Breaking News

ಪದವಿಪರೀಕ್ಷಾ ಶುಲ್ಕ ಹೆಚ್ಚಳ ಖಂಡಿಸಿ ಹಾಗೂ ಅಂಕಪಟ್ಟಿ ನೀಡಲು ಒತ್ತಾಯಿಸಿ. ತಡೆಹಿಡಿದ ಫಲಿತಾಂಶ ಬಿಡುಗಡೆ ಮಾಡಲು ಆಗ್ರಹಿಸಿ ಪ್ರತಿಭಟನೆ.

Condemn the increase in degree examination fee and demand to provide mark sheet. Protest demanding the release of withheld results.



ಗಂಗಾವತಿ: ಪದವಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಏಕಾಏಕಿ 1200 ರೂ. ಕ್ಕಿಂತ ಹೆಚ್ಚು ಮಾಡಿರುವುದು ಖಂಡನಾರ್ಹವಾಗಿದೆ. ಒಂದೆಡೆ ರಾಜ್ಯದಲ್ಲಿ ಬರಗಾಲ ಆವರಿಸಿದ್ದು ಕೊಪ್ಪಳ ಜಿಲ್ಲೆಯು ಬರಗಾಲ ಪ್ರದೇಶ ಎಂದು ಸರ್ಕಾರ ಗುರುತಿಸಿದ್ದು ಪೋಷಕರ ಕೈಗೆ ದುಡಿಮೆ ಇಲ್ಲದಂತಾಗಿದೆ ಬಳ್ಳಾರಿ ವಿಶ್ವವಿದ್ಯಾಲಯವು ಪರೀಕ್ಷ ಶುಲ್ಕ ಹೆಚ್ಚಳ ಮಾಡಿರುವುದು ಸರಿಯಾದ ಕ್ರಮವಲ್ಲ.ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ ಎಸ್ ಎಫ್ ಐ. ಕಾಲೇಜಿನ ವಿದ್ಯಾರ್ಥಿಗಳು ಆಗ್ರಹಿಸಿದರು.

ಬಳ್ಳಾರಿ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳ ಜೊತೆ ಚೆಲ್ಲಾಟವಾಡುತ್ತಿದೆ ಇದುವರೆಗೂ ವಿದ್ಯಾರ್ಥಿಗಳಿಗೆ ಮೂರು ವರ್ಷ ಕಳೆದರೂ ಅಂಕಪಟ್ಟಿ ನೀಡಿಲ್ಲ. ವಿದ್ಯಾರ್ಥಿಗಳಿಗೆ ಕಳಪೆ ಮಟ್ಟದ ಅಂಕಗಳನ್ನು ನೀಡಿದ್ದಾರೆ. ಸುಮಾರು ವಿದ್ಯಾರ್ಥಿಗಳು ಬಳ್ಳಾರಿಗೆ ಅಲೆದಾಡಿದರೂ ಸಹ ಅವರ ಫಲಿತಾಂಶ ಮತ್ತು ಅಂಕಪಟ್ಟಿ ಇನ್ನುವರಿಗಾದರೂ ಕೈಗೆ ಸಿಕ್ಕಿಲ್ಲ.
ಅನೇಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಲಭಿಸುತ್ತಿಲ್ಲ. ಅನೇಕ ವಿದ್ಯಾರ್ಥಿಗಳು ಮುಂದಿನ ಸೆಮಿಸ್ಟರ ಪರೀಕ್ಷೆ ಬರೆಬೇಕೆಂದರೆ 4ನೇ ಸೆಮಿಸ್ಟರ್ ಫಲಿತಾಂಶ ಬಿಡುಗಡೆ ಆಗದೇ ಇರುವುದರಿಂದ ವಿದ್ಯಾರ್ಥಿಗಳು 5 ನೇ ಸೆಮಿಸ್ಟರ್ ಗೆ ತೊಂದರೆ ಆಗುತ್ತದೆ. ಅನೇಕ ಸಮಸ್ಯೆಗಳಿದ್ದರೂ ಬಳ್ಳಾರಿ ವಿಶ್ವವಿದ್ಯಾಲಯವು ಯಾವುದೇ ರೀತಿಯ ಸಮಸ್ಯೆ ಬಗೆಹರಿಸಲು ಮುಂದಾಗುತ್ತಿಲ್ಲ. ವಿದ್ಯಾರ್ಥಿಗಳು ನೂರಾರು ರೂಪಾಯಿ ಖರ್ಚು ಮಾಡಿ ಬಳ್ಳಾರಿ ವಿಶ್ವವಿದ್ಯಾಲಯಕ್ಕೆ ಹೋಗಿ ಬಂದರೂ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳಿಗೆ ಸರಿಯಾಗಿ ಸ್ಪಂದನೆ ಮಾಡುತ್ತಿಲ್ಲ.
ಇಂತಹ ಅವಜ್ಞಾನಿಕ ಪದ್ಧತಿಗಳ ವಿರುದ್ಧ ಇಂದು ವಿದ್ಯಾರ್ಥಿಗಳೆಲ್ಲರೂ ಸೇರಿ ಪ್ರಾಚಾರ್ಯರ ಮುಖಾಂತರ ಬಳ್ಳಾರಿ ವಿಶ್ವವಿದ್ಯಾಲಯಕ್ಕೆ ಮನವಿ ಸಲ್ಲಿಸಲಾಯಿತು.

About Mallikarjun

Check Also

ಅಶೋಕಸ್ವಾಮಿ ಹೇರೂರಭೇಟಿ:ಕಾಂಗ್ರೆಸ್ಸಿಗರಿಂದಮತಯಾಚನೆ.

ಗಂಗಾವತಿ:ರಾಜ್ಯ ವಾಣಿಜೋಧ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ನಿರ್ದೇಶಕ ಮತ್ತು ರಾಜ್ಯ ಔಷಧ ವ್ಯಾಪಾರಿಗಳ ಸಂಘದ ಉಪಾಧ್ಯಕ್ಷ ಅಶೋಕಸ್ವಾಮಿ ಹೇರೂರ ಅವರನ್ನು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.