Breaking News

4 ಕೋಟಿ 30 ಲಕ್ಷ ಕನ್ನಡಿಗರಿಗೆ ಸರ್ಕಾರದ ಗ್ಯಾರಂಟಿಯ ಫಲ ಪ್ರತೀ ದಿನ-ಪ್ರತೀ ತಿಂಗಳು ತಲುಪುತ್ತಿದೆ-ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ

The fruits of the government’s guarantee to 4 crore 30 lakh Kannadigas are reaching every day – every month – Chief Minister Shri Siddaramaiah

ಜಾಹೀರಾತು

KPCC ವತಿಯಿಂದ ಇಂದಿರಾಗಾಂಧಿ ಭವನದ ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಭಾಗವಹಿಸಿ ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಮಾತನಾಡಿದರು.

4 ಕೋಟಿ 30 ಲಕ್ಷ ಕನ್ನಡಿಗರಿಗೆ ಸರ್ಕಾರದ ಗ್ಯಾರಂಟಿಯ ಫಲ ಪ್ರತೀ ದಿನ-ಪ್ರತೀ ತಿಂಗಳು ತಲುಪುತ್ತಿದೆ. ಈ ಫಲಾನುಭವಿಗಳಲ್ಲಿ BJPಯವರೇ ಹೆಚ್ಚಿದ್ದಾರೆ. ನಾವು 59 ಸಾವಿರ ಕೋಟಿ ವಾರ್ಷಿಕ ವೆಚ್ಚ ಮಾಡಿ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ.
ಇದು ದೇಶದಲ್ಲೇ ಮೊದಲು. ಪ್ರತಿಯೊಬ್ಬ ಕಾರ್ಯಕರ್ತನೂ ಎದೆ ಎತ್ತಿ, ತಲೆ ಎತ್ತಿ ಹೇಳಿ.
ಪಕ್ಷದ ಕಾರ್ಯಕರ್ತರೇ ನಮ್ಮ ಬೆನ್ನೆಲುಬು. ನಿಮ್ಮ ಹೋರಾಟದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ.

ವಾಮ ಮಾರ್ಗದಲ್ಲಿ ಮೂರೂವರೆ ವರ್ಷ ಅಧಿಕಾರ ನಡೆಸಿದ ಬಿಜೆಪಿ ಮಾಡಬಾರದ್ದನ್ನೆಲ್ಲಾ ಮಾಡಿ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿಟ್ಟು ಹೋಗಿತ್ತು.
ನೀರಾವರಿ ಇಲಾಖೆಯೊಂದರಲ್ಲೇ 13 ಸಾವಿರ ಕೋಟಿಗೂ ಅಧಿಕ ಬಿಲ್ ಬಾಕಿ ಉಳಿಸಿದ್ದಾರೆ. ಲೋಕೋಪಯೋಗಿ ಇಲಾಖೆಯಲ್ಲಿ 9,000 ಕೋಟಿ, ಸಣ್ಣನೀರಾವರಿ ಇಲಾಖೆಯಲ್ಲಿ 2,000 ಕೋಟಿ ರೂಪಾಯಿ, ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 6,000 ಕೋಟಿ ರೂಪಾಯಿ, ಬೆಂಗಳೂರು ನಗರ 5,000 ಕೋಟಿ ಬಿಲ್ ಬಾಕಿ ಉಳಿಸಿದ್ದಾರೆ. ಹೀಗೆ ರಾಜ್ಯವನ್ನು ಹಾಳುಮಾಡಿ, ರಾಜ್ಯದ ಆರ್ಥಿಕತೆಯನ್ನು ಹಾಳುಗೆಡವಿ ಹೋಗಿದ್ದಾರೆ. ಇಷ್ಟಾದರೂ ನಾವು 59 ಸಾವಿರ ಕೋಟಿ ವಾರ್ಷಿಕ ವೆಚ್ಚ ಮಾಡಿ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ.

ಬಿಜೆಪಿಯವರು ಚೆನ್ನಾಗಿ ತಿಂದು, ಸಾವಿರಾರು ಕೋಟಿ ಕೆಲಸ ಶುರು ಮಾಡಿಸಿ ಸುಮಾರು 40 ಸಾವಿರ ಕೋಟಿಗೂ ಹೆಚ್ಚು ಬಿಲ್ ಕೊಡದೆ, ಬಿಲ್ ಬಾಕಿ ಉಳಿಸಿ ಮನೆಗೆ ಹೋಗಿದ್ದಾರೆ. ದುರಾಡಳಿತ ನಡೆಸಿ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿಟ್ಟಿದ್ದಾರೆ.
ನಮ್ಮ ಗ್ಯಾರಂಟಿಗಳನ್ನು ಅಣಕಿಸಿ ಈಗ ನಮ್ಮ ಗ್ಯಾರಂಟಿಗಳನ್ನೇ ಕಾಪಿ ಮಾಡಿ ಅದಕ್ಕೆ ಮೋದಿ ಗ್ಯಾರಂಟಿ ಎನ್ನುತ್ತಿದ್ದಾರೆ. ಬಿಜೆಪಿಯವರು ಅಷ್ಟು ನಿರ್ಲಜ್ಜರಾಗಿದ್ದಾರೆ.

ಸರ್ಕಾರದ ಕೆಲಸಗಳನ್ನು ಪ್ರತಿ ಮನೆಗೆ ತಲುಪಿಸಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯವರ ಸುಳ್ಳನ್ನು ಸೋಲಿಸಿ ನಮ್ಮ ಸಾಧನೆಗಳನ್ನು ಎತ್ತಿ ಹಿಡಿಯುವ ಮೂಲಕ 28 ಲೋಕಸಭಾ ಸ್ಥಾನಗಳಲ್ಲಿ ಗೆಲ್ಲಿಸಿ ಎಂದು ಕಾರ್ಯಕರ್ತರಿಗೆ ಕೈಮುಗಿದು ಮನವಿ ಮಾಡುತ್ತೇನೆ. ದಯವಿಟ್ಟು ನಿಮ್ಮ ಹೃದಯದ ಮಾತು ಕೇಳಿ.

About Mallikarjun

Check Also

ಗಂಗಾವತಿ, ಕಾರಟಗಿ ತಾಲೂಕಿನ ಪ್ರಗತಿ ಪರಿಶೀಲನೆ ಸಭೆ

Gangavati, Karatagi taluk progress review meeting ಅರ್ಹ ಫಲಾನುಭವಿಗಳಿಗೆ ಯೋಜನೆಗಳ ತಲುಪಿಸಿಜಿಪಂ ಯೋಜನಾ ನಿರ್ದೇಶಕರಾದ ಪ್ರಕಾಶ ವಿ. ಸೂಚನೆ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.