Breaking News

ಬೆಂಗಳೂರಿನಲ್ಲಿ ಅಮ್ಮಾಜೇಶ್ವರಿ (ಕೊಟ್ಟಲಗಿ) ಏತ ನೀರಾವರಿ 2ನೇ ಹಂತದ ಯೋಜನೆ ಕೈಗೊಳ್ಳುವ ಕುರಿತು ಮಾಜಿ ಡಿಸಿಎಂ, ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸಂ. ಸವದಿ ನೇತೃತ್ವದಲ್ಲಿ ಅಧಿಕಾರಿಗಳ ಸಭೆ

Former DCM, MLA Hon’ble Mr. Lakshman No. about the implementation of 2nd phase of Ammajeshwari (Kottalagi) Eta Irrigation Project in Bangalore. A meeting of officials led by Savadi

ಅಥಣಿ : ತಾಲೂಕಿನ ಪೂರ್ವ ಭಾಗದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯಾದ ಅಮ್ಮಾಜೇಶ್ವರಿ (ಕೊಟ್ಟಲಗಿ) ಏತ ನೀರಾವರಿಯ 2ನೇ ಹಂತದ ಕಾಮಗಾರಿ ಕೈಗೊಳ್ಳುವ ಕುರಿತು ಬೆಂಗಳೂರಿನ ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯಲ್ಲಿ ಮಾಜಿ ಉಪಮುಖ್ಯಮಂತ್ರಿಗಳು, ಹಸಿರುಕ್ರಾಂತಿ ಹರಿಕಾರರು, ಅಥಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸಂ. ಸವದಿಯವರ ನೇತೃತ್ವದಲ್ಲಿ ಇಂದು ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ಜರುಗಿತು.
ಅಮ್ಮಾಜೇಶ್ವರಿ (ಕೊಟ್ಟಲಗಿ) ಏತ ನೀರಾವರಿ ಯೋಜನೆಗೆ ಮೊದಲನೇ ಹಂತದಲ್ಲಿ 900 ಕೋಟಿ ರೂ. ಮಂಜೂರಾಗಿದ್ದು, ಒಟ್ಟು 1487 ಕೋಟಿ ರೂ. ವೆಚ್ಚದಲ್ಲಿ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. 2ನೇ ಹಂತದಲ್ಲಿ 587 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಯನ್ನು ಕೈಗೊಳ್ಳುವ ಕುರಿತು ಹಾಗೂ ಕಾಮಗಾರಿಯ ರೂಪು ರೇಷೆಯ ಬಗ್ಗೆ ವಿಸ್ತೃತವಾಗಿ ಸಭೆಯಲ್ಲಿ ಚರ್ಚಿಸಲಾಯಿತು. ಈ ಯೋಜನೆಯಿಂದ ಅಥಣಿ ಪೂರ್ವ ಭಾಗದಲ್ಲಿನ ಹಳ್ಳಿಗಳಾದ ಕೊಟ್ಟಲಗಿ, ಕಕಮರಿ, ಐಗಳಿ, ಅಡಹಳ್ಳಿ, ಅಡಹಳಟ್ಟಿ, ಕೋಹಳ್ಳಿ, ಕನ್ನಾಳ, ತೆಲಸಂಗ, ಫಡತರವಾಡಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಗೆ ನೀರಾವರಿ ಸೌಲಭ್ಯ ಸಿಗಲಿದೆ. ಸುಮಾರು 72 ಸಾವಿರ ಎಕರೆಗೂ ಹೆಚ್ಚು ಜಮೀನುಗಳಿಗೆ ನೀರಾವರಿ ಸೌಲಭ್ಯ ದೊರಕಲಿದೆ. ಶೀಘ್ರದಲ್ಲಿಯೇ ಕಾಮಗಾರಿಗೆ ಚಾಲನೆ ನೀಡಿ, 2 ವರ್ಷದೊಳಗಾಗಿ ಪೂರ್ಣಗೊಳಿಸಲು ನಿರ್ಧರಿಸಲಾಗಿದ್ದು, ಈ ಭಾಗದ ರೈತರ ಬಹುದಿನಗಳ ನೀರಾವರಿ ಕನಸು ನನಸಾಗುವ ಕಾಲ ಸನ್ನಿಹಿತವಾಗಿದೆ.
ಸಭೆಯಲ್ಲಿ ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ರಾಜೇಶ ಅಮ್ಮಿನಬಾವಿ, ಮುಖ್ಯ ಇಂಜಿನಿಯರ್‌ರಾದ ಬಿ .ಆರ್. ರಾಠೋಡ, ಕಾರ್ಯನಿರ್ವಾಹಕ ಇಂಜಿನಿಯರ್ ಎಸ್.ಜಿ. ಶ್ರೀನಾಥ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರವೀಣ ಹುಣಸೀಕಟ್ಟಿ, ಸಹಾಯಕ ಇಂಜಿನಿಯರ್ ಭರತೇಶ ಮಹಿಷವಾಡಗಿ, ಇ.ಐ. ಟೆಕ್ನಾಲಜಿ ವಿಭಾಗದ ಸಂದೀಪ ನಾಡಿಗೇರ ಸೇರಿದಂತೆ ನೀರಾವರಿ ಇಲಾಖೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

About Mallikarjun

Check Also

ಮತದಾನ ಮಾಡದವರ ಪೌರತ್ವ ನಿಷೇಧಿಸಿ: ಸಗ್ರೀವಾ

ಗಂಗಾವತಿ.ಮೇ.06: ಲೋಕಸಭಾ ಚುನಾವಣೆ ನಿಮಿತ್ತ ಮೇ.07ರಂದು ನಡೆಯುವ ಮತದಾನದಲ್ಲಿ ಎಲ್ಲರೂ ಉತ್ಸಾಹದಿಂದ ಪಾಲ್ಗೊಂಡು ಮತ ಚಲಾಯಿಸಬೇಕು. ಮತದಾನ ಮಾಡದೆ ಹೊರ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.