Breaking News

ಮಾದಪ್ಪನ ಸನ್ನಿಧಿಯಲ್ಲಿ ಪ್ಲಾಸ್ಟಿಕ್ ನಿಷೇಧಕ್ಕೆ ಕ್ರಮ :ಕಾರ್ಯದರ್ಶಿ ಸರಶ್ವತಿ

Action to ban plastic in Madappa’s presence: Secretary Saraswati.

ಜಾಹೀರಾತು


ವರದಿ : ಬಂಗಾರಪ್ಪ ಸಿ .
ಹನೂರು: ಕ್ಷೇತ್ರ ವ್ಯಾಪ್ತಿಯ ಪ್ರಸಿದ್ದ ಧಾರ್ಮಿಕ ಯಾತ್ರಾಸ್ಥಳವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಪೂರ್ಣ ಪ್ಲಾಸ್ಟಿಕ್ ಮುಕ್ತ ಪ್ರದೇಶವನ್ನಾಗಿ ಮಾಡಲು ಶ್ರೀ ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಹಾಗೂ ಡಿಎಫ್‌ಒ ಡಾ.ಸಂತೋಷ್ ಕುಮಾರ್ ಸ್ಥಳ ಪರಿಶೀಲನೆ ನಡೆಸಿದರು.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ವಲಯ ಎಂದು ಘೋಷಣೆ ಮಾಡಲಾಗಿದೆ. ಆದರೂ ಸಂಪೂರ್ಣವಾಗಿ ಪ್ಲಾಸ್ಟಿಕ್ ಬಳಕೆ ತಡೆಗಟ್ಟಲು ಸಾಧ್ಯವಾಗಿರಲಿಲ್ಲ. ಈ ನಿಟ್ಟಿನಲ್ಲಿ ಹೇಗಾದರೂ ಪ್ಲಾಸ್ಟಿಕ್ ಬಳಕೆಯನ್ನು ತಡೆಗಟ್ಟಲು ಪ್ರಾಧಿಕಾರ ಹಾಗೂ ಅರಣ್ಯ ಇಲಾಖೆಯ ಸಹಯೋಗದಲ್ಲಿ ಚೆಕ್ ಪೋಸ್ಟ್ ನಿರ್ಮಾಣ ಮಾಡಲು ಗುರುವಾರ ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಲಾಯಿತು ,ಈ ಹಿಂದೆ ಚಾಮರಾಜನಗರ ಜಿಲ್ಲಾಧಿಕಾರಿಯಾಗಿದ್ದ ಚಾರುಲತಾ ಸೋಮಲ್ ಅರಣ್ಯ ಇಲಾಖೆಗೆ ತಾಳಬೆಟ್ಟದಲ್ಲಿ ಚೆಕ್ ಪೋಸ್ಟ್ ತೆರೆಯಲು ಆದೇಶ ನೀಡಿದ್ದರು. ಅದರಂತೆ ಗುರುವಾರ ತಾಳಬೆಟ್ಟ ಹಾಗೂ ವಡಕೆಹಳ್ಳದ ಬಳಿ ಸ್ಥಳ ಪರಿಶೀಲನೆ ಮಾಡಲಾಯಿತು.

ಚೆಕ್ ಪೋಸ್ಟ್‌ನಿಂದ ಅನುಕೂಲ: ಶ್ರೀ ಕ್ಷೇತ್ರ ಮಲೆಮದೇಶ್ವರ ಬೆಟ್ಟದ ತಪ್ಪಲಿನ ತಾಳ

ಬೆಟ್ಟದಲ್ಲಿ ಚೆಕ್ ಪೋಸ್ಟ್ ನಿರ್ಮಾಣ ಮಾಡಿದರೆ ಸಾರ್ವಜನಿಕರು ತರುವಂತಹ ಪ್ಲಾಸ್ಟಿಕ್ ಕವರ್ ಗಳು, ಪ್ಲಾಸ್ಟಿಕ್ ವಸ್ತುಗಳು, ತಿಂಡಿ ತಿನಿಸುಗಳ ಕವರ್‌ಗಳನ್ನು ತಪಾಸಣೆ ಮಾಡಿ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ವಶಪಡಿಸಿಕೊಳ್ಳಬಹುದು. ಮಲೆ ಮಹದೇಶ್ವರ ವನ್ಯ ಜೀವಿಧಾಮದ
ಉಪ ಸಂರಕ್ಷಣಾಧಿಕಾರಿ ಚಂದ್ರಶೇಖರ್ ಪಾಟೀಲ್, ವಲಯ ಅರಣ್ಯಾಧಿಕಾರಿ ಭಾರತಿ ನಂದಿಹಳ್ಳಿ. ಸೇರಿದಂತೆ ಇನ್ನಿತರರು ಹಾಜರಿದ್ದರು. ತಾಳಬೆಟ್ಟದಲ್ಲಿ ರಸ್ತೆಯ ಎರಡೂ ಕಡೆಗಳು ಹಾಗೂ ವಡಕೆ ಹಳ್ಳದ ಒಂದು ಕಡೆ ಸ್ಥಳ ಪರಿಶೀಲನೆ ಮಾಡಲಾಗಿದ್ದು, ಸಚಿವರು ಹಾಗೂ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸದುಗ್ರವಾಗಿ ಚರ್ಚೆ ನಡೆಸಿ ಚೆಕ್ ಪೋಸ್ಟ್ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗುವುದು.

-ಡಾ.ಸಂತೋಷ್ ಕುಮಾರ್, ಡಿಎಫ್‌ಒ, ಮಲೆ ಮಹದೇಶ್ವರ ವನ್ಯಜೀವಿಧಾಮ. ಮಹದೇಶ್ವರ ಬೆಟ್ಟದಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ನಿಷೇಧಿಸಲು ಅಭಿವೃದ್ಧಿ ಪ್ರಾಧಿಕಾರ ಹಾಗೂ ಅರಣ್ಯ ಇಲಾಖೆಯ ಸಹಯೋಗದಲ್ಲಿ ಸ್ಥಳ ಹರಿಶೀಲನೆ ಮಾಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ರವರ ಮಾರ್ಗದರ್ಶನದಲ್ಲಿ ಕಮಿಟಿ ರಚನೆ ಮಾಡಿ ಸಂಪೂರ್ಣ ಪ್ಲಾಸ್ಟಿಕ್ ನಿಷೇಧ ಮಾಡಲು ಮುಂದಿನ ದಿನಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು.

-ಸರಸ್ವತಿ, ಕಾರ್ಯದರ್ಶಿ, ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ.

About Mallikarjun

Check Also

ಸುಳ್ವಾಡಿ ವಿಷ ಪ್ರಸಾದ ಪ್ರಕರಣ ಸಾವಿಗೆ ಕಾರಣರಾದ :ಇಮ್ಮಡಿ ಮಹದೇವಸ್ವಾಮಿ ಜಾಮೀನು ಅರ್ಜಿ ಮತ್ತೆ ವಜಾ.

Sulvadi Visha Prasad case: Cause of death: Immadi Mahadevaswamy’s bail application dismissed again. ವರದಿ : …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.