Breaking News

ಜೇವರ್ಗಿ ಅಂಬೇಡ್ಕರ್ ಮೂರ್ತಿಗೆ ಅವಮಾನ :ಗಡಿಪಾರಿಗೆ ಹುಲಿಗೇಶ್ ದೇವರಮನಿ ಆಗ್ರಹ

Insult to Jewargi Ambedkar Murthy: Huligesh Devarmani demands deportation

ಗಂಗಾವತಿ: ಕಲಬುರ್ಗಿ ನಗರದ ಜೇವರ್ಗಿ ರಸ್ತೆಯಲ್ಲಿರುವ ವಿಶ್ವ ನಾಯಕ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಸೋಮವಾರ ರಾತ್ರಿ ಸಮಯದಲ್ಲಿ ದುಷ್ಕರ್ಮಿಗಳು ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿರುತ್ತಾರೆ. ಇಂತಹ ಕೃತ್ಯ ಎಸೆತ ಕಿಡಿಗೇಡಿಗಳನ್ನು ಪತ್ತೆಹಚ್ಚಿ ಅಂತವರ ವಿರುದ್ಧ ಸೂಕ್ತ ಕ್ರಮ ಜರುಗಿಸಿ ಗಡಿಪಾರು ಮಾಡುವಂತೆ ಇಂದು ತಹಶೀಲ್ದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ದಲಿತ ಪರ ಸಂಘಟನೆಗಳ ವತಿಯಿಂದ ಮನವಿ ಪತ್ರ ಸಲ್ಲಿಸಲಾಯಿತು.
ಮನವಿ ಸಲ್ಲಿಸಿ ಮಾತನಾಡಿದ ಕೊಪ್ಪಳ ಜಿಲ್ಲಾ ಬಿಎಸ್‌ಪಿ ಸಂಯೋಜಕ ಹುಲಿಗೇಶ್ ದೇವರಮನಿ, ಇವರು ವಿಶ್ವರತ್ನ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭಾರತದ ಸಮಗ್ರ ಅಭಿವೃದ್ಧಿಗೆ, ಸರ್ವಜನತೆಯ ಸಮಾನತೆಗಾಗಿ ಹೋರಾಟ ಮಾಡಿದಂತಹ ಮಹಾನಾಯಕ. ಎಲ್ಲಾ ಜಾತಿ ಜನಾಂಗದವರಿಗೆ ಸಮಾನವಾಗಿ ಹಕ್ಕು, ಅವರು ಬರೆದಂತಹ ಸಂವಿಧಾನದ ಮಹಾಗ್ರಂಥವನ್ನು ನಮ್ಮ ದೇಶಕ್ಕೆ ಕೊಡುಗೆಯಾಗಿ ಕೊಟ್ಟಿದ್ದಾರೆ. ಅದರಲ್ಲಿ ಎಲ್ಲರಿಗೂ ಸಮಾನವಾದ ಹಕ್ಕು ನೀಡಿದ್ದಾರೆ. ಅಂತಹ ಮಹಾನ್ ನಾಯಕ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಪ್ರತಿಮೆಗೆ ಅಪಮಾನ ಮಾಡುವ ಮೂಲಕ ಭಾರತದ ಸಂವಿಧಾನವನ್ನು ಹಾಗೂ ಸಮಾನತೆಯನ್ನು ವಿರೋಧಿಸುವ ಮನೋಭಾವ ಇದರಲ್ಲಿ ಸ್ಪಷ್ಟವಾಗಿದೆ ಎಂದರು.
ಭಾರತವನ್ನು ಕೋಮುವಾದಿ ನೆಲೆಯಲ್ಲಿ ವಿಚ್ಛಿದ್ರಗೈಯುತ್ತಿರುವ ಸಂವಿಧಾನ ವಿರೋಧಿ ಮನುವಾದಿ ಮನಸುಗಳು ಇಂತಹ ದುಷ್ಕೃತ್ಯ ಪದೇ ಪದೇ ಮರುಕಳಿಸುತ್ತವೆ ಮತ್ತು ಇಂತಹ ಘಟನೆಯು ಕೂಡ ಸುಮಾರು ಎರಡು ವಾರದ ಹಿಂದೆ ಗಂಗಾವತಿ ನಗರದ ಕೋರ್ಟ್ ಮುಂಭಾಗದಲ್ಲಿರುವ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಮೂರ್ತಿಗೆ ಟೊಮೋಟೊ ಸಾರ್ಸ್ ಎರಚಿ ಅವಮಾನ ಮಾಡಿರುತ್ತಾರೆ. ಇಂತಹ ಘಟನೆಗಳು ಪದೇ ಪದೇ ನಮ್ಮ ದೇಶದಲ್ಲಿ ಮರುಕಳಿಸುತ್ತಿವೆ. ಇದಕ್ಕೆ ಕಾರಣ ನಮ್ಮನ್ನು ಆಳುವಂತಹ ಸರ್ಕಾರವೇ ಕಾರಣ ಎಂದು ಹೇಳಿದರು. ಗಂಗಾವತಿ ಘಟನೆ ನಡೆದು ಸುಮಾರು ದಿನಗಳಾದರೂ ಕೂಡ ಇದುವರೆಗೂ ಅವಮಾನ ಮಾಡಿದ ಕಿಡಿಗೇಡಿಗಳನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ ಮತ್ತು ಸಂಬAಧಪಟ್ಟ ತಹಸಿಲ್ದಾರರು ಕೂಡ ಇದರ ಬಗ್ಗೆ ಒಂದು ಸಾರಿಯೂ ಕೂಡ ದಲಿತರನ್ನು ಮೀಟಿಂಗ್ ಕರೆದು ಯಾರೇ ಕಿಡಿಗೇಡಿಗಳ ಆಗಲಿ ಅಂತವರನ್ನು ಪತ್ತೆ ಹಚ್ಚಿ ಬಂದಿಸುತ್ತೇವೆ ಎಂದು ಹೇಳಿಕೆ ನೀಡದಿರುವುದು ದುರಾದೃಷ್ಟಕರ ಎಂದು ಕಿಡಿಕಾರಿದರು.
ಈ ಘಟನೆಯ ಬಗ್ಗೆ ನಿರ್ಲಕ್ಷö್ಯ ಧೋರಣೆ ಅನುಸರಿಸುತ್ತಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸಂದರ್ಭದಲ್ಲಿ ಹುಸೇನಪ್ಪ ಹಂಚಿನಾಳ ವಕೀಲರು, ಡಿ.ಭೋಜಪ್ಪ, ಹುಲುಗಪ್ಪ ಮಾಗಿ ವಕೀಲರು, ಬಸವರಾಜ ಚಲವಾದಿ, ಹಂಪೇಶ ಹರಗೋಲು, ಹನುಮಂತ ಮೂಳೆ, ಹೊನ್ನೂರಪ್ಪ ಢಣಾಪುರ. ಯಮನೂರ್ ಭಟ್ ಹಾಗು ವೀರೇಶ ಆರತಿ ಸೇರಿದಂತೆ ಇತರ ಪ್ರಗತಿಪರ ಹೋರಾಟಗಾರರು ಭಾಗವಹಿಸಿದ್ದರು.

About Mallikarjun

Check Also

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ. ಅಪಾರ ಪ್ರಮಾಣದಲ್ಲಿ ನಷ್ಟ.

ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಕುಪ್ಪಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಟ್ಟಿಗೆಹಳ್ಳಿ ಗ್ರಾಮದ ದಲಿತ ಸಮುದಾಯದ ಕೆಂಪರಾಮಯ್ಯ ಸನ್ ಆಫ್ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.