Breaking News

ಭಾವೈಕ್ಯತಾ ದಿನ ಆಚರಣೆ ಮಾಡಿದರೇ ತಪ್ಪೇನು?

What is wrong with celebrating Bhavaikya Day?

ಗದಗ: ‘ಮಸೀದಿ, ಮಂದಿರಗಳಿಗೆ ತೋಂಟದಾರ್ಯ ಮಠ ಜಾಗ ಕೊಟ್ಟಿದೆ. ಭಾವೈಕ್ಯತಾ ದಿನ ಆಚರಣೆ ಮಾಡಿದರೇ ತಪ್ಪೇನು’ ಎಂದು ತೋಂಟದಾರ್ಯ ಸಿದ್ದರಾಮ ಶ್ರೀಗಳು ಪ್ರಶ್ನಿಸಿದ್ದಾರೆ.

ಭಾವೈಕ್ಯತಾ ದಿನ ಆಚರಣೆ ವಿರೋಧಿಸಿ ದಿಂಗಾಲೇಶ್ವರ ಶ್ರೀಗಳು ಪತ್ರಿಕಾಗೋಷ್ಠಿ ನಡೆಸಿದ ಕಾರಣ ತೋಂಟದಾರ್ಯ ಮಠದಲ್ಲೂ ದಿಂಗಾಲೇಶ್ವರ ಶ್ರೀ ಹೇಳಿಕೆ ವಿರೋಧಿಸಿ ಸಿದ್ಧರಾಮ ಶ್ರೀಗಳು ಮಾತನಾಡಿದರು.

2004 ರಲ್ಲಿ ಶ್ರೀ ಗಳಿಗೆ ರಾಷ್ಟ್ರೀಯ ಕೋಮ ಸೌಹಾರ್ದ ಪ್ರಶಸ್ತಿ ಲಭಿಸಿದೆ ಆ ಪ್ರಶಸ್ತಿಯನ್ನು ನಮ್ಮ ದೇಶದ ಹೆಮ್ಮೆಯ ರಾಷ್ಟ್ರಪತಿ ಅಬ್ದುಲ್ ಕಲಾಂ ಮತ್ತು ಅಂದಿನ ಪ್ರಧಾನಿ ವಾಜಪೇಯಿ ಅವರು ಇವರ ಭಾವ್ಯಕತೆ ವಿಷಯ ಮತ್ತು ವಾಸ್ತು ಸ್ಥಿತಿ ಪರಿಗಣಿಸಿ ದೂರದ ದೆಹಲಿಯಲ್ಲಿ ಇವರ ಸಾಧನೆ ಪರಿಗಣಿಸಿ ಮತ್ತು ಒಂದು ಪ್ರಶಸ್ತಿ ಪ್ರದಾನ ಮಾಡಲು ಇರುವ ಎಲ್ಲ ಮಾನ ದಂಡಗಳನ್ನು ಪರಿಗಣಿಸಿ ಅಂದಿನ ಕೇಂದ್ರ ಸರ್ಕಾರ ಅನುಮೋದನೆ ನೀಡಿ ಶ್ರೀಗಳಿಗೆ ಕೋಮ ಸೌಹಾರ್ದ ಪ್ರಶಸ್ತಿ ನೀಡಿರುತ್ತದೆ ಅದಕ್ಕೆ ಅವರು ಭಾವ್ಯಕತೆ ಹರಿಕಾರರು ಎಂದು ಇವತ್ತು ಹೇಳಿಲ್ಲ 2004 ರಲ್ಲಿ ಕೇಂದ್ರ ಸರ್ಕಾರ ಹೇಳಿದೆ ಈಗ ಯಾರೋ ಏನೋ ಅಂತೆ ಕಂತೆ ಪುರಾಣ ಹೇಳಿದ್ರೆ ಅದನ್ನು ಕೇಳುವರು ಯಾರು ಗದುಗಿನ ಲಿಂ ತೋಂಟದ ಸಿದ್ದಲಿಂಗ ಮಹಾಸ್ವಾಮಿಗಳು ಭಾವ್ಯಕತೆ ಹರಿಕಾರರು. ಈ ಪದ ಯಾರಿಗೊಬ್ಬರಿಗೆ ಸೀಮಿತವಲ್ಲ

ತೋಂಟದಾರ್ಯ ಮಠದಲ್ಲಿ ಸಾಕಷ್ಟು ಸಾಮರಸ್ಯದ ಕೆಲಸ ಮಾಡಿದ್ದೇವೆ. ಜಾತ್ರಾ ಕಮಿಟಿಗೆ ಮುಸ್ಲಿಮರನ್ನು ಆಯ್ಕೆ ಮಾಡಿದ ಉದಾಹರಣೆ ಇದೆ. ಮಠದಲ್ಲಿ ಅನೇಕ ಮುಸ್ಲಿಂ ಭಕ್ತರಿದ್ದಾರೆ. ಲಿಂ. ಸಿದ್ಧಲಿಂಗ ಶ್ರೀಗಳು ಎಲ್ಲ ಸಮುದಾಯದ ಜತೆ ಭಾವೈಕ್ಯತೆಯಿಂದ ಇದ್ದರು. ಸಿದ್ಧಲಿಂಗ ಶ್ರೀಗಳ ಮೇಲೆ ಆರೋಪ ಸಲ್ಲ. ಮತ್ತೊಬ್ಬರನ್ನು ಟೀಕೆ ಮಾಡುವುದು ಸರಿಯಲ್ಲ. ನಮ್ಮ ಕಾಯಕ ನಮ್ಮ ಜತೆ ಇರಲಿ. ಸೌಹಾರ್ದತೆ, ಸಹೋದರತ್ವ ಬೇಕು. ಸಂವಿಧಾನದಲ್ಲೇ ಭಾವೈಕ್ಯತೆ ಸಂದೇಶವಿದೆ’ ಎಂದರು.

‘ಭಾವೈಕ್ಯತೆ ಎಂಬುವುದು ಒಬ್ಬ ವ್ಯಕ್ತಿಗೆ ಸೀಮಿತ ಆಗಿದ್ದಲ್ಲ. ಎಲ್ಲರೂ ಆಚರಿಸಬಹುದು. ದಿಂಗಾಲೇಶ್ವರ ಶ್ರೀಗಳು ಕರಾಳ ದಿನ ಆಚರಣೆ ಮಾಡಿದರೇ ಅದನ್ನು ಜಿಲ್ಲಾಡಳಿತ ನೋಡಿಕೊಳ್ಳುತ್ತದೆ. ನಮಗೆ ಸರ್ಕಾರ ರಕ್ಷಣೆ ನೀಡಬೇಕು. ಕರಾಳ ದಿನ ಆಚರಣೆ ತಪ್ಪಾದರೆ ಸರ್ಕಾರ ಕರಾಳ ದಿನ ಆಚರಣೆಯನ್ನು ನಿಷಿದ್ಧ ಮಾಡಬೇಕು ಅಥವಾ ಸರ್ಕಾರ ನಮಗೆ ನಿರ್ದೇಶನ ನೀಡಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು’ ಎಂದರು.

‘ವೀರೈಶವ ಲಿಂಗಾಯತ ಧರ್ಮವನ್ನು ಸಿದ್ಧಲಿಂಗ ಶ್ರೀಗಳು ಒಡೆದಿದ್ದಾರೆ ಎಂಬ ದಿಂಗಾಲೇಶ್ವರ ಶ್ರೀಗಳ ಆರೋಪಕ್ಕೆ ಪ್ರತಿಕ್ರಿಸಿದ ಅವರು, ‘ಹಿಂದೂ ಎಂಬುದು ಬದುಕುವ ಪದ್ಧತಿಯೇ ವಿನಹ ಧರ್ಮವಲ್ಲ. ಹಿಂದು ಧರ್ಮಕ್ಕೆ ಸಂಸ್ಥಾಪಕರೇ ಇಲ್ಲ. ಭಾರತದಲ್ಲಿ ಇರುವರೆಲ್ಲರೂ ಹಿಂದೂಗಳೇ ಎಂಬುದು ಅರಿತುಕೊಳ್ಳಬೇಕು. ವೀರಶೈವ ಎಂಬುದು ಲಿಂಗಾಯತದ ಒಂದು ಭಾಗ. 12ನೇ ಶತಮಾನದಲ್ಲೇ ಲಿಂಗಾಯತ ಧರ್ಮ ಇದೆ. ಅದನ್ನು ಒಡೆಯುವ ಪ್ರಮೇಯವೇ ಇಲ್ಲ. ಪ್ರತ್ಯೇಕ ಧರ್ಮ ಹೋರಾಟ ತಟಸ್ಥದ ಹಿಂದೆ ರಾಜಕಾರಣಿಗಳ ಹೊರಳಾಟವಿದೆ. ರಾಜಕಾರಣಿಗಳಿಗೆ ಮತಮುಖ್ಯ. ಸಿದ್ಧಾಂತವಲ್ಲ.ಈ ವಿಷಯ ಎಲ್ಲರಿಗೂ ಗೊತ್ತೇ ಇದೆ’ ಎಂದು ತಿಳಿಸಿದರು.

About Mallikarjun

Check Also

ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕೋರ್ಸ್ಗಳುವಿದ್ಯಾರ್ಥಿಗಳಿಗೆ ಸ್ವಾವಲಂಬನೆ ಜೀವನ ನಡೆಸುತ್ತದೆ: ಡಾ: ಈಶ್ವರ ಶಿ, ಸವಡಿ

ಗಂಗಾವತಿ, 26:ನಗರದಲ್ಲಿ ದಿನಾಂಕ 25-04-2024 ರಂದು ಸ್ಪೂರ್ತಿ ಆಯುರ್ವೇದಿಕ್ ಮೆಡಿಕಲ್ ಕಾಲೇಜ ಮತ್ತು ಡಾ:ಎಸ್.ವಿ.ಸವಡಿ ಆಯುರ್ವೇದಿಕ್ ಆಸ್ಪತ್ರೆಯಲ್ಲಿ ಎಸ್.ಎಸ್.ಎಲ್.ಸಿ ಮತ್ತು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.