Breaking News

ಶಾಲಾ ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳನ್ನು ಆಚರಿಸುವಂತಿಲ್ಲ: ರಾಜ್ಯ ಸರಕಾರ ಆದೇಶ

Religious festivals cannot be celebrated in schools and colleges: state government orders

ಬೆಂಗಳೂರು: ಸಮಾಜ ಕಲ್ಯಾಣ ಸಚಿವ ಎಚ್‌.ಸಿ.ಮಹದೇವಪ್ಪ ಅವರ ಮೇರೆ ಈ ಸುತ್ತೋಲೆಗಳನ್ನು ಹೊರಡಿಸಲಾಗಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಗೆ ಬರುವ ವಸತಿ ಶಾಲಾ- ಕಾಲೇಜುಗಳಲ್ಲಿ ಇನ್ನು ಮುಂದೆ ಧಾರ್ಮಿಕ ಹಬ್ಬಗಳನ್ನು ಆಚರಿಸುವಂತಿಲ್ಲ ಎಂದು ಆದೇಶ ನೀಡಲಾಗಿದೆ. ಅಲ್ಲದೆ ರಾಷ್ಟ್ರೀಯ ಹಬ್ಬ, ನಾಡಹಬ್ಬ ಮತ್ತು ಜಯಂತಿಗಳನ್ನು ಮಾತ್ರ ಆಚರಿಸುವಂತೆ ಆದೇಶಿಸಲಾಗಿದೆ. ಸಂಘದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಸತಿ ಶಾಲೆ ಕಾಲೇಜುಗಳಲ್ಲಿ ಈ ಮೇಲಿನ ರಾಷ್ಟ್ರೀಯ ಹಬ್ಬ, ನಾಡಹಬ್ಬ ಮತ್ತು ಜಯಂತಿಗಳನ್ನು ಮಾತ್ರ ಆಚರಿಸುವಂತೆ ಆದೇಶಿಸಲಾಗಿದೆ.

ಕೆಲವು ರಾಷ್ಟ್ರೀಯ ಹಬ್ಬಗಳಲ್ಲದೇ ಇತರೆ ಧಾರ್ಮಿಕ ಹಬ್ಬಗಳಾದ ಯುಗಾದಿ, ರಂಜಾನ್, ಕ್ರಿಸ್‌ಮಸ್, ಈದ್ ಮಿಲಾದ್, ಸಂಕ್ರಾಂತಿ ಇತರೆ ಹಬ್ಬಗಳನ್ನು ಆಚರಣೆ ಮಾಡುವಂತಿಲ್ಲ ಎಂದು ಸುತ್ತೋಲೆ ಹೊರಡಿಸಲಾಗಿದೆ. ಎಲ್ಲಾ ವಸತಿ ಶಾಲಾ- ಕಾಲೇಜುಗಳಲ್ಲಿ ಸರ್ಕಾರದ ಸೂಚನೆಯಂತೆ ರಾಷ್ಟ್ರೀಯ ಹಬ್ಬಗಳನ್ನು ಮಾತ್ರ ಆಚರಣೆ ಮಾಡಬೇಕು. 10 ರಾಷ್ಟ್ರೀಯ ಹಬ್ಬಗಳ ಆಚರಣೆಗೆ ಅವಕಾಶ ನೀಡಲಾಗಿದೆ. ಒಂದು ವೇಳೆ ಧಾರ್ಮಿಕ ಹಬ್ಬಗಳನ್ನು ಆಚರಿಸಿದರೆ ಆಯಾ ಪ್ರಿನ್ಸಿಪಾಲರು ಹಾಗೂ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆಯನ್ನು ನೀಡಲಾಗಿದೆ.

1) ಗಣರಾಜ್ಯೋತ್ಸವ

2) ಸ್ವಾತಂತ್ರ್ಯ ದಿನಾಚರಣೆ

3) ಗಾಂಧಿ ಜಯಂತಿ

4) ಕನ್ನಡ ರಾಜ್ಯೋತ್ಸವ

5) ಡಾ.ಬಿ.ಆರ್‌. ಅಂಬೇಡ್ಕರ್‌ ಜಯಂತಿ

6) ವಾಲ್ಮೀಕಿ ಜಯಂತಿ

7) ಕನಕದಾಸ ಜಯಂತಿ

8) ಬಸವ ಜಯಂತಿ

9) ಸಂವಿಧಾನ ಜಯಂತಿ

10) ಯೋಗ ದಿನಾಚರಣೆ

About Mallikarjun

Check Also

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ. ಅಪಾರ ಪ್ರಮಾಣದಲ್ಲಿ ನಷ್ಟ.

ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಕುಪ್ಪಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಟ್ಟಿಗೆಹಳ್ಳಿ ಗ್ರಾಮದ ದಲಿತ ಸಮುದಾಯದ ಕೆಂಪರಾಮಯ್ಯ ಸನ್ ಆಫ್ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.