ಕಲ್ಯಾಣಸಿರಿ ವಿಶೇಷ

ಬೆಂಗಳೂರು ವಿವಿ: ಸಂವಹನ ವಿಭಾಗದಿಂದ ‘ಫ್ರೆಶರ್ಸ್ ಪಾರ್ಟಿ’ ಆಯೋಜನೆ

Bangalore University: Organized ‘Freshers Party’ by Department of Communication

ಬೆಂಗಳೂರು: ಫೆ.22: ಬೆಂಗಳೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಆಯೋಜಿಸಿದ್ದ ‘ಫ್ರೆಶರ್ಸ್ ಪಾರ್ಟಿ’ಯನ್ನು ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಪ್ರೊ.ಡಾ. ಬಿ. ಶೈಲಶ್ರೀರವರು ಉದ್ಘಾಟಿಸಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳ ಶಿಸ್ತು ಬದ್ಧವಾಗಿ ಅಧ್ಯಯನ ನಡೆಸಿದರೆ ಯಶಸ್ವಿಯಾಗಲು ಪೂರಕವಾಗಲಿದೆ. ಇನ್ನು ಕಾಲೇಜು ಹಂತಗಳಲ್ಲಿ ಸರಿಯಾಗಿ ಮಾಧ್ಯಮಕ್ಕೆ ಸಂಬಂಧಿಸಿದ ಹಲವಾರು ಕೌಶಲ್ಯಗಳನ್ನು ಕಲಿತರೆ ಮುಂಬರುವ ದಿನಗಳಲ್ಲಿ ನಾನಾ ರೀತಿಯ ಮಾಧ್ಯಮಗಳಲ್ಲಿ ಬದುಕು ಕಟ್ಟಿಕೊಳ್ಳಲು ಸಹಕಾರಿಯಾಗಲಿದೆ, ಸಮಾಜಕ್ಕೆ ಇನ್ನಷ್ಟು ಕೊಡುಗೆ ನೀಡಬಹುದೆಂದು ಮತ್ತಿತರ ವಿಷಯಗಳ ಬಗ್ಗೆ ವಿಸ್ತಾರವಾಗಿ ಮಾತನಾಡಿದರು.

ಸಹಾಯಕ ಪ್ರಾಧ್ಯಾಪಕರಾದ ಡಾ. ವಸುಂಧರಾ ಪ್ರಿಯದರ್ಶಿನಿರವರು ಇವರು ಮಾತನಾಡಿದರು. ನಂತರ ಕಾರ್ಯಕ್ರಮದ ಅಂಗವಾಗಿ ಮುಂಚಿತವಾಗಿ ಏರ್ಪಡಿಸಿದ್ದ ವಿಭಾಗದಿಂದ ಹಲವಾರು ಕ್ರೀಡಾ, ಸಾಂಸ್ಕೃತಿಕ, ಮತ್ತಿತರೆ ಚಟುವಟಿಕೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ವಿಭಾಗದ ಮುಖ್ಯಸ್ಥರು ಪ್ರೊ. ಡಾ. ಬಿ.ಶೈಲಶ್ರೀರವರು ಬಹುಮಾನ ನೀಡಿದರು.

ವಿಭಾಗದ ಕಿರಿಯ ಮತ್ತು ಹಿರಿಯ ವಿದ್ಯಾರ್ಥಿಗಳಿಂದ ವಿಶೇಷವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಗಾಯನ ಸ್ಪರ್ಧೆಗಳು, ಮತ್ತಿತರ ಆಯೋಜಿಸಲಾಯಿತು.ಇದೇ ಸಂದರ್ಭದಲ್ಲಿ ಬೋಧಕೇತರ ಸಿಬ್ಬಂದಿಗಳಾದ ನಾಗೇಶ್ ಕೆ.ಎಸ್, ಮಂಜುನಾಥ್, ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ಪದವಿ ವಿದ್ಯಾರ್ಥಿ – ವಿದ್ಯಾರ್ಥಿನಿಯರು, ಮತ್ತಿತರ ವಿದ್ಯಾರ್ಥಿ ಸಮೂಹದವರು ಪಾಲ್ಗೊಂಡಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

13 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

13 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

13 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

13 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

14 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

14 hours ago