75th Republic Day A preliminary meeting for the celebration

ಅಥಣಿ : ಜ. 26ರಂದು 75ನೇ ಗಣರಾಜ್ಯೋತ್ಸವ ಆಚರಣೆ ಅಂಗವಾಗಿ ಇಂದು ಬೆಳಗ್ಗೆ ಪಟ್ಟಣದ ತಾ.ಪಂ. ಸಭಾಭವನದಲ್ಲಿ ಮಾಜಿ ಉಪಮುಖ್ಯಮಂತ್ರಿಗಳು, ಅಥಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸಂ. ಸವದಿಯವರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಪೂರ್ವಭಾವಿ ಸಭೆ ಜರುಗಿತು.
ಸಭೆಯಲ್ಲಿ ಮಾತನಾಡಿದ ಮಾನ್ಯ ಶಾಸಕರಾದ ಲಕ್ಷ್ಮಣ ಸಂ. ಸವದಿಯವರು, ಗಣರಾಜ್ಯೋತ್ಸವವನ್ನು ತಾಲೂಕಿನ ಜನತೆ ಸಂಭ್ರಮದೊಂದಿಗೆ

ಅರ್ಥಪೂರ್ಣವಾಗಿ ಆಚರಿಸಬೇಕು. ಎಲ್ಲ ಇಲಾಖೆಗಳ ಅಧಿಕಾರಿಗಳು, ನೌಕರರು, ಸಿಬ್ಬಂದಿ ತಪ್ಪದೇ ಪಾಲ್ಗೊಳ್ಳಬೇಕು. ಗಣರಾಜ್ಯೋತ್ಸವದ ಆಚರಣೆಗೆ ಎಲ್ಲರೂ ಸಹಕಾರ ನೀಡಬೇಕು ಎಂದು ಹೇಳಿದರು. ಸಭೆಯಲ್ಲಿ ಗಣರಾಜ್ಯೋತ್ಸವದ ಆಚರಣೆ ಅಂಗವಾಗಿ ಕೈಗೊಳ್ಳಬೇಕಾದ ಪೂರ್ವ ಸಿದ್ಧತೆ ಕುರಿತು ಚರ್ಚಿಸಲಾಯಿತು. ತಹಸೀಲ್ದಾರ್ ವಾಣಿ ಯು., ತಾ.ಪಂ. ಇ.ಒ. ಶಿವಾನಂದ ಕಲ್ಲಾಪುರ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಮೊರಟಗಿ ಸೇರಿದಂತೆ ತಾಲೂಕುಮಟ್ಟದ ಎಲ್ಲ ಅಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಥಣಿ ಶಾಖೆಯ ಕೊ-ಆಪ್ -ಸೊಸೈಟಿಯ 2024ರ ನೂತನ ಕ್ಯಾಲೆಂಡರ್ ಹಾಗೂ ಡೈರಿಯನ್ನು ಬಿಡುಗಡೆಗೊಳಿಸಲಾಯಿತು. ರಾಜ್ಯ ಸರ್ಕಾರಿ ನೌಕರರ ಸಂಘದ ಅಥಣಿ ತಾಲೂಕಾಧ್ಯಕ್ಷರಾದ ಶ್ರೀ ಆರ್.ಎಸ್. ಪಾಟೀಲ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.