ಕಲ್ಯಾಣಸಿರಿ ವಿಶೇಷ

ರೈತರ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಿ ರೈತ ಸಂಘದಿಂದ ಪ್ರತಿಭಟನೆ ಎಚ್ಚರಿಕೆ :ರಾಜ್ಯದ್ಯಕ್ಷ ಬಡಗಲುಪುರದ ನಾಗೇಂದ್ರ

Alleging that there has been an attack on the farmers, protest has been warned by the farmers’ association: Nagendra, the state president of Badagalupur.


ವರದಿ :ಬಂಗಾರಪ್ಪ ಸಿ.
ಹನೂರು : ತಾಲೂಕಿನ ಜಲ್ಲಿಪಾಳ್ಯ ಗ್ರಾಮದಲ್ಲಿ ಗುರುವಾರ ರೈತರು ಹಾಗೂ ಗ್ರಾಮದ ಮಹಿಳೆಯ ಮೇಲೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯು, ಹೂಗ್ಯಂ ಗ್ರಾಮ ಅರಣ್ಯ ಇಲಾಖೆ ಅಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ರವರು ಮಾತನಾಡಿ ರೈತರ ಮೇಲೆ ಹಲ್ಲೆ ನಡೆಸಿದ ಅರಣ್ಯ ಇಲಾಖೆಯ ಸಿಬ್ಬಂದಿ ಮೇಲೆ ಕಾನೂನು ಕ್ರಮ ವಾಗಬೇಕು. ಪೊಲೀಸ್ ಠಾಣೆ ಯಲ್ಲಿ ಅವರ ವಿರುದ್ಧ ಎಫ್ ಐ ಆರ್ ದಾಖಲು ಮಾಡಿ,ಕರ್ತವ್ಯದಿಂದ ವಜಾಗೊಳಿಸಬೇಕು.ಅವರ ವಿರುದ್ಧ ಮಾನವ ಹಾಗೂ ಮಹಿಳಾ ಆಯೋಗಕ್ಕೆ ದೂರು ನೀಡಲಾಗುವುದು.
ಇನ್ನೆರಡು ದಿನಗಳಲ್ಲಿ ರೈತರ ಪ್ರತಿಭಟನಾ ಸ್ಥಳಕ್ಕೆ ಡಿ ಎಫ್ ಓ ರವರು ಸ್ಥಳಕ್ಕೆ ಆಗಮಿಸಿ ಸಮಸ್ಯೆಯನ್ನು ಬಗೆಹರಿಸದಿದ್ದಲ್ಲಿ, ಚಾಮರಾಜನಗರ, ಮಂಡ್ಯ, ರಾಮನಗರ ಹಾಗೂ ಮೈಸೂರು ಜಿಲ್ಲೆಗಳಿಂದ ರೈತ ಸಂಘದ ಪದಾಧಿಕಾರಿಗಳು ಡಿ ಎಫ್ ಓ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ತಿಳಿಸಿದರು.ಎರರು ದಿನಗಳಿಂದಲೂ ರೈತರು ಪ್ರತಿಭಟನೆ ನಡೆಸುತಿದ್ದರು, ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಬಾರದ ಕಾರಣ ಪ್ರತಿಭಟನೆ ಮುಂದುವರೆಸಿದ್ದೆವೆ ಎಂದರು.

ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಎ ಮಹೇಶ್ ಪ್ರಭು, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಸರ್ವೋದಯ ಪಕ್ಷದ ರಾಜ್ಯ ಪ್ರದಾನ ಕರಾಯದರ್ಶಿ ಪ್ರಸನ್ನ ಗೌಡ, ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಗೌಡೇ ಗೌಡ, ಹನೂರು ತಾಲೂಕು ಅಧ್ಯಕ್ಷ ಅಮ್ಜದ್ ಖಾನ್, ರವಿನಾಯ್ಡು, ರಾಜೇಂದ್ರ, ಅರ್ಪುದ ರಾಜ್, ಕಾಶಿಗೌಡ, ಈರಣ್ಣ, ಹುಚ್ಚಯ್ಯ, ಮಹಾದೇವ್, ಮುನಿಸ್ವಾಮಿ, ಪಳನಿ ಸ್ವಾಮಿ,ಕೃಷ್ಣ, ವೆಂಕಟೇಶ್, ರಾಜಮಣಿ,ವಿವಿಧ ಗ್ರಾಮದ ಪದಾಧಿಕಾರಿಗಳು, ಗ್ರಾಮಸ್ಥರು ಹಾಜರಿದ್ದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

18 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

18 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

19 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

19 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

19 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

19 hours ago