Give Gondali society the position of corporation and board president-Dr.Siddharama Waghamare

ಬೀದರ: ಸ್ವಾತಂತ್ರ್ಯಾ ನಂತರದ ದಿನಗಳಿಂದಲೂ ಗೋಂಧಳಿ ಸಮಾಜ ರಾಜಕೀಯವಾಗಿ ಕಡೆಗಣನೆಗೆ ಒಳಗಾಗಿದೆ. ಈ ಸಮುದಾಯದಲ್ಲಿ ಇದುವರೆಗೆ ಶಾಸಕರಾಗಲಿ, ವಿಧಾನಪರಿಷತ್ ಸದಸ್ಯರಾಗಲಿ, ಸಂಸದರಾಗಲಿ ಯಾರಿಗೂ ಯಾವುದೇ ಪಕ್ಷ ಟಿಕೆಟ್ ನೀಡಿಲ್ಲ. ರಾಜಕೀಯವಾಗಿ ಪ್ರೋತ್ಸಾಹ ನೀಡಿಲ್ಲ. ಅತ್ಯಂತ ಶೋಷಿತ ಸಮುದಾಯವಾದ ಗೋಂಧಳಿ ಸಮಾಜಕ್ಕೆ ಸೇರಿರುವ ನನಗೆ ಈ ಬಾರಿ ನಿಗಮ, ಮಂಡಳಿಗೆ ಅಧ್ಯಕ್ಷ ಸ್ಥಾನ ನೀಡಬೇಕೆಂದು ಡಾ.ಸಿದ್ಧರಾಮ ದಾದಾರಾವ್ ವಾಘಮಾರೆ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಲ್ಲಿ ಮನವಿ ಮಾಡಿದ್ದಾರೆ.
ಮೂಲತಃ ಬೀದರ್ ಜಿಲ್ಲೆ, ಹುಮನಾಬಾದ್ ತಾಲೂಕಿನ ಐತಿಹಾಸಿಕ ಜಲಸಂಗಿ ಗ್ರಾಮದ ನಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಉಪಾಧ್ಯಕ್ಷನಾಗಿ ಅಲೆಮಾರಿ, ಅರೆ ಅಲೆಮಾರಿ ಜನಾಂಗದವರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ನನಗೆ ಶೋಷಿತ ಸಮಾಜದ ಮತ್ತು ಕಾಂಗ್ರೆಸ್ ಪಕ್ಷದ ಸಂಘಟನೆಗಾಗಿ ಯಾವುದಾದರೂ ನಿಗಮ ಮಂಡಳಿಗೆ ಅಧ್ಯಕ್ಷನನ್ನಾಗಿ ನಿಯುಕ್ತಿಗೊಳಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಸಣ್ಣ ಸಣ್ಣ ಸಮುದಾಯಗಳ ಅಭಿವೃದ್ದಿಗೆ ಶ್ರಮಿಸುತ್ತಿದೆ. ಈ ಬಗ್ಗೆ ಚುನಾವಣಾ ಪ್ರಣಾಳಿಕೆಯಲ್ಲಿಯೇ ಪ್ರಸ್ತಾಪವಾಗಿದೆ. ಸಾಮಾಜಿಕ ನ್ಯಾಯದ ಅಡಿಯಲ್ಲಿ ಕಾಂಗ್ರೆಸ್ ಪಕ್ಷ ಜಾತ್ಯಾತೀತವಾಗಿರುವ ಪಕ್ಷ. ಸಣ್ಣ ಸಣ್ಣ ಜಾತಿಗಳಿಗೆ ಉತ್ತೇಜನ ನೀಡುತ್ತಿದೆ. ಸಿಎಂ, ಡಿಸಿಎಂ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷರು ನನಗೆ ನಿಗಮ, ಮಂಡಳಿಗೆ ಅಧ್ಯಕ್ಷನನ್ನಾಗಿ ಮಾಡುತ್ತಾರೆ ಎನ್ನುವ ನಂಬಿಕೆ ಇದೆ. ನಮ್ಮ ಕಾಂಗ್ರೆಸ್ ಪಕ್ಷ ನನ್ನನ್ನು ಕಡೆಗಣಿಸುವುದಿಲ್ಲ. ನಮ್ಮ ಪಕ್ಷದ ವರಿಷ್ಠರು ನಮ್ಮ ಮನವಿ ಪರಿಗಣಿಸಿ ಆದ್ಯತೆ ನೀಡುತ್ತಾರೆ ಎನ್ನುವ ನಂಬಿಕೆ ಇದೆ ಎಂದರು.
ಎಐಸಿಸಿ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ರಾಷ್ಟ್ರೀಯ ಅದ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಸಣ್ಣ ಸಣ್ಣ ಸಮುದಾಯಗಳನ್ನು ಗುರುತಿಸಿ ಮನ್ನಣೆ ನೀಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೂ ಸಹ ಸಣ್ಣ ಸಣ್ಣ ಸಮುದಾಯಗಳ ಸಬಲೀಕರಣದ ಹರಿಕಾರರಾಗಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಮಾಜಿ ಶಾಸಕರಾದ ರಾಜಶೇಖರ ಪಾಟೀಲ್, ಕೆಪಿಸಿಸಿ ನಾಯಕರಾದ ರಹೀಂ ಖಾನ್ ಮೊದಲಾದವರು ಸಣ್ಣ ಸಮುದಾಯಗಳಿಗೆ ರಾಜಯಕೀಯ ಪ್ರಾತಿನಿಧ್ಯ ನೀಡುತ್ತಿದ್ದಾರೆ. ಹೀಗಾಗಿ, ನಿಗಮ ಮಂಡಳಿಗೆ ನನ್ನನ್ನು ಅಧ್ಯಕ್ಷನನ್ನಾಗಿ ನಿಯುಕ್ತಿಗೊಳಿಸುತ್ತಾರೆ ಎನ್ನುವ ವಿಶ್ವಾಸವಿದೆ. ನಮಗೆ ಹಣ ಬಲ ಇಲ್ಲ, ತೋಳ್ಬಲ ಇಲ್ಲ. ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದೇನೆ. ಸಿದ್ಧರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ಮೇಲೆ ನನಗೆ ಅಪಾರವಾದ ನಂಬಿಕೆ ಇದೆ. ಹೀಗಾಗಿ ಅವರಲ್ಲಿ ಈ ಕುರಿತು ಮನವಿ ಮಾಡುತ್ತಿದ್ದೇನೆ ಎಂದರು.