಹಾಗೂ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಶಿರಗೇರಿ ತಿಳಿಸಿದ್ದಾರೆ.
….
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…