Breaking News

ಕೂಲಿಕಾರರಿಂದ ಕೇಕ್ ಕತ್ತರಿಸುವ ಮೂಲಕ ನರೇಗಾ ದಿವಸ್ ಆಚರಣೆ

Narega Divas celebration with cake cutting by laborers

ಆರೋಗ್ಯ ಶಿಬಿರ, ಮತದಾನ ಜಾಗೃತಿ ಕಾರ್ಯಕ್ರಮ ಆಯೋಜನೆ ಆರೋಗ್ಯ ಶಿಬಿರದ ಸೌಲಭ್ಯ ಪಡೆದುಕೊಳ್ಳಿ ತಾಪಂ ಸಹಾಯಕ ನಿರ್ದೇಶಕರಾದ (ಗ್ರಾ.ಉ) ಸಂತೋಷ ಕುಮಾರ್ ಹತ್ತರಕಿ ಸಲಹೆ

ಗಂಗಾವತಿ : ತಾಲೂಕಿನ ಹೇರೂರು ಗ್ರಾಪಂ ವ್ಯಾಪ್ತಿಯ ಕೂಲಿಕಾರರು ಕೆಲಸ ನಿರ್ವಹಿಸುವ ಕಲಕೇರಿ ಕೆರೆ ಹೂಳೆತ್ತುವ ಸ್ಥಳದಲ್ಲಿ ಶುಕ್ರವಾರ ನರೇಗಾ ದಿವಸ್ ಆಚರಣೆಯನ್ನು ಕೂಲಿಕಾರರಿಂದ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು.

ಕೂಲಿಕಾರರಿಗೆ ಆರೋಗ್ಯ ಶಿಬಿರ, ವಿಮೆ ಸೌಲಭ್ಯಗಳ ಮಾಹಿತಿ ಹಾಗೂ ಇವಿಎಂ, ವಿವಿಪ್ಯಾಟ್ ಪ್ರಾತ್ಯಕ್ಷಿಕೆ, ಮತದಾನ ಜಾಗೃತಿ ಕಾರ್ಯಕ್ರಮ ಮಾಡುವ ಮೂಲಕ ನರೇಗಾ ದಿವಸ್ ಅರ್ಥಪೂರ್ಣವಾಗಿ ಆಚರಿಸಲಾಯಿತು.
ತಾಪಂ ಸಹಾಯಕ ನಿರ್ದೇಶಕರಾದ (ಗ್ರಾ.ಉ) ಸಂತೋಷ ಕುಮಾರ್ ಹತ್ತರಕಿ ಅವರು, ಗ್ರಾಮೀಣ ಭಾಗದ ಬಡವರು ಇದ್ದೂರಲ್ಲೇ ನೆಮ್ಮದಿ ಜೀವನ ನಡೆಸಲು ನರೇಗಾ ಯೋಜನೆ ಸಹಕಾರಿಯಾಗಿದೆ. ಜೊತೆಗೆ ಹಳ್ಳಿಗಳಲ್ಲಿ ಆಸ್ತಿಗಳ ಸೃಜನೆ ಆಗುತ್ತಿವೆ. ನರೇಗಾ ಸೌಲಭ್ಯಗಳನ್ನು ಎಲ್ಲರೂ ಪಡೆದುಕೊಳ್ಳಬೇಕು. ಸಾಮೂಹಿಕ ಕಾಮಗಾರಿಗಳ ಜೊತೆ ವೈಯಕ್ತಿಕ ಕಾಮಗಾರಿಗಳನ್ನು ಪಡೆದುಕೊಳ್ಳಲು ಅವಕಾಶವಿದೆ ಎಂದರು.
ನರೇಗಾ ಕಾಮಗಾರಿ ಸ್ಥಳದಲ್ಲಿ ಆಯೋಜಿಸುವ ಆರೋಗ್ಯ ಶಿಬಿರದ ಸೌಲಭ್ಯ ಪಡೆದುಕೊಳ್ಳಬೇಕು. ಕೂಲಿಕಾರ್ಮಿಕರು ಆರೋಗ್ಯದ ಬಗ್ಗೆಯೂ ಹೆಚ್ಚು ಕಾಳಜಿ ವಹಿಸಬೇಕು. ಕಾಲಕಾಲಕ್ಕೆ ಆರೋಗ್ಯ ತಪಾಸಿಸಿಕೊಳ್ಳಬೇಕು ಎಂದರು.
ಇವಿಎಂ, ವಿವಿಪ್ಯಾಟ್ ಪ್ರಾತ್ಯಕ್ಷಿಕೆ ಹಾಗೂ ಮತದಾನದ ಮಹತ್ವ ತಿಳಿಸಿದರು.

ನಿವೃತ್ತ ಬ್ಯಾಂಕ್ ವ್ಯವಸ್ಥಾಪಕರಾದ ಆಂಜನೇಯ ಅವರು, ಪ್ರಧಾನ ಮಂತ್ರಿ ಜೀವನ್ ಜ್ಯೋತಿ ವಿಮಾ ಯೋಜನೆ, ಪ್ರಧಾನ ಮಂತ್ರಿ ಜೀವನ ಸುರಕ್ಷಾ ವಿಮಾ ಯೋಜನೆ ಕುರಿತು ಕೂಲಿಕಾರರಿಗೆ ಮಾಹಿತಿ ನೀಡಿದರು.

ಕೂಲಿಕಾರರಿಗೆ ಸಹಾಯಕ ನಿರ್ದೇಶಕರು, ಗ್ರಾಪಂ ಅಧ್ಯಕ್ಷರು, ಗ್ರಾಪಂ ಪಿಡಿಓ ಅವರು ಕೇಕ್ ತಿನ್ನಿಸುವ ಮೂಲಕ ನರೇಗಾ ದಿವಸ್ ಆಚರಣೆ ಶುಭಾಶಯ ಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಗ್ರಾಪಂ ಅಧ್ಯಕ್ಷರಾದ ಮೇಘರಾಣಿ ಬಿ.ಮರಕುಂಬಿ ಅವರು, ಎಲ್ಲ ಕೂಲಿಕಾರರು ಸರ್ಕಾರಿ ಯೋಜನೆಗಳ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ರವಿಶಾಸ್ತ್ರಿ ಗ್ರಾಪಂ ಉಪಾಧ್ಯಕ್ಷರಾದ ನಾಗಪ್ಪ, ಸದಸ್ಯರಾದ ಸಿದ್ದರಾಮ ಪಿ.ಪಿ., ಪಕೃದ್ಧಿನ್, ನಿಂಗಪ್ಪ, ಸತ್ಯನಾರಾಯಣ, ಐಇಸಿ ಸಂಯೋಜಕರಾದ ಬಾಳಪ್ಪ ತಾಳಕೇರಿ, ತಾಂತ್ರಿಕ ಸಹಾಯಕರಾದ ಅಮರನಾಥ, ತಾಪಂ ಸಿಬ್ಬಂದಿ ಸಂತೋಷ ಎಂ., ಕೆಎಚ್ ಪಿಟಿ ತಾಲೂಕು ಸಂಯೋಜಕರಾದ ಶರಣಬಸವ, ಸಮುದಾಯ ಆರೋಗ್ಯ ಅಧಿಕಾರಿಗಳಾದ ಎನ್ .ಕೋಕಿಲ, ಆಶಾಕಾರ್ಯಕರ್ತೆಯರು, ಗ್ರಾಪಂ ಎಲ್ಲ ಸಿಬ್ಬಂದಿಗಳು, ಬಿಎಫ್ ಟಿ ಇದ್ದರು.

About Mallikarjun

Check Also

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ. ಅಪಾರ ಪ್ರಮಾಣದಲ್ಲಿ ನಷ್ಟ.

ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಕುಪ್ಪಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಟ್ಟಿಗೆಹಳ್ಳಿ ಗ್ರಾಮದ ದಲಿತ ಸಮುದಾಯದ ಕೆಂಪರಾಮಯ್ಯ ಸನ್ ಆಫ್ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.