Frontier Festival program at Malai Mahadeshwar Hill by Karnataka State Government Employees Association Bangalore.
ವರದಿ :ಬಂಗಾರಪ್ಪ ಸಿ
ಹನೂರು .ಸರ್ಕಾರಿ ನೌಕರರ ಸಂಘ ಆಯೋಜಿಸುವ ಬಗ್ಗೆ ದಿನಾಂಕ ಸ್ಥಳ ಇನ್ನಿತರ ವಿಚಾರಗಳ ಬಗ್ಗೆ ಪೂರ್ವಭಾವಿ ಸಭೆಯನ್ನು ಪ್ರಾಧಿಕಾರದ ಕಾರ್ಯದರ್ಶಿಗಳಾದ ಶ್ರೀಮತಿ ಸರಸ್ವತಿಯವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸೇರಿ ಚರ್ಚಿಸಿದರು .
ಪ್ರಾಧಿಕಾರದ ನೌಕರರ ಸಭೆಯಲ್ಲಿ ಈ ವಿಷಯವಾಗಿ ಚರ್ಚಿಸಲಾಗಿ ಅದ್ದೂರಿಯಾಗಿ ಅರ್ಥಪೂರ್ಣವಾಗಿ ಕಾರ್ಯಕ್ರಮವನ್ನು ಆಯೋಜಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.. ಈ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಜಿಲ್ಲೆ ತಾಲ್ಲೂಕುಗಳಿಂದ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಸರ್ಕಾರಿ ನೌಕರರು ಆಗಮಿಸುವುದರಿಂದ ಅಗತ್ಯವಾದ ವಸತಿ ಊಟ ಇನ್ನಿತರೆ ವ್ಯವಸ್ಥೆಗಳನ್ನು ಕಲ್ಪಿಸಲು ಸೂಕ್ತ ಕ್ರಮ ಕೈಗೊಳ್ಳಲು ಪ್ರಾಧಿಕಾರದ ಕಾರ್ಯದರ್ಶಿಗಳಾದ ಶ್ರೀಮತಿ ಸರಸ್ವತಿಯವರು ಅಗತ್ಯ ಸಲಹೆ ಸೂಚನೆ ನೀಡಿದರಲ್ಲದೆ, ದೇವಸ್ಥಾನದಲ್ಲಿ ಜನಸಂದಣಿ ಇಲ್ಲದ ದಿನವನ್ನು ಆಯ್ಕೆ ಮಾಡಿಕೊಂಡು ಆ ದಿನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲು ಸೂಚಿಸಿದರು. ಈ ವಿಷಯವಾಗಿ ಸಚಿವರು ಮತ್ತು ಶಾಸಕರ ಸಲಹೆ ಸೂಚನೆ ಮಾರ್ಗದರ್ಶನ ಪಡೆಯಲು ಕೂಡ ಇದೆ ವೇಳೆ ತಿಳಿಸಿದರು… ಈ ಸಂದರ್ಭದಲ್ಲಿ ಮಾತಾಡಿದ ಜಿಲ್ಲಾಧ್ಯಕ್ಷರಾದ ಶ್ರೀ ಚಂದ್ರಶೇಖರ್ ರಾಜ್ಯ ಸಂಘದ ವತಿಯಿಂದ ಕಳೆದ ಬಾರಿ ರಾಯಚೂರಿನಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮಹದೇಶ್ವರ ಸನ್ನಿಧಿಯಲ್ಲಿ ಈ ಕಾರ್ಯಕ್ರಮವನ್ನು ನಡೆಸಲು ಮಾನ್ಯ ರಾಜ್ಯ ಅಧ್ಯಕ್ಷರಾದ ಷಡಾಕ್ಷರಿ ಸೂಚಿಸಿದ್ದು ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಘಟಕದ ಅಧ್ಯಕ್ಷರಾದ ಗುರುಸ್ವಾಮಿ ಕಾರ್ಯಕ್ರಮ ಅಚ್ಚುಕಟ್ಟಾಗಿ ಮೂಡಿ ಬರಲು ಅಗತ್ಯ ಸಹಕಾರ ಮತ್ತು ಜವಾಬ್ದಾರಿಯನ್ನು ಹನೂರು ತಾಲೂಕು ಘಟಕ ನಿರ್ವಹಿಸಬಲ್ಲದು ಎಂಬ ಭರವಸೆಯನ್ನು ನೀಡಿದರಲ್ಲದೇ, ಬಹುತೇಕ ಕಾಡಂಚಿನಿಂದ ಕೂಡಿದ ಹನೂರು ತಾಲೂಕನ್ನು ಆಯ್ಕೆ ಮಾಡಿಕೊಂಡಿದ್ದಕ್ಕಾಗಿ ಮಾನ್ಯ ಜಿಲ್ಲಾಧ್ಯಕ್ಷರು ಹಾಗೂ ರಾಜ್ಯ ಅಧ್ಯಕ್ಷರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು..ಕಾರ್ಯಕ್ರಮ ಆಯೋಜನೆ ಹಾಗೂ ಕಾರ್ಯಕ್ರಮದ ರೂಪುರೇಷೆಗಳ ಕುರಿತು ಸಭೆಗೆ ಸಂಪೂರ್ಣ ಮಾಹಿತಿಯನ್ನು ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಯುತ ಮಹದೇವಸ್ವಾಮಿ ಸವಿವರವಾಗಿ ನೀಡಿದರು . ಇದೇ ಸಮಯದಲ್ಲಿ ಸಂದರ್ಭದಲ್ಲಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ್ . ಕ್ರೀಡಾ ಕಾರ್ಯದರ್ಶಿಗಳಾದ ರಕ್ಷಿತ್ .ತಾಲೂಕು ಘಟಕದ ನಿಯೋಜಿತ ಕಾರ್ಯದರ್ಶಿಗಳು ಹಾಗೂ ಖಜಾಂಚಿಗಳಾದ ಚಂದ್ರಶೇಖರ್. ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಅಶೋಕ್ . ಸಂಘಟನಾ ಕಾರ್ಯದರ್ಶಿಯಾದ ಪ್ರೀತಂ . ಹಾಗೂ ನಾಮ ನಿರ್ದೇಶಿತ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾದ ವೆಂಕಟೇಶ್ .ನಿಕಟ ಪೂರ್ವ ಹನೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಶ್ರೀನಿವಾಸ ನಾಯ್ಡು ,ಆಶೋಕ್ ಸೇರಿದಂತೆ , ಇನ್ನಿತರರು ಹಾಜರಿದ್ದರು.