ಕಲ್ಯಾಣಸಿರಿ ವಿಶೇಷ

ಗಂಗಾವತಿ ನಗರದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅಪಮಾನ:ಖಂಡನೆವಿಜಯ ದೊರೆರಾಜು

Desecration of Ambedkar statue in Gangavati Nagar: Condemned Vijaya Doraraj

ಗಂಗಾವತಿ: ನಗರದ ಕೋರ್ಟ್ ಮುಂಭಾಗದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್‌ರವರ ಪುತ್ಥಳಿಗೆ ಕೆಲವು ಕಿಡಿಗೇಡಿಗಳು ಅಪಮಾನವೆಸಗಿರುವುದು ತೀವ್ರ ಖಂಡನೀಯ ಎಂದು ಸಿ.ಪಿ.ಐ.ಎಂ.ಎಲ್ ಲಿಬರೇಷನ್ ಪಕ್ಷದ ಕೊಪ್ಪಳ ಜಿಲ್ಲಾ ಕಾರ್ಯದರ್ಶಿಯಾದ ವಿಜಯ್ ದೊರೆರಾಜು ಪ್ರಕಟಣೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗಂಗಾವತಿ ನಗರವು ಇತ್ತೀಚೆಗೆ ಶಾಂತಿ ಸೌಹಾರ್ಧತೆಗೆ ಹೆಸರುವಾಸಿಯಾಗಿದ್ದು, ಯಾವುದೆ ಕೋಮು ಗಲಭೆಗಳು ನಡೆಯದಂತೆ ಸಾರ್ವಜನಿಕರು ಸೌಹಾರ್ಧತಯುತವಾಗಿ ಜೀವನ ಸಾಗಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತರು ಅಂಬೇಡ್ಕರ್ ಪುತ್ಥಳಿಗೆ ರಕ್ಷಣೆಯಾಗಿರುವ ಸಿ.ಸಿ ಕ್ಯಾಮೇರಾಗಳನ್ನು ತೆರವುಗೊಳಿಸಿರುವುದು ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಬೇಜವಾಬ್ದಾರಿತನವಾಗಿದೆ. ಇದರಿಂದಾಗಿ ಕೆಲವು ಕಿಡಿಗೇಡಿಗಳು ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್‌ರವರ ಪುತ್ಥಳಿಗೆ ಮಧ್ಯರಾತ್ರಿ ಟೊಮೊಟೊ ಸಾರ್ಸ್ ಎರಚುವ ಮೂಲಕ ಪುತ್ಥಳಿಯನ್ನು ಮಲೀನಗೊಳಿಸಿರುತ್ತಾರೆ. ಇಂಥವರನ್ನು ಪತ್ತೆಹಚ್ಚಿ ಅವರ ಮೇಲೆ ಶಿಸ್ತು ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಹಾಗೂ ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಮರುಕಳಿಸದಂತೆ ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ನಮ್ಮ ಪಕ್ಷ ಒತ್ತಾಯಿಸುತ್ತದೆ ಎಂದು ತಿಳಿಸಿದರು.
ಇದೆ ಸಂದರ್ಭದಲ್ಲಿ ಸಣ್ಣ ಹನುಮಂತಪ್ಪ ಹುಲಿಹೈದರ, ಅಬ್ದುಲ್, ಅಮೀರ್ ಅಲಿ, ಚಾಂದ್‌ಪಾಷಾ ಸೇರಿದಂತೆ ಪ್ರಗತಿಪರ, ದಲಿತಪರ ಸಂಘಟನೆಗಳ ಮುಖಂಡರು ಹಾಜರಿದ್ದರು.

Mallikarjun

Share
Published by
Mallikarjun

Recent Posts

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…

59 minutes ago

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

20 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

21 hours ago