Breaking News

ರಾಜ್ಯ ಬಜೆಟ್ – ವಿದ್ಯಾರ್ಥಿಗಳ ಅಪೇಕ್ಷೆ!

State budget – students demand!

ಕೊಪ್ಪಳ :ಇನ್ನು ಕೆಲವೇ ದಿನಗಳಲ್ಲಿ ರಾಜ್ಯ ಬಜೆಟ್ ಮಂಡಿಸಲಾಗುತ್ತದೆ. ಈ ಹಿನ್ನಲೆಯಲ್ಲಿ ಹಲವು ವರ್ಷಗಳಿಂದ ಶಿಕ್ಷಣ ಕ್ಷೇತ್ರವನ್ನು ಅದರಲ್ಲೂ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಗೆ ಸಂಬಂಧಿಸಿದ ಪ್ರಮುಖ ಸಮಸ್ಯೆಗಳ ನಿವಾರಣೆಯ ಕಡೆಗೆ ರಾಜ್ಯ ಸರ್ಕಾರ ಗಮನ ಹರಿಸಬೇಕೆಂದು ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ರಾಜ್ಯದ ವಿದ್ಯಾರ್ಥಿಗಳ ಪರವಾಗಿ ಮನವಿ ಮಾಡುತ್ತದೆ. ರಾಜ್ಯದಲ್ಲಿ ಬಡ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅಧ್ಯಯನ ನಡೆಸುತ್ತಿದ್ದು, ಅವರ ವ್ಯಾಸಂಗದ ಏಳಿಗೆಯನ್ನು ಆದ್ಯತೆ ಎಂದು ಭಾವಿಸಿ ಪ್ರಸ್ತುತ ಬಜೆಟ್ನಲ್ಲಿ ಈ ಕೆಳಗಿನ ಪ್ರಮುಖ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಎಐಡಿಎಸ್ಓ ಆಗ್ರಹಿಸುತ್ತದೆ.

ಬೇಡಿಕೆಗಳು*
1. ಕಳೆದ ಸರ್ಕಾರ ಅಪ್ರಜಾತಾಂತ್ರಿಕವಾಗಿ ರಾಜ್ಯದಲ್ಲಿ ಹೇರಿದ ಏನ್.ಇ.ಪಿ -2020 ರ ಎಲ್ಲಾ ಶಿಫಾರಸ್ಸುಗಳನ್ನು ಹಿಂಪಡೆಯಿರಿ
2. ಕಟ್ಟಡ ಕಾರ್ಮಿಕರ ಮಕ್ಕಳ ಶಿಷ್ಯವೇತನದ ಹಿಂದಿನ ಮೊತ್ತವನ್ನೇ ಮುಂದುವರೆಸಿ
3. ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನದ ಹಣವನ್ನು ಅವರ ಬ್ಯಾಂಕ್ ಖಾತೆಗೆ ಹಾಕುವ (ಡಿ.ಬಿ.ಟಿ) ಪದ್ಧತಿಯನ್ನು ಹಿಂಪಡೆಯಿರಿ
4. ರಾಜ್ಯದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಸಂಖ್ಯೆಯನ್ನು ಹೆಚ್ಚಿಸಿರಿ
5. ವಿವಿಗಳಲ್ಲಿ ಹಾಗೂ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಬೋಧಕ ಹಾಗೂ ಭೋದಕೇತರ ಸಿಬ್ಬಂದಿಗಳ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ.
6. ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಿ
7. ಸರ್ಕಾರಿ ಶಾಲಾ ಮಕ್ಕಳಿಗೆ ಸೈಕಲ್ ವಿತರಿಸಿ
8. ಅಂಗನವಾಡಿಗಳ ನಿರ್ವಹಣೆಗೆ ಅನುದಾನ ಹೆಚ್ಚಿಸಿ
9. ಈ ಬಾರಿಯ ಬಜೆಟ್ನಲ್ಲಿ ಯಾವುದೇ ನೂತನ ಸ್ವ – ಹಣಕಾಸು ಶಿಕ್ಷಣ ಸಂಸ್ಥೆಗಳನ್ನು ಘೋಷಿಸಬೇಡಿ

ಜಿಲ್ಲಾ ಸಮಿತಿಯ ಪರವಾಗಿ,
ಗಂಗರಾಜ ಅಳ್ಳಳ್ಳಿ
ಜಿಲ್ಲಾ ಸಂಚಾಲಕರು
ಎಐಡಿಎಸ್ಓ ಕೊಪ್ಪಳ

.

About Mallikarjun

Check Also

ಖೊಟ್ಟಿ ದಾಖಲೆ ಸೃಷ್ಟಿಸಿ, ಬಿಪಿಎಲ್ ಪಡಿತರ ಚೀಟಿ ಪಡೆದಿದ್ದ ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲು, ದಂಡವಸೂಲಿ.

ಕಾರಟಗಿ: ತಾಲೂಕಿನ ಸಿದ್ಧಾಪುರ ಗ್ರಾಮದ ಬಿಜೆಪಿ ಮುಖಂಡ ಆಗಿರುವ ಮಹಿಬೂಬ್ ಸಾಬ್ ಮುಲ್ಲಾ (ಎಂ.ಡಿ.ಎಸ್) ತಂದೆ ಮೋದಿನ್ ಸಾಬ್ ಈತನು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.