Breaking News

ಉತ್ತಮ ಫಲಿತಾಂಶಕ್ಕೆ ವ್ಯಾಸಂಗ ಕಡೆ ಗಮನ ನೀಡುವಂತೆವಿದ್ಯಾರ್ಥಿಗಳಿಗೆ ಶಾಸಕ ಎಮ್ ಆರ್ ಮಂಜುನಾಥ್ ಸಲಹೆ

MLA MR Manjunath advises students to focus on studies for better results.


ವರದಿ : ಬಂಗಾರಪ್ಪ ಸಿ ಹನೂರು .
ಹನೂರು :ಮಕ್ಕಳು ಚಿಕ್ಕ ವಯಸ್ಸಿನಲ್ಲಿ ಓದುವ ಕಡೆ ಹೆಚ್ಚು ಗಮನ ಹರಿಸಿದರೆ ಉತ್ತಮ ಅಲ್ಲದೆ ಶಿಕ್ಷಕರ ಶ್ರಮ ಮತ್ತು ಮಾರ್ಗದರ್ಶನವನ್ನು ಅರಿತು ವಿದ್ಯಾರ್ಥಿಗಳು ಕ್ರಿಯಾಶೀಲರಾಗಬೆಕು,
ವಾರ್ಷಿಕ ಪರೀಕ್ಷೆಗಳಿಗೆ ಇನ್ನು ಕೆಲವೇ ದಿನಗಳು ಉಳಿದಿದ್ದು ವಿದ್ಯಾರ್ಥಿಗಳು ಈಗಿನಿಂದಲೇ ವಿಷಯವಾರು ವಿಷಯಕ್ಕೆ ಆದ್ಯತೆಯನ್ನು ನೀಡಿದರೆ ಉತ್ತಮ ಫಲಿತಾಂಶ ಪಡೆಯ ಬಹುದು ಎಂದು ಶಾಸಕ ಎಂ.ಆರ್.ಮಂಜುನಾಥ್ ಸಲಹೆ ನೀಡಿದರು.
ಹನೂರು ತಾಲ್ಲೂಕಿನ ಮಾರ್ಟಳ್ಳಿಯ ಸೆಂಟ್ ಜೋಸೆಫ್ ಶಾಲೆ ಮತ್ತು ಹೂಗ್ಯಂ ಮೊರಾರ್ಜಿ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ   ಎಸ್.ಎಸ್.ಎಲ್.ಸಿ / ಪಿ ಯು ಸಿ ಮಕ್ಕಳಿಗೆ ಭರವಸೆ ತುಂಬುವ ಕಾರ್ಯಕ್ರಮ  ಹಾಗೂ  ಪೋಕ್ಸೋ ಕಾಯ್ದೆಯ ಬಗ್ಗೆ ಮಕ್ಕಳಿಗೆ ಜಾಗೃತಿ ಮೂಡಿಸುವ ಹಾಗೂ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶಕ್ಕಾಗಿ ಆಯೋಜಿಸಲಾಗಿದ್ದ ಭರವಸೆ ತುಂಬುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು
ವಿದ್ಯಾರ್ಥಿಗಳು ತಮ್ಮ ತಂದೆ ತಾಯಿಗಳ ತ್ಯಾಗ ಶ್ರಮದಿಂದಾಗಿ ಶಿಕ್ಷಕರ ಶ್ರಮ ಮತ್ತು ಮಾರ್ಗದರ್ಶನವನ್ನು ಅರಿತು ನಿರಂತರ ಅಧ್ಯಯ ನದಲ್ಲಿ ತೊಡಗಿಸಿಕೊಳ್ಳಬೇಕು. ಪಟ್ಟಣ ಪ್ರದೇಶಗಳಿಗೆ ಹೋಲಿಕೆ ಮಾಡಿದರೆ ಉತ್ತಮವಾದ ಪರಿಸರ ವಾತಾವರ ಣವನ್ನು ಹೊಂದಿರುವ ಗ್ರಾಮೀಣಭಾಗದ ವಿದ್ಯಾರ್ಥಿಗಳು ಪ್ರಕೃತಿಯನ್ನೇ ಶಕ್ತಿಯನ್ನಾಗಿಸಿ ಮುನ್ನುಗ್ಗಬೇಕು. ಬರೆದಿರುವುದನ್ನು ಓದಿ, ಓದಿದ್ದನ್ನು ಮನನಮಾಡಿಕೊಂಡು ಉತ್ತಮ ರೀತಿಯಲ್ಲಿ ಪರೀಕ್ಷೆಯನ್ನು ಎದುರಿಸಬೇಕು. ನಮ್ಮ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಮತ್ತು ಗಣಿತ ವಿಷಯಗಳಲ್ಲಿ ಪ್ರಬುದ್ಧತೆ ಸಾಧಿಸುವ ನಿಟ್ಟಿನಲ್ಲಿ ಕಾರ್ಯಗಾರಗಳನ್ನು ಕೈಗೊಳ್ಳಬೇಕಾದ ಅವಶ್ಯಕತೆ ಇದೆ. ನನ್ನ ಮೊದಲ ಆದ್ಯತೆ ಶಿಕ್ಷಣ, ಆರೋಗ್ಯ, ರೈತ ಆಗಿದ್ದು, ಶಿಕ್ಷಣ ಇಲಾಖೆಗೆ ಬೇಕಾದ ಸಹಕಾರವನ್ನು ನಾನು ಸದಾ ಒದಗಿಸುತ್ತೇನೆ ಎಂದರು ಫಾದರ್ ಟೆನ್ನಿ ಕುರಿಯನ್ ನಿಮಗೆಲ್ಲ ಆದರ್ಶ ಎಂಬುದನ್ನು ತಿಳಿಸಿದರು.

ವಿದ್ಯಾರ್ಥಿಗಳಿಂದ ಉತ್ತಮ ಫಲಿತಾಂಶ ಭರವಸೆ . ಎಸ್ಎಸ್ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬುವ ದಿಸೆಯಲ್ಲಿ ಆಯೋಜಿಸಲಾಗಿದ್ದ ಭರವಸೆ ತುಂಬುವ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮದಿಂದ ನಮಗೆ ನಿಜಕ್ಕೂ ಸ್ಫೂರ್ತಿ, ಧೈರ್ಯ ಆತ್ಮವಿಶ್ವಾಸ ಮೂಡಿದೆ ಖಂಡಿತ ನಾವು ಉತ್ತಮ ಫಲಿತಾಂಶ ತಂದು ನಾವು ಓದಿದ ಶಾಲೆ, ಕಾಲೇಜು, ಶಿಕ್ಷಕರು, ತಂದೆ ತಾಯಿ, ನಿಮ್ಮೆಲ್ಲರಿಗೂ ಕೀರ್ತಿ ತರುತ್ತೇವೆ ಎಂದು ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಫಾದರ್ ಟೆನ್ನಿ ಕುರಿಯನ್, ಉಪನಿರ್ದೇಶಕ ರಾಮಚಂದ್ರರಾಜೆ ಅರಸು, ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು, ಶಿಕ್ಷಣ ಸಂಯೋಜಕ ಕಿರಣ್ ಕುಮಾರ್‌ ಸೇರಿದಂತೆ ಇತರರು ಹಾಜರಿದ್ದರು.

About Mallikarjun

Check Also

ಗಡ್ಡಿ ಯಲ್ಲಿ ಉಚಿತವಾಗಿ ಅಯ್ಯಾಚಾರ ಮತ್ತು ಶಿವ ದೀಕ್ಷೇ ಯನ್ನು ಹಮ್ಮಿಕೊಳ್ಳಲಾಯಿತು

Ddharma Sri Ajata Appaji’s holy shrine Sri Kshetra Gaddi was offered free Ayyachar and Shiva …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.