Constitution Awareness Jatha successfully held in Gangavati Hanuman bone
ಗಂಗಾವತಿ: ನಗರದಲ್ಲಿ ಫೆಬ್ರವರಿ-೨೩ ರಂದು ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ಯಶಸ್ವಿಯಾಗಿ ನಡೆದಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಯ ಕೊಪ್ಪಳ ಜಿಲ್ಲಾ ಸಂಚಾಲಕರಾದ ಹನುಮಂತ ಮೂಳೆ ಪ್ರಕಟಣೆಯಲ್ಲಿ ತಿಳಿಸಿದರು.
ಸಂವಿಧಾನ ಸಮರ್ಪಣೆ ನಿಮಿತ್ತ ರಾಜ್ಯ ಸರ್ಕಾರ ಆಯೋಜಿಸಿರುವ ಸಂವಿಧಾನ ಜಾಗೃತಿ ರಥಕ್ಕೆ ನಗರದಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು. ಜಾಗೃತಿ ರಥಕ್ಕೂ ಮೊದಲು ನಗರದ ಪ್ರಮುಖ ಬೀದಿಗಳಲ್ಲಿ ಬೃಹತ್ ಬೈಕ್ ರ‍್ಯಾಲಿ ನಡೆಸಿ, ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಯಿತು. ಜಾಥಾ ಕಾರ್ಯಕ್ರಮವು ನಗರದ ಸಿ.ಬಿ.ಎಸ್ ವೃತ್ತದಿಂದ ನ್ಯಾಯಾಲಯದ ಮುಂಭಾಗದಲ್ಲಿರುವ ಅಂಬೇಡ್ಕರ್ ವೃತ್ತದವರೆಗೆ ನಡೆಯಿತು. ಮಾರ್ಗದುದ್ದಕ್ಕೂ ಶಾಲಾ-ಕಾಲೇಜು ಮತ್ತು ಸಂಘ-ಸAಸ್ಥೆಗಳ ಮಕ್ಕಳು, ಕಾರ್ಯಕರ್ತರು, ದಲಿತ ಸಂಘಟನೆಗಳು, ಪ್ರಗತಿಪರ, ಕಾರ್ಮಿಕ ಸಂಘಟನೆಗಳ ಮುಖಂಡರು ಜಾಥಾದಲ್ಲಿ ಪಾಲ್ಗೊಂಡರು.
ಈ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಿದ ಸಂವಿಧಾನ ಜಾಗೃತಿ ಸಮಿತಿಯ ಸಭಾಧ್ಯಕ್ಷರು ಹಾಗೂ ಗಂಗಾವತಿಯ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಗಾಲಿ ಜನಾರ್ಧನರೆಡ್ಡಿಯವರು, ತಾಲೂಕಾಡಳಿತ ಹಾಗೂ ನಗರಾಡಳಿತ, ಸಮಾಜ ಕಲ್ಯಾಣ ಇಲಾಖೆ ಇವರುಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು.