Breaking News

ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕ ಮತ್ತು ಸೌಹಾರ್ದ ಸಹಕಾರಿತಿದ್ದುಪಡಿವಿಧೇಯಕ ಸರ್ಕಾರದ ನಿರ್ಧಾರ ಸ್ವಾಗತಾರ್ಹ

Government’s decision on Co-operative Societies Amendment Bill and Friendly Co-operative Amendment Bill is welcome.

ಗಂಗಾವತಿ,ರಾಜ್ಯ ಸರ್ಕಾರ ಮಂಡಿಸಿದ್ದ ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕ ಮತ್ತು ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕಗಳಿಗೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ, ಸರ್ಕಾರದಿಂದ ನೆರವು ಪಡೆದಿರುವ ಸಹಕಾರ ಮತ್ತು ಸೌಹಾರ್ದ ಸಹಕಾರಿ ಸಂಘಗಳಿಗೆ ರಾಜ್ಯ ಸರ್ಕಾರದಿಂದ ಮೂರು ಮಂದಿ ಪ್ರತಿನಿಧಿಗಳನ್ನು ನಾಮನಿರ್ದೇಶನ ಮಾಡಲು ಮತ್ತು ನಾಮ ನಿರ್ದೇಶನದಲ್ಲೂ ಮೀಸಲಾತಿ ಕಲ್ಪಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರದ ನಿರ್ಧಾರ ಶ್ಲಾಘನೀಯವಾದದ್ದು. ತಿದ್ದುಪಡಿ ಮಸೂದೆಯಿಂದ ಸಹಕಾರ ಸಂಘಗಳ ಸಾಮಾನ್ಯ ಸಭೆಯಲ್ಲಿ ಭಾಗವಹಿಸದವರು ಮತ್ತು ಯಾವುದೇ ವಹಿವಾಟು ನಡೆಸದವರು ಮತದಾನ ಮಾಡಲು ಅನುಮತಿ ನೀಡಲಾಗುತ್ತದೆ, ನಾಮ ನಿರ್ದೇಶನ ಸದಸ್ಯರು ಸಂಘದ ಎಲ್ಲಾ ಸಭೆಗಳಲ್ಲಿ ಮತ್ತು ಚುನಾವಣೆಗಳಲ್ಲಿ ಮತದಾನ ಮಾಡಬಹುದು ಆದರೆ ಸ್ಪರ್ಧಿಸುವಂತಿಲ್ಲ. ಸರ್ವರಿಗೂ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹವಾದದ್ದು ಎಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರು ಹಾಗೂ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ವಿಶ್ವನಾಥ್ ಮಾಲಿ ಪಾಟೀಲ್ ಪತ್ರಿಕಾ ಹೇಳಿಕೆ ನೀಡಿದ್ದಾರೆ.

About Mallikarjun

Check Also

ಖೊಟ್ಟಿ ದಾಖಲೆ ಸೃಷ್ಟಿಸಿ, ಬಿಪಿಎಲ್ ಪಡಿತರ ಚೀಟಿ ಪಡೆದಿದ್ದ ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲು, ದಂಡವಸೂಲಿ.

ಕಾರಟಗಿ: ತಾಲೂಕಿನ ಸಿದ್ಧಾಪುರ ಗ್ರಾಮದ ಬಿಜೆಪಿ ಮುಖಂಡ ಆಗಿರುವ ಮಹಿಬೂಬ್ ಸಾಬ್ ಮುಲ್ಲಾ (ಎಂ.ಡಿ.ಎಸ್) ತಂದೆ ಮೋದಿನ್ ಸಾಬ್ ಈತನು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.