Breaking News

ಮುಗ್ದ ರೈತರೊಂದಿಗೆ ಚಲ್ಲಾಟವಾಡುತ್ತಿರುವ ಅರಣ್ಯ ಇಲಾಖೆಯ ಅಧಿಕಾರಿಗಳು : ಮಾಜಿ ಶಾಸಕ ಆರ್ ನರೇಂದ್ರ ಆರೋಪ

Officials of Forest Department who are quarreling with innocent farmers: Former MLA R Narendra alleges.


ವರದಿ : ಬಂಗಾರಪ್ಪ ಸಿ
ಹನೂರು: ನಮ್ಮ ಕ್ಷೇತ್ರದಲ್ಲಿ ಕೆಲವು ದಿನಗಳ ಹಿಂದೆ ಅರಣ್ಯ ಇಲಾಖೆಯ ಕಿರಿಯ ಅಧಿಕಾರಿಗಳು ರೈತರು ಹಾಗೂ ನಾಗರಿಕರ ಮೇಲೆ ಹಲ್ಲೆ ನಡೆಸುತ್ತಿರುವುದು ಖಂಡನೀಯವಾದುದ್ದು ಎಂದು ಮಾಜಿ ಶಾಸಕ ಆರ್ ನರೇಂದ್ರ ಆಕ್ರೋಶ ವ್ಯಕ್ತಪಡಿಸಿದರು.
ಹನೂರುಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕಾಡಂಚಿನ ಗ್ರಾಮಗಳಲ್ಲಿ ಕಳೆದ ವಾರದಲ್ಲಿ ರೈತರುಗಳು ತಮ್ಮ ಜಮೀನಿನಲ್ಲಿ ಕಾಡಾನೆ ದಾಳಿಯಿಂದ ಪಸಲು ನಾಶವಾಗಿರುವುದರ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ತಿಳಿಸಲು ದೂರವಾಣಿ ಕರೆ ಮಾಡಿದ್ದಾರೆ. ಆದರೆ ಅವರು ಎರಡು ದಿನಗಳ ಕಳೆದರೂ ಬಾರದೆ ಇದ್ದಿದ್ದರಿಂದ ಮತ್ತೊಮ್ಮೆ ಕರೆ ಮಾಡಿ ಆನೆ ಸತ್ತು ಹೋಗಿದೆ ಎಂದು ಮಾಹಿತಿ ನೀಡಿ ಸ್ಥಳಕ್ಕೆ ಕರೆಸಿಕೊಂಡಿದ್ದಾರೆ. ರೈತರು ತಪ್ಪು ಮಾಹಿತಿ ನೀಡಿ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಕರೆಸಿಕೊಂಡಿರುವುದು ಮೇಲ್ನೋಟಕ್ಕೆ ತಪ್ಪಾಗಿರರಬಹುದು, ಆದರೆ ಅವರ ನೋವು ನಲಿವು ಸಂಕಟವನ್ನು ಹೇಳಿಕೊಳ್ಳಲು ಈ ರೀತಿ ಮಾಡಿದ್ದಾರೆ ಹೊರತು ಅನ್ಯ ಉದ್ದೇಶದಿಂದ ಅವರು ದೂರವಾಣಿ ಕರೆ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿರುವುದರಿಂದ ಈ ಪ್ರಕರಣಕ್ಕೆ ಸುಖಾಂತ್ಯಗೊಳಿಸಬೇಕು . ಈ ಸಂದರ್ಭದಲ್ಲಿ ರೈತರ ಬೆಳೆ ನಾಶಕ್ಕೆ ಪರಿಹಾರ ಕೊಡುವ ಬದಲು ಅವರ ಜೊತೆ ವಾಗ್ವಾದ ನಡೆಸಿ ಹಲ್ಲೇ ಮಾಡಿರುವುದು ಸರಿಯಾದ ಕ್ರಮವಲ್ಲ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ತಮ್ಮ ಇಲಾಖೆಯ ಕಿರಿಯ ಅಧಿಕಾರಿಗಳಿಗೆ ಇನ್ನು ಮುಂದೆ ರೈತರ ಮೇಲೆ ಹಲ್ಲೆ ಮಾಡದಂತೆ ಸೂಕ್ತ ನಿರ್ದೇಶನ ನೀಡಬೇಕು ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಸದಸ್ಯರುಗಳು ಸೇರಿದಂತೆ ಇನ್ನಿತರರು ಹಾಜರಿದ್ದರು .

About Mallikarjun

Check Also

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ. ಅಪಾರ ಪ್ರಮಾಣದಲ್ಲಿ ನಷ್ಟ.

ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಕುಪ್ಪಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಟ್ಟಿಗೆಹಳ್ಳಿ ಗ್ರಾಮದ ದಲಿತ ಸಮುದಾಯದ ಕೆಂಪರಾಮಯ್ಯ ಸನ್ ಆಫ್ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.