Breaking News

ಶರಣ ಶ್ರೀ ಜೇಡರ / ದೇವರ ದಾಸಿಮಯ್ಯ ನವರ ಸ್ಮರಣೋತ್ಸವ.

Commemoration of Sharan Shree Jedara/Deva Dasimaiya Navra


ತಂದೆ : ಕಾಮಯ್ಯ
ತಾಯಿ : ಶಂಕರಿ
ಪತ್ನಿ : ದುಗ್ಗಳೆ
ಕಾಯಕ : ಬಟ್ಟೆ / ಸೀರೆ ನೇಯುವುದು
ಸ್ಥಳ : ಮುದನೂರು, ಸುರಪುರ ತಾಲ್ಲೂಕು, ಯಾದಗಿರಿ
ಜಯಂತಿ : ಅವರಾತ್ರಿ ಅಮಾವಾಸ್ಯೆಯಂದು
ಲಭ್ಯ ವಚನಗಳ ಸಂಖ್ಯೆ : ೧೭೬
ಅಂಕಿತ : ರಾಮನಾಥ

ಜೇಡರ / ದೇವರ ದಾಸಿಮಯ್ಯನವರು ೧೨ನೇ ಶತಮಾನದಲ್ಲಿ ಬಸವಣ್ಣನವರ ಪ್ರಭಾವಕ್ಕೆ ಒಳಗಾಗಿ ಕಲ್ಯಾಣಕ್ಕೆ ಬಂದು, ಶರಣರ ಚಳುವಳಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡವರು. ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ, ಆದ್ಯ ಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯ ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ, ಶಿವನಿಂದ ತವನಿಧಿ ಪಡೆದಂತೆ, ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಳೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯನವರದು ಆದರ್ಶ ದಾಂಪತ್ಯ. ನೇಕಾರ ದಾಸಿಮಯ್ಯ ತನ್ನ ಸತಿ ದುಗ್ಗಳೆಯೊಂದಿಗೆ ಕಾಯಕವನ್ನೇ ಕೈಲಾಸವಾಗಿಸಿಕೊಡ ಸಾಧಕರು.
ದೇವರ ದಾಸಿಮಯ್ಯನವರು ಮುದನೂರಿನ
ಸಮೀಪದಲ್ಲಿರುವ ಶೈವ ಕೇಂದ್ರವಾದ ಶ್ರೀಶೈಲದಲ್ಲಿ ಶ್ರೀ ಚಂದ್ರಗುಂಡ ಶಿವಾಚಾರ್ಯರ ಗುರುಕುಲದಲ್ಲಿ ಅಪಾರ ವಿದ್ಯೆಯೊಂದಿಗೆ ಉತ್ತಮ ಸಂಸ್ಕಾರವನ್ನು ಕೂಡಾ ಪಡೆದು ಜ್ಞಾನವಂತನಾದನೆಂದು ಐತಿಹ್ಯವಿದೆ. ಆತ್ಮಕ್ಕೆ ಗಂಡು – ಹೆಣ್ಣು ಎಂಬ ತಾರತಮ್ಯ ಇಲ್ಲವೆಂದಿದ್ದಾರೆ. ದಾಸಿಮಯ್ಯನವರು ಯಾವುದನ್ನೂ ಪ್ರಶ್ನಿಸದೆ ಸ್ವೀಕರಿಸುವ ಮನೋಭಾವದವನಲ್ಲ. ಪ್ರಖರ ವೈಚಾರಿಕ ನೆಲೆಗಟ್ಟಿನ ಅಸದೃಶ ವ್ಯಕ್ತಿತ್ವವನ್ನು ಹೊಂದಿದವರಾಗಿದ್ದರು. ಇವರ
ಜನಪರ ಕಾಳಜಿ ಇಂದಿಗೂ ಆನ್ವಯಿಕ. ಶಿವ ಜಗತ್ತನ್ನೇ ವ್ಯಾಪಿಸಿಕೊಂಡಂತೆ, ಜಗತ್ತೇ ಶಿವನ ರೂಪ ಎಂಬ ನಿಲುವಿನೊಂದಿಗೆ, “ಇಳೆ ನಿಮ್ಮ ದಾನ, ಬೆಳೆ ನಿಮ್ಮ ದಾನ, ಸುಳಿದು ಸೂಸುವ ಗಾಳಿ ನಿಮ್ಮ ದಾನವಯ್ಯ..” ಎಂದೆನ್ನುವ ದಾಸಿಮಯ್ಯನಲ್ಲಿ ಈ ಲೋಕವನ್ನು ನೋಡುವ ಕ್ರಮ ಹೊಸತನದಿಂದ ಕೂಡಿದೆ. “ಸೂಳ್ನುಡಿ”, “ನುಡುಗಡಣ” ಎಂಬ ಪದಗಳನ್ನು “ವಚನ” ಕ್ಕೆ ಪರ್ಯಾಯ ಪದಗಳಾಗಿ ಬಳಸಿರುವರು.

ಇವರದೊಂದು ವಚನ:
ಕರಸ್ಥಲವೆಂಬ ದಿವ್ಯ ಭೂಮಿಯಲ್ಲಿ ಮಹಾಘನಲಿಂಗ ನಿಕ್ಷೇಪವಾಗಿದೆ.!
ಈ ದಿವ್ಯ ನಿಕ್ಷೇಪವ ಸಾಧಿಸುವಡೆ ಅಂಜನಸಿದ್ಧಿಯಿಲ್ಲದೆ ಸಾಧಿಸಬಾರದು..
ಲಿಪಿಯಿಲ್ಲದೆ ತೆಗೆವಡಸದಳ..
ಆ ಲಿಪಿಯ ವ್ರಯವ ಷಟ್‍ತತ್ವದ ಮೇಲೆ ನಿಶ್ಚಯಿಸಿ..
ಆ ನಿಶ್ಚಯದೊಳಗೆ ಈ ನಿಕ್ಷೇಪದ ಕರ್ತೃವಿನ ಹೆಸರೋದಿತ್ತು..
ತಿಳಿಯಲೋದುವನ್ನಬರ ಆತ ನಮ್ಮ ಹೆತ್ತಯ್ಯನೆಂಬ ಹೆಸರೋದಿತ್ತು..
ಆ ಓದಿಕೆಯ ಕಡೆಯಕ್ಕರದೊಳಗೆಅಂಜನಸಿದ್ಧಿ ಹೇಳಿತ್ತು..
ಅದಾವ ಪರಿಕ್ರಮದ ಅಂಜನವೆಂದಡೆ ಅದೆಮ್ಮ ಹೆತ್ತಯ್ಯ ಜಗದ್ವಿಲಾಸ ತದರ್ಥವಾಗಿ ಆ ತನ್ನ ಮೂಲಶಕ್ತಿ ಸಂಭೂತವಾದುದು..
ಅಲ್ಲಿ ಹುಟ್ಟಿದ ದಿವ್ಯ ಚಿತ್ಕಳೆಯಿಂದೊಗೆದ ದಿವ್ಯಭಸಿತವೆಂದಿತ್ತು..
ಆ ದಿವ್ಯ ಭಸಿತವೆಂಬ ದಿವ್ಯಾಂಜನವ ತಳೆದುಕೊಂಡು ಅತಿ ವಿಶ್ವಾಸದಿಂದ ನಾನೆನ್ನ ಹಣೆಯೆಂಬ ಕಣ್ಣಿಂಗೆಚ್ಚಿ ಸರ್ವಾಂಗವ ತೀವಲೊಡನೆ ಕರಸ್ಥಲದೊಳಗಣ ನಿಕ್ಷೇಪ ಕಣ್ದೆರವಾಯಿತ್ತು..
ಆ ಕಣ್ದೆರವಾದ ನಿಕ್ಷೇಪವ ಮುಟ್ಟಹೋದಡೆ ಅಲ್ಲಿ ನಮ್ಮ ಹೆತ್ತಯ್ಯನ ಹೊಳಹ ಕಂಡು ತಳವೆಳಗಾದೆ ಕಾಣಾ ರಾಮನಾಥ.!

About Mallikarjun

Check Also

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ. ಅಪಾರ ಪ್ರಮಾಣದಲ್ಲಿ ನಷ್ಟ.

ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಕುಪ್ಪಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಟ್ಟಿಗೆಹಳ್ಳಿ ಗ್ರಾಮದ ದಲಿತ ಸಮುದಾಯದ ಕೆಂಪರಾಮಯ್ಯ ಸನ್ ಆಫ್ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.