Breaking News

ಅಗತ್ಯ ವಸ್ತುಗಳ ಬೆಲೆ ಏರಿಕೆ, ಶ್ರೀಮಂತರ ಸಾಲಮನ್ನಾ ಖಂಡಿಸಿ ಸಿಐಟಿಯು ಪ್ರತಿಭಟನೆ

CITU protested against rise in price of essential items, loan waiver of rich people


ಗಂಗಾವತಿ: ಅಗತ್ಯವಸ್ತುಗಳ ಬೆಲೆ ಏರಿಕೆ,ಶ್ರೀಮಂತ ಉದ್ಯಮಿಗಳ ಸಾಲ ಮನ್ನಾ ಖಂಡಿಸಿ ಸಿಐಟಿಯುವ ನೇತೃತ್ವದಲ್ಲಿ ಕೃಷಿ ಕೂಲಿಕಾರರು,ಹಮಾಲಿಕರ‍್ಮಿಕರು ಕೇಂದ್ರ ಸರಕಾರದ ವಿರುದ್ಧ ನಗರದ ಶ್ರೀ ಕೃಷ್ಣ ದೇವರಾಯ ವೃತ್ತದಲ್ಲಿ
ಪ್ರತಿಭಟನೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದರು.
ಈ ಸಂರ‍್ಭದಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷ ಎಂ.ನಿರುಪಾದಿ ಬೆಣಕಲ್ ಮಾತನಾಡಿ,
ರಾಜ್ಯದಲ್ಲಿ ಕೆಲಸದ ಅವಧಿಯ ಹೆಚ್ಚಳವನ್ನು ತಂದಿರುವ ಕರ‍್ಖಾನೆ ಕಾಯ್ದೆ ತಿದ್ದುಪಡಿ ಕೈ ಬಿಡಬೇಕು. ಕೆಲಸದ ಅವಧಿ ಹೆಚ್ಚಿಸುವ, ಮಹಿಳೆಯರನ್ನು ರಾತ್ರಿಪಾಳಿಯಲ್ಲಿ ದುಡಿಸಿಕೊಳ್ಳಲು ಅವಕಾಶ ನೀಡುವುದು ಸೇರಿದಂತೆ ಎಲ್ಲ ಕರ‍್ಮಿಕ ವಿರೋಧಿ ತಿದ್ದುಪಡಿಗಳನ್ನು ವಾಪಸ್ ಪಡೆಯಬೇಕು.ರೈತ ವಿರೋಧಿ ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕು. ಕೃಷಿ ಬೆಳೆಗಳಿಗೆ ಲಾಭದಾಯಕ ಬೆಂಬಲ ಬೆಲೆ ಖಾತರಿಪಡಿಸಬೇಕು. ಎಪಿಎಮ್ ಸಿ ವ್ಯವಸ್ಥೆಯನ್ನು ಬಲಗೊಳಿಸಬೇಕು. ಗೊಬ್ಬರ ಒಳಗೊಂಡಂತೆ ಕೃಷಿ ಇಡುವಳಿಗಳಿಗೆ ಸಬ್ಸಿಡಿ ಕಡಿತಗೊಳಿಸುವ ನೀತಿಗಳನ್ನು ಕೈ ಬಿಡಬೇಕು.
ಕೇಂದ್ರ ರ‍್ಕಾರದ ನವ ಉದಾರೀಕರಣ ನೀತಿಗಳ ಜಾರಿಯ ವೇಗದಲ್ಲಿ ತನ್ನ ನೀತಿಗಳ ಪರಿಕಲ್ಪನೆಯನ್ನು ಬದಲಾಯಿಸಿ ದೇಶದ ಅಭಿವೃದ್ಧಿಯ ಸಂಕೇತಗಳಾದ ಮಕ್ಕಳು ಮತ್ತು ಮಹಿಳೆಯರಿಗಾಗಿ ಕೊಡುವ ಸವಲತ್ತುಗಳಿಗೆ ಕತ್ತರಿ ಹಾಕುತ್ತಿದೆ, ಇದರಿಂದ ದೇಶದ ೨೨ ಕೋಟಿ ಫಲಾನುಭವಿಗಳು ವಂಚಿತರಾಗುತ್ತಿದ್ದಾರೆ.ದೇಶದ ಬಂಡವಾಳಗಾರರು ಮತ್ತು ಕರ‍್ಪೋರೇಟ್ ಕಂಪನಿಗಳಿಗೆ ೧೪.೫ ಲಕ್ಷ ಕೋಟಿ ಸಾಲ ಮನ್ನ ಮಾಡಿದ್ದು ಖಂಡನೀಯವಾಗಿದೆ.
ಕೇಂದ್ರ ಪ್ರಭುತ್ವ ಅಂಗನವಾಡಿ ನೌಕರರಿಗೆ ೪೫೦೦ ರೂ. ಸಹಾಯಕಿಯರಿಗೆ ೨೨೫೦ ರೂ, ಬಿಸಿಯೂಟದವರಿಗೆ ೬೦೦ ರೂ, ಆಶಾ ಕರ‍್ಯರ‍್ತೆರಿಗೆ ೨೦೦೦ ರೂ ಕೊಟ್ಟು ದುಡಿಸುವುದು ಸಾಮಾಜಿಕ ನ್ಯಾಯವಲ್ಲ, ೨೦೧೮ ರಿಂದ ಈ ನೌಕರರಿಗೆ ಒಂದೂ ರೂಪಾಯಿಯನ್ನು ಹೆಚ್ಚಳ ಮಾಡದೆ ಚುನಾವಣೆಗಳು, ಮಾತೃವಂದನಾ, ಪೋಷಣ್ ಟ್ರ‍್ಯಾಕರ್, ರ‍್ವೆ, ಗೃಹಲಕ್ಷ್ಮಿ ಮುಂತಾದ ಕೆಲಸಗಳನ್ನು ಹೇರಿ ಈ ಮಹಿಳೆಯರನ್ನು ಹಿಂಡಿ ಹಿಪ್ಪೆ ಮಾಡುವುದು, “ಗೌರವ ಧನ” ಎಂಬ ಪಟ್ಟಕಟ್ಟಿ ಎಲ್ಲ ಸವಲತ್ತುಗಳಿಂದ ವಂಚನೆ ಮಾಡಲಾಗುತ್ತಿದೆ.ಇವರಿಗೆಲ್ಲಾ ವೇತನ ಹೆಚ್ಚಿಸಿ ಸೇವಾ ಭದ್ರತೆ ನೀಡಬೇಕು ಕೇಂದ್ರ ಸರಕಾರದ ವೈಫಲ್ಯ ಖಂಡಿ ಜ.೨೩ ರಂದು ದೆಹಲಿ ಚಲೋ ಕರ‍್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಪ್ರತಿಭಟನೆಯಲ್ಲಿ
ಸಿಐಟಿಯು ಜಿಲ್ಲಾ ಅಧ್ಯಕ್ಷ ನಿರುಪಾದಿ ಬೆಣಕಲ್, ಅಕ್ಷರದಾಸೋಹ ನೌಕರರ ಸಂಘದ ಅಧ್ಯಕ್ಷ ಲಕ್ಷ್ಮೀ ಸೋನಾರೆ, ಅಂಗನವಾಡಿ ನೌಕರರ ಸಂಘದ ಮುಖಂಡ ರಾದ ಗಿರಿಜಮ್ಮ, ಹುಸೇನಪ್ಪ, ಅಂಜನಾದೇವಿ, ರವಿ ಅಕ್ಕಿರೊಟ್ಟಿ, ರಮೇಶ, ಬಾಳಪ್ಪ ಹುಲಿಹೈದರ ಇತರರಿದ್ದರು.
ಪೊಟೊ೦೯-gvಣ-೦೬
ಗಂಗಾವತಿ:ಕೇಂದ್ರ ಸರಕಾರದ ವಿರುದ್ಧ ಸಿಐಟಿಯು ಸಂಘಟನೆಯ ಪ್ರತಿಭಟನೆ ನಡೆಯಿಸಿತು.

About Mallikarjun

Check Also

ವೈದ್ಯರ ಭಾರವನ್ನು ಕಡಿಮೆ ಮಾಡುವವರು ಶುಶ್ರೂಷಕಿಯರು : ಡಾ.ಲಿಂಗರಾಜ್‌ಸರ್ಕಾರಿ ಉಪವಿಭಾಗಆಸ್ಪತ್ರೆಯಲ್ಲಿ ವಿಶ್ವ ದಾದಿಯರ ದಿನಾಚರಣೆ

ಗಂಗಾವತಿ,14:ವೈದ್ಯರ ಭಾರವನ್ನು ಕಡಿಮೆ ಮಾಡುವವರು ಶುಶ್ರೂಷಕಿಯರು, ಅವರಿಗೆ ಗೌರವ ಸಲ್ಲಿಸಲೆಂದೇ ಪ್ರತಿ ವರ್ಷ ಮೇ.12 ರಂದು ಅಂತಾರಾಷ್ಟ್ರೀಯ ಶುಶ್ರೂಷಕಿಯರ ದಿನವನ್ನು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.