Social change is possible only through education: Principal Shantaraju Abhima
ವರದಿ ಬಂಗಾರಪ್ಪ ಸಿ .
ಹನೂರು : ಕ್ಷೇತ್ರ ವ್ಯಾಪ್ತಿಯಲ್ಲಿ ನಡೆದ
ಸಂವಿಧಾನ ಜಾಗೃತಿ ಜಾಥಾದಲ್ಲಿ ಗಮನ ಸೆಳೆದ ಪುಸ್ತಕ ಜೋಳಿಗೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಬೇಕಾದರೆ
ಶಿಕ್ಷಣದಿಂದ ಮಾತ್ರ ಸಾದ್ಯ ಹಾಗೂ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯವಾಗಿ ಬೆಳೆಯಲು ಹಾಗೂ ಪ್ರಬುದ್ಧತೆಯನ್ನು ಕಾಣಲು ಸಾಧ್ಯ ವಾಗುತ್ತದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಶಾಂತರಾಜು ಅವರು ತಿಳಿಸಿದರು.
ಹನೂರು ತಾಲೂಕಿನ ಪಿ.ಜಿ ಪಾಳ್ಯ ಗ್ರಾಮ ಪಂಚಾಯಿತಿ ಯಲ್ಲಿ ಇಂದು ಸಂವಿಧಾನ ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ಶಿಕ್ಷಣ ಎಂಬುದು ಹುಲಿಯ ಹಾಲಿನಂತೆ ಅದನ್ನು ಕುಡಿದವ ಘರ್ಜಿಸಲೇ ಬೇಕು ಎಂಬ ಅಂಬೇಡ್ಕರ್ ಅವರ ವಾಣಿಯಂತೆ ಶಿಕ್ಷಣ ಮಹತ್ವದ ಬಗ್ಗೆ ನಿಮ್ಮ ಮಕ್ಕಳಿಗೆ ಅರಿವು ಮೂಡಿಸಬೇಕು.
ಸಂವಿಧಾನ ಜಾರಿಗೆ ಬಂದು ಇಂದಿಗೆ 75ವರ್ಷಗಳು ತುಂಬುತ್ತಿರುವ ಸವಿ ನೆನಪಿಗಾಗಿ ಪಿ.ಜಿ ಪಾಳ್ಯ ಗ್ರಾಮ ಪಂಚಾಯಿತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ರಥ ಯಾತ್ರೆಯ ಜೊತೆಗೆ ವಿನೂತನವಾಗಿ ಪುಸ್ತಕ ಜೋಳಿಗ ಕಾರ್ಯಕ್ರಮವನ್ನು ಮಾಡುತ್ತಿರುವುದು ನಿಮ್ಮ ಮಕ್ಕಳಲ್ಲಿ ಓದುವ ಅಭಿರುಚಿಯನ್ನು ಬೆಳಸಬೇಕು ,
ಸಂವಿಧಾನವು ನೀಡಿರುವ ಹಕ್ಕುಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಪ್ರಬುದ್ಧ ಭಾರತ ನಿರ್ಮಾಣ ಮಾಡುವ ಜೊತೆಗೆ ಅಸಹಾಯಕ ಜನರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಕೆಲಸವನ್ನು ಮಾಡಬೇಕು ಎಂದು ತಿಳಿಸಿದರು.
ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಸಂವಿಧಾನ ಜಾಗೃತಿ ಜಾಥಾದ ರಥಯಾತ್ರೆಗೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಸಂತೋಷ ಕುಮಾರ್ ಅವರು ಚಾಲನೆ ನೀಡಿದರು.
ತದ ನಂತರ ಕಳಶ ಹಿಡಿದ ಮತ್ತು ಪೂರ್ಣ ಕುಂಭ ಹೊತ್ತ ಮಹಿಳಾ ಸ್ವ ಸಹಾಯ ಸಂಘದ ಸದಸ್ಯರು, ಮತ್ತು ಶಾಲಾ ಮಕ್ಕಳು ಡೊಳ್ಳು ಕಲಾವಿದರು, ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು, ಗ್ರಾಮದ ಜನಪ್ರತಿನಿಧಿಗಳು, ಊರಿನ ಮುಖಂಡರು ಹಾಗೂ ಸಾರ್ವಜನಿಕರು ಅದ್ದೂರಿಯಾಗಿ ಸ್ವಾಗತಿಸಿದ್ದು .
ಇದೇ ಸಂಧರ್ಭದಲ್ಲಿ ಸಂವಿಧಾನ ಜಾಗೃತಿ ಜಾಥಾ ನೋಡಲ್ ಅಧಿಕಾರ ಸುರೇಶ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ನಂಜುಡಸ್ವಾಮಿ, ಉಪಾಧ್ಯಕ್ಷರಾದ ಸುನೀತಾ, ಶಿಕ್ಷಕರು, ಗ್ರಾಮ ಪಂಚಾಯಿತಿಗಳ ಜನಪ್ರತಿನಿಧಿಗಳು ಮತ್ತು ಕಳಶ ಹಿಡಿದ ಹಾಗೂ ಪೂರ್ಣ ಕುಂಭ ಹೊತ್ತ ಮಹಿಳೆಯರು ಮತ್ತು ಸಾರ್ವಜನಿಕರು ಸೇರಿದಂತೆ ಇನ್ನಿತರರು ಹಾಜರಿದ್ದರು .