Breaking News

ದಲಿತರ ಮೇಲಿನ ದೌರ್ಜನ್ಯ ತಡೆದು, ದಲಿತ ಸಮುದಾಯಕ್ಕೆ ಮೂಲಸೌಕರ್ಯ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ

Protest to stop atrocities on Dalits and demand infrastructure for Dalit community

ಗಂಗಾವತಿ: ಕೊಪ್ಪಳ ಜಿಲ್ಲೆಯಾಧ್ಯಂತ ಅದರಲ್ಲೂ ಗಂಗಾವತಿ, ಕಾರಟಗಿ ಹಾಗೂ ಕನಕಗಿರಿ ತಾಲ್ಲೂಕುಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳು ಹೆಗ್ಗಿಲ್ಲದೇ ನಡೆಯುತ್ತಿದ್ದು, ಅಲ್ಲದೇ ಈ ಭಾಗದಲ್ಲಿ ದಲಿತರ ಮೇಲೆ ದೌರ್ಜನ್ಯ, ಅಸ್ಪೃಶ್ಯತೆ ಹೆಚ್ಚಾಗಿದ್ದು ಸರ್ಕಾರ ಇದರ ಬಗ್ಗೆ ಗಮನಹರಿಸಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಸಂಘಟನೆಯ ಕೊಪ್ಪಳ ಜಿಲ್ಲಾ ಸಂಚಾಲಕರಾದ ಸಿ.ಕೆ. ಮರಿಸ್ವಾಮಿ ಪ್ರಕಟಣೆಯಲ್ಲಿ ಸರ್ಕಾರಕ್ಕೆ ಒತ್ತಾಯಿಸಿದರು. ಅವರು ಜನೇವರಿ-೦೬ ಶನಿವಾರ ನಗರದ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದರು. ಗಂಗಾವತಿ, ಕನಕಗಿರಿ ಹಾಗೂ ಕಾರಟಗಿ ಭಾಗದ ನಗರ, ಪಟ್ಟಣ ಮತ್ತು ಹಳ್ಳಿಗಳಲ್ಲಿ ಇಸ್ಪೀಟ್ ದಂಧೆ ನಡೆಯುತ್ತಿದ್ದು, ಯಾವ ಅಧಿಕಾರಿಗಳ ಭಯವಿಲ್ಲದೇ ಕಾನೂನಿನ ಭಯವಿಲ್ಲದೇ ಈ ಇಸ್ಪೀಟ್ ದಂಧೆಯನ್ನು ನಡೆಸುತ್ತಿದ್ದಾರೆ. ಇದರಿಂದ ದಿನಗೂಲಿ ಕಾರ್ಮಿಕರ, ಕೂಲಿಕಾರ್ಮಿಕರ ಕುಟುಂಬಗಳು ಜೂಜಾಟಕ್ಕೆ ಬಲಿಯಾಗಿ ಹೊಲ-ಮನೆ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಕ್ರಮ ಮದ್ಯ ಹಾಗೂ ಗಾಂಜಾ ಮಾರಾಟ ದಂಧೆಯು ಗಂಗಾವತಿ, ಕಾರಟಗಿ, ಕನಕಗಿರಿಯಲ್ಲಿ ಪ್ರಭಾವಿ ವ್ಯಕ್ತಿಗಳಿಂದ ಕುಮ್ಮಕ್ಕಿನಿಂದ ಹೆಗ್ಗಿಲ್ಲದೇ ನಡೆಯುತ್ತಿದ್ದು, ಅಲ್ಲದೇ ಮದ್ಯದ ದರವನ್ನು ಎಂ.ಆರ್.ಪಿ ಗಿಂತಲೂ ಅಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದು, ಅಲ್ಲದೇ ಸಿ.ಎಲ್-೨, ಸಿ.ಎಲ್-೭ ಹಾಗೂ ಸಿ.ಎಲ್-೯ ಗಳು ಸರ್ಕಾರದ ಸುತ್ತೋಲೆ ಹಾಗೂ ಅಬಕಾರಿ ನಿಯಮಗಳನ್ನು ಗಾಳಿಗೆ ತೂರಿ ಮದ್ಯ ಮಾರಾಟ ಮಾಡುತ್ತಿದ್ದು, ಮುಂದುವರೆದು ಹಳ್ಳಿ-ಹಳ್ಳಿಗಳ ಗೂಡಂಗಡಿಗಳಲ್ಲಿ, ಪಾನ್‌ಶಾಪ್‌ಗಳಲ್ಲಿ ಮದ್ಯ ಮಾರಾಟ ಮಾಡುತ್ತಿದ್ದು, ಅಬಕಾರಿ ವಲಯ ಗಂಗಾವತಿ ವ್ಯಾಪ್ತಿಗೆ ಬರುವ ಮೂರು ತಾಲ್ಲೂಕುಗಳಿಂದ ೬೧ ಬಾರ್‌ಗಳಿದ್ದು, ಪ್ರತಿ ಬಾರ್‌ಗಳಿಂದ ಮಾಸಿಕ ಒಂದು ಲಕ್ಷದ ಬಕ್ಷೀಸು ಹಣವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಪಡೆಯುತ್ತಿರುವ ಬಗ್ಗೆ ಬಲ್ಲ ಮೂಲಗಳಿಂದ ತಿಳಿದು ಬಂದಿದ್ದು, ಇದು ಸರ್ಕಾರಿ ಅಧಿಕಾರಿಗಳು ಸಾರ್ವಜನಿಕರಿಗೆ ವಂಚನೆ ಮಾಡಿದಂತಾಗಿದೆ. ಇದರಿಂದ ಸರ್ಕಾರದ ಮಾರ್ಗಸೂಚಿಗಳನ್ನು ಗಾಳಿಗೆ ತೂರಿದಂತಾಗಿದೆ. ಅಲ್ಲದೇ ಮೇಲೆ ತೋರಿಸಲಾದ ಪ್ರದೇಶಗಳ ಕೆಲವು ಸ್ಥಳಗಳಲ್ಲಿ ಗಾಂಜಾ ಕೂಡಾ ಮಾರಾಟ ಮಾಡಲಾಗುತ್ತಿದೆ. ಅಕ್ರಮ ಮರಳು ದಂಧೆ ಗಂಗಾವತಿ, ಕಾರಟಗಿ, ಕನಕಗಿರಿ ಭಾಗಗಳಲ್ಲಿ ಅಕ್ರಮವಾಗಿ ಮರಳು ಸಾಗಾಣಿಕೆ ಮಾಡಲಾಗುತ್ತಿದ್ದು, ಸರ್ಕಾರದ ಯಾವುದೇ ರೀತಿಯ ಪರವಾನಿಗೆ ಪಡೆಯದೆ, ಸಕ್ಷಮ ಪ್ರಾಧಿಕಾರಗಳ ಅನುಮತಿ ಇಲ್ಲದೇ ಮರಳು ಸಾಗಾಣಿಕೆ ಮಾಡುತ್ತಿದ್ದು, ಸರ್ಕಾರಕ್ಕೆ ರಾಯಲ್ಟಿ ಪಾವತಿಸಿದೇ ಹಳ್ಳಗಳಿಂದ ಮರಳನ್ನು ಎತ್ತಿ, ಟಿಪ್ಪರ್ ಹಾಗೂ ಟ್ರಾö್ಯಕ್ಟರ್‌ಗಳ ಮೂಲಕ ಅಕ್ರಮವಾಗಿ ಮರಳನ್ನು ಸಾಗಿಸಲಾಗುತ್ತಿದೆ. ಅದೇರೀತಿ ಮಟ್ಕಾ ದಂಧೆಯು ಗಂಗಾವತಿ, ಕಾರಟಗಿ ಹಾಗೂ ಕನಕಗಿರಿ ಭಾಗಗಳಲ್ಲಿ ಮಟ್ಕಾ ಏಜೆಂಟರ ಹಾವಳಿ ಹೆಚ್ಚಾಗಿದ್ದು, ಅಕ್ರಮವಾಗಿ ಮಟ್ಕಾ ದಂಧೆಯನ್ನು ಹೆಗ್ಗಿಲ್ಲದೇ ನಡೆಸಿಕೊಂಡು ಹೋಗುತ್ತಿದ್ದಾರೆ. ಇವರಿಗೆ ಪ್ರಭಾವಿ ವ್ಯಕ್ತಿಗಳ ಬೆಂಬಲವಿದ್ದು, ನಗರದ ಗಲ್ಲಿ ಗಲ್ಲಿಗಳಲ್ಲಿ ಹಾಗೂ ಪ್ರತಿಯೊಂದು ಹಳ್ಳಿಗಳಲ್ಲಿ ಮಟ್ಕಾ ದಂಧೆಯನ್ನು ನಡೆಸುವ ಜೂಜುಕೊರರು ಹೆಚ್ಚಾಗಿದ್ದಾರೆ. ರಾಜ್ಯ ಸರ್ಕಾರದ ಮಹತ್ತರ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಕಡು ಬಡತನದ ಕುಟುಂಬದವರಿಗೆ ವಿತರಣೆಯಾಗಬೇಕಾದ ಪಡಿತರ ಅಕ್ಕಿಯನ್ನು ಕೆಲವು ಪ್ರಭಾವಿಗಳು ದಾಸ್ತಾನು ಗೋದಾಮುಗಳಿಂದ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಂಗ್ರಹಿಸಿ, ರಾಜ್ಯದ ಬೇರೆ ಬೇರೆ ಜಿಲ್ಲೆ ಹಾಗೂ ನೆರೆಹೊರೆ ರಾಜ್ಯಗಳಿಗೆ ಅಕ್ರಮವಾಗಿ ಸಾಗಿಸುತ್ತಿದ್ದಾರೆ. ಇದು ಬಡ ಕುಟುಂಬದವರ ಹೊಟ್ಟೆ ಮೇಲೆ ಬರೆ ಎಳೆದಂತಾಗಿದೆ. ಈ ಎಲ್ಲಾ ಅಕ್ರಮ ಕಾನೂನುಬಾಹಿರ ಚಟುವಟಿಕೆಗಳನ್ನು ಸರ್ಕಾರ ಶೀಘ್ರ ತಡೆಹಿಡಿದು ಅಕ್ರಮಕೋರರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಇತ್ತೀಚೆಗೆ ಚಿಕ್ಕಮಗಳೂರು ಜಿಲ್ಲೆಯ ತರಿಕೇರಿ ತಾಲ್ಲೂಕಿನ ಗೇರುಮರಡಿ ಗೊಲ್ಲಾರಹಟ್ಟಿಗೆ ಮಾದಿಗ ಸಮುದಾಯದ ಯುವಕ ಮಾರುತಿ ಎಂಬಾತ ಪ್ರವೇಶ ಮಾಡಿದ ಕಾರಣಕ್ಕೆ ಅಲ್ಲಿನ ೩೦-೪೦ ಜನ ಜೆ.ಸಿ.ಬಿ ಯಿಂದ ಆತನನ್ನು ಎಳೆದು, ಮಾರಣಾಂತಿಕವಾಗಿ ಹಲ್ಯೆ ಮಾಡಿರುವುದಲ್ಲದೇ ಜಾತಿ ನಿಂದನೆ ಮಾಡಿ ಜೀವಭಯವನ್ನು ಹಾಕಿದ ಘಟನೆ ನಡೆದಿದೆ. ಇದರಿಂದ ದಲಿತ ಸಮುದಾಯಕ್ಕೆ ರಕ್ಷಣೆ ಇಲ್ಲದಂತಾಗಿದೆ. ಮುಂದುವರೆದು ಸಮಾಜದಲ್ಲಿ ಪ್ರಚೋದನಕಾರಿಯಾಗಿ ಭಾಷಣ ಮಾಡುವ ಮೂಲಕ ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಸಮಾಜದ ಸಾಮರಸ್ಯಕ್ಕೆ ಭಂಗವುAಟು ಮಾಡಿ ಕೋಮುಗಲಭೆಗೆ ಕಲ್ಲಡ್ಕರ್ ಪ್ರಭಾಕರ ಕಾರಣರಾಗಿದ್ದು ಇವರ ಮೇಲೆ ಶಿಸ್ತು ಕಾನೂನು ಜರುಗಿಸಬೇಕೆಂದು ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ಸಂಘಟನೆಯ ಪದಾಧಿಕಾರಿಗಳಾದ ಹುಲ್ಲೇಶ ಬಂಡಿ ಭೋವಿ, ಯಲ್ಲಪ್ಪ ಸಮಗಾರ, ಟಿ. ವೆಂಕಟೇಶ, ಅತ್ತ ಸಂಪAಗಿ, ರಿಯಾಜ್, ಆರೀಫ್, ದಾವಲ್ ಡಿಶ್, ಸಾಗರ, ಸುಂಕಪ್ಪ ಭೋವಿ, ಹನುಮೇಶ, ಸೋಹಿಲ್, ಮಂಜುನಾಥ ಗೋಮರ್ಸಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

About Mallikarjun

Check Also

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ. ಅಪಾರ ಪ್ರಮಾಣದಲ್ಲಿ ನಷ್ಟ.

ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಕುಪ್ಪಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಟ್ಟಿಗೆಹಳ್ಳಿ ಗ್ರಾಮದ ದಲಿತ ಸಮುದಾಯದ ಕೆಂಪರಾಮಯ್ಯ ಸನ್ ಆಫ್ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.