Breaking News

ಸರ್ಕಾರದ ಸೌಲಭ್ಯ ಸದುಪಯೋಗಕ್ಕೆ ಸಲಹೆ-ಪಿಐ ಎಂ.‌ಡಿ. ಫೈಜುಲ್ಲಾ

Advice for efficient use of government facilities-PI M.D. Faizullah

ಜಾಹೀರಾತು

ಕನಕಗಿರಿಯ ಶಾಸಕರ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಪಿಐ ಎಂ.‌ಡಿ. ನಮನ ಫೈಜುಲಾ ಅವರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆಯ ಸೆಟ್‌ವಿತರಿಸಿದರು

ಕನಕಗಿರಿ: ಮಕ್ಕಳ ಭವಿಷ್ಯ ರೂಪಿಸಲು ಪಾಲಕರು ಹಾಗೂ ಶಿಕ್ಷಕರು ಸಾಕಷ್ಟು ಶ್ರಮ ವಹಿಸುತ್ತಾರೆ, ಅವರ‌ ನಿರೀಕ್ಷೆಗಳನ್ನು ಹುಸಿಗೊಳಿಸದೆ ಉತ್ತಮ ಅಂಕಗಳನ್ನು ಪಡೆದುಕೊಂಡು ಸಾಧನೆ ಮಾಡಬೇಕೆಂದು ಪಿಐ ಎಂ.‌ಡಿ. ಫೈಜುಲ್ಲಾ ತಿಳಿಸಿದರು.
ಇಲ್ಲಿನ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಭಾನುವಾರ ಆಯೋಜಿಸಿದ್ದ ಬೇಸಿಕ್ ತರಬೇತಿಯ ಸಮಾರೋಪ ಸಮಾರಂಭ ಹಾಗೂ ಉಚಿತ ಪ್ರಶ್ನೆ ಪತ್ರಿಕೆಯ ಸೆಟ್ ಗಳನ್ನು ವಿತರಿಸಿ ಅವರು ಮಾತನಾಡಿದರು. ದೇಶದ
ಶೈಕ್ಷಣಿಕ ಪ್ರಗತಿಗಾಗಿ ಸರ್ಕಾರ ಹಾಗೂ ಸಂಘ- ಸಂಸ್ಥೆಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ, ಇವುಗಳನ್ನು ಸದುಪಯೋಗ ಪಡೆದುಕೊಳ್ಳುವ ಮೂಲಕ ಜೀವನದಲ್ಲಿ ಯಶಸ್ಸು ಕಾಣಬೇಕೆಂದು ಹೇಳಿದರು.
ಶಿಕ್ಷಕರ ಸಂಘವು ಉಚಿತ ಕಾರ್ಯಾಗಾರ ಆಯೋಜಿಸಿ
ದಾನಿಗಳ ಸಹಾಯ, ಸಹಕಾರದಿಂದ ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕಾಗಿ ಮಕ್ಕಳಿಗೆ
ಪ್ರಶ್ನೆ ಪತ್ರಿಕೆಯ ಸೆಟ್ ನೀಡಿರುವುದು ಶ್ಲಾಘನೀಯ ಎಂದರು.
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ, ಶಿಕ್ಷಣಾಧಿಕಾರಿಗಳ ಸಂಘದ ತಾಲ್ಲೂಕು ಅಧ್ಯಕ್ಷ ಜಗದೀಶ ಹಾದಿಮನಿ ಮಾತನಾಡಿ
ಪ್ರತಿಯೊಬ್ಬರ ಜೀವನದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯಸಿ ಶಿಕ್ಷಣ ಪ್ರಮುಖ ಹಂತವಾಗಿದೆ, ಈ ವೇಳೆಯಲ್ಲಿ ಸಮಯವನ್ನು ವ್ಯರ್ಥವಾಗಿ ಕಳೆಯದೆ
ಅಧ್ಯಯನಕ್ಕೆ ಮೀಸಲಿಡಬೇಕು, ಮೊಬೈಲ್ ಗೀಳಿನಿಂದ ದೂರವಿರಬೇಕೆಂದು ತಿಳಿಸಿದರು.
ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷೆ ಶಂಶಾದಬೇಗಂ ಅವರು ಸಂಘ ಕೈಗೊಂಡ ಶೈಕ್ಷಣಿಕ ಕಾರ್ಯಕ್ರಮ ಹಾಗೂ ಶಿಕ್ಷಕರ ಸೇವೆಯ ಕುರಿತು ಮಾತನಾಡಿದರು. ಶಾಸಕರ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಮಂಜುನಾಥ ಚೂಡಾಮಣಿ,
ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಸಿರ ಶಿರಗೇರಿ, ಸಂಘಟನಾ ಕಾರ್ಯದರ್ಶಿ ಟಿ.‌ಎಸ್. ಜಗದೀಶ, ಸಂಪನ್ಮೂಲ ವ್ಯಕ್ತಿಗಳಾದ ಶಿವಕುಮಾರ ಸೋಮಸಾಗರ, ತೊಂಡೆಪ್ಪ ಇತರರು ಹಾಜರಿದ್ದರು

About Mallikarjun

Check Also

ಸುಳ್ವಾಡಿ ವಿಷ ಪ್ರಸಾದ ಪ್ರಕರಣ ಸಾವಿಗೆ ಕಾರಣರಾದ :ಇಮ್ಮಡಿ ಮಹದೇವಸ್ವಾಮಿ ಜಾಮೀನು ಅರ್ಜಿ ಮತ್ತೆ ವಜಾ.

Sulvadi Visha Prasad case: Cause of death: Immadi Mahadevaswamy’s bail application dismissed again. ವರದಿ : …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.