Breaking News

ವಿವಿಧತೆಯಲ್ಲಿ ಏಕತೆ ಹೊಂದಿದ ರಾಷ್ಟ್ರ ಭಾರತ: ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ

India, a nation united in diversity: District In-charge Minister B. Nagendra

ಬಳ್ಳಾರಿ ಜಿಲ್ಲೆಯಲ್ಲಿ 75 ನೇ ಗಣರಾಜ್ಯೋತ್ಸವ ಧ್ವಜಾರೋಹಣ ಮಾಡಿದ ಸಚಿವ ಬಿ. ನಾಗೇಂದ್ರ

ಬಳ್ಳಾರಿ,ಜ,26: ಹೆಚ್.ಆರ್.ಗವಿಯಪ್ಪ ವೃತ್ತದಲ್ಲಿ ಬೃಹತ್ ಸ್ತಂಭದಲ್ಲಿ ಧ್ವಜಾರೋಹಣ ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ
ಬಳ್ಳಾರಿ,ಜ.26

75 ನೇ ಗಣರಾಜ್ಯೋತ್ಸವದ ಅಂಗವಾಗಿ ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು, ನಗರದ ಹೆಚ್.ಆರ್.ಗವಿಯಪ್ಪ ವೃತ್ತದ ಬೃಹತ್ ಧ್ವಜ ಸ್ತಂಭದಲ್ಲಿ ಶುಕ್ರವಾರ ಧ್ವಜಾರೋಹಣ ನೆರವೇರಿಸಿದರು.
ಇದಕ್ಕೂ ಮುನ್ನ ನಗರದ ಡಾ.ರಾಜ್ ಕುಮಾರ್ ಉದ್ಯಾನವನದಲ್ಲಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಮಹಾನಗರ ಪಾಲಿಕೆಯ ಮಹಾಪೌರರಾದ ಬಿ.ಶ್ವೇತ, ಉಪ ಮಹಾಪೌರರಾದ ಬಿ.ಜಾನಕಿ, ಬಳ್ಳಾರಿ ವಲಯ ಪೆÇಲೀಸ್ ಮಹಾನೀರಿಕ್ಷಕರಾದ ಬಿ.ಎಸ್.ಲೋಕೇಶ್ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್, ಸಹಾಯಕ ಆಯುಕ್ತ ಹೇಮಂತ್ ಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಮಹಾನಗರ ಪಾಲಿಕೆಯ ಸದಸ್ಯರು, ಜನಪ್ರತಿನಿಧಿಗಳು ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

About Mallikarjun

Check Also

ವೈದ್ಯರ ಭಾರವನ್ನು ಕಡಿಮೆ ಮಾಡುವವರು ಶುಶ್ರೂಷಕಿಯರು : ಡಾ.ಲಿಂಗರಾಜ್‌ಸರ್ಕಾರಿ ಉಪವಿಭಾಗಆಸ್ಪತ್ರೆಯಲ್ಲಿ ವಿಶ್ವ ದಾದಿಯರ ದಿನಾಚರಣೆ

ಗಂಗಾವತಿ,14:ವೈದ್ಯರ ಭಾರವನ್ನು ಕಡಿಮೆ ಮಾಡುವವರು ಶುಶ್ರೂಷಕಿಯರು, ಅವರಿಗೆ ಗೌರವ ಸಲ್ಲಿಸಲೆಂದೇ ಪ್ರತಿ ವರ್ಷ ಮೇ.12 ರಂದು ಅಂತಾರಾಷ್ಟ್ರೀಯ ಶುಶ್ರೂಷಕಿಯರ ದಿನವನ್ನು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.