Open house program by Gangavati Nagar Police Department
ಗಂಗಾವತಿ,೨೦: ನಗರ ಪೊಲೀಸ್ ಠಾಣೆಯಲ್ಲಿ ತೆರೆದ ಮನೆ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಸಂದರ್ಭದಲ್ಲಿ ಮಾತನಾಡಿದ ಗಂಗಾವತಿ ನಗರ ಠಾಣೆಯ ಎಎಸ್ಐ ಶಿವಶರಣ ಗಂಗಾವತಿ ಬೇತಲ್ ಆಂಗ್ಲ ಮಾದ್ಯಮ ಶಾಲಾ ಮಕ್ಕಳಿಗೆ ಶಾಲಾ ಹಂತದಲ್ಲಿ ದೇಶಭಕ್ತಿ ಮೂಡಿಸುವ ಸಲುವಾಗಿ ಈ ಒಂದು ತೆರೆದ ಮನೆ ಕಾರ್ಯಕ್ರಮದ ಉದ್ದೇಶ ಎಂದು ಮಕ್ಕಳಿಗೆ ಸಲಹೆ ಮತ್ತು ನೇಮ ಪಾಲನೆ ಬಗ್ಗೆ ಹೇಳಿದು ಪೋಲಿಸ್ ಕರ್ತವ್ಯನಿರ್ವಹಣಾ ವಿಧಾನ, ಕಾನೂನು ಮತ್ತು ಸುವ್ಯವಸ್ಥೆ ವಿಭಾಗ, ಅಪರಾಧ ವಿಭಾಗ, ತನಿಖಾಧಿಕಾರಿ ವಿಭಾಗ, ಕಂಪ್ಯೂಟರ್ ವಿಭಾಗ, ಠಾಣಾ ಬರಹಗಾರರ ವಿಭಾಗ, ಠಾಣಾ
ದಿನಚರಿ, ಅರ್ಜಿಗಳ ಬಗ್ಗೆಯೂ ಮನವರಿಕೆ ಮಾಡಿಕೊಡಲಾಗುವದು. ಅಂಗ ಶೋಧನಾ ಪುಸ್ತಕ, ಕೈದಿ ಬಂಧನ ಪುಸ್ತಕ, ಸಮನ್ಸ್ ನೋಂದಣಿ, ವಾರಂಟ್ ನೋಂದಣಿ, ಎಂಒಬಿ ಪುಸ್ತಕ, ರೌಡಿ ರಿಜಿಸ್ಟರ್, ಪೂರ್ವ ಸಜಾ ಅಪರಾಧಿ ನೋಂದಣಿ, ಬಂದೂಕು ನೋಂದಣಿ, ಸಣ್ಣ ಅಪರಾಧ ಪುಸ್ತಕ, ಮೋಟಾರು ವಾಹನ ಅಪರಾಧ ಪುಸ್ತಕ ಹಾಗೂ ಅಪರಾಧಿ ದಾಖಲಾತಿ ಪುಸ್ತಕ, ಕಾನೂನು ತಿಳಿವಳಿಕೆ, ಮಕ್ಕಳ ಸುರಕ್ಷತೆ, ರಸ್ತೆ ಸಂಚಾರ ನಿಯಮ, ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣ ಸೇರಿದಂತೆ ವಿದ್ಯಾರ್ಥಿಗಳಿಗೆ ಉಪಯುಕ್ತವಾಗಿರುವ ಕಾನೂನುಗಳ ಬಗ್ಗೆಯೂ ಮಕ್ಕಳಿಗೆ ನೀಡಲಾಗುತ್ತದೆ.
ಈ ಸಂದರ್ಭದಲ್ಲಿ ಪಿಎಸ್ಐ ತಿಮ್ಮರೆಡ್ಡಿ ಹಾಗೂ ಬೇತಲ್ ಸ್ಕೂಲ್ ಶಿಕ್ಷಕರು ಸೇರಿದಂತೆ ಇತರರು ಇದ್ದರು