Breaking News

ಆರ್.ಟಿ.ನಗರದಹೆಚ್.ಎಂ.ಟಿ ಮೈದಾನದಲ್ಲಿ ಹೆಬ್ಬಾಳ ವಿಧಾನ ಸಭಾ ಕ್ಷೇತ್ರದ ಜನಸ್ಪಂದನ ಕಾರ್ಯಕ್ರಮ

Hebbala Vidhan Sabha Constituency Publicity Program at HMT Maidan, RT Nagar

ಜಾಹೀರಾತು
ಜಾಹೀರಾತು

ಬೆಂಗಳೂರು:(ಫೆಬ್ರವರಿ 28):- ಹೆಬ್ಬಾಳ ವಿಧಾನ ಸಭಾ ಕ್ಷೇತ್ರದ ಶಾಸಕರು ಆದ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಶ್ರೀ ಬಿ.ಎಸ್. ಸುರೇಶ(ಬೈರತಿ) ಅವರ ಅಧ್ಯಕ್ಷತೆಯಲ್ಲಿ ಆರ್.ಟಿ.ನಗರದ ಹೆಚ್.ಎಂ.ಟಿ ಮೈದಾನದಲ್ಲಿ ಹೆಬ್ಬಾಳ ವಿಧಾನ ಸಭಾ ಕ್ಷೇತ್ರದ ಜನಸ್ಪಂದನ ಕಾರ್ಯಕ್ರಮ ಜರುಗಿತು.

ರಾಜ್ಯ ಸರ್ಕಾರದ ಪಂಚ ಖಾತ್ರಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಲಾಗಿದೆ. ಅದರ ಸದುಪಯೋಗ ಪಡಿಸಿಕೊಳ್ಳಲು ನೆರೆದಿದ್ದ ಜನರಿಗೆ ಸಚಿವರಾದ ಶ್ರೀ ಬೈರತಿ ಸುರೇಶ ಅವರು ಕರೆ ನೀಡಿದರು.

ಅಲ್ಲದೇ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಅಹವಾಲು ಬಂದಾಗ, ಬೇಸಿಗೆ ಮುಗಿಯುವ ವರೆಗೂ ಕ್ಷೇತ್ರದಾದ್ಯಂತ 8 ಟ್ಯಾಂಕರ್ ಗಳನ್ನು ಒದಗಿಸಲಾಗಿದೆ. ಕಡಿಮೆ ಬಂದಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಒದಗಿಸಲಾಗುತ್ತದೆ ಎಂದು ಸಚಿವರಾದ ಶ್ರೀ ಬೈರತಿ ಸುರೇಶ ಅವರು ತಿಳಿಸಿದರು.

ಬೆಂಗಳೂರು ಜಲ ಮಂಡಲಿ ಅಧ್ಯಕ್ಷರಾದ ರಾಮ್ ಪ್ರಸಾದ್, ಬಿಬಿಎಂಪಿ ಅಪರ ಆಯುಕ್ತರಾದ ಆರ್.ಸ್ನೇಹಾಲ್, ಬಿಬಿಎಂಪಿ ಜಂಟಿ ಆಯುಕ್ತರಾದ ಪಲ್ಲವಿ, ಉಪ ಪೋಲಿಸ್ ಆಯುಕ್ತರು, ಆರೋಗ್ಯ ವೈದ್ಯಾಧಿಕಾರಿ, ಬೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಸೇರಿದಂತೆ ಬಿಎಂಟಿಸಿ, ಆಹಾರ ಇಲಾಖೆ ಸೇರಿದಂತೆ ಕೆಲ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

About Mallikarjun

Check Also

ಪುರುಷೋತ್ತಮ ದಾಸ್ ಹೆಗ್ಗಡೆ ಅವರ  “ಯಯಾತಿ” ಕಾದಂಬರಿ ಬಿಡುಗಡೆ 

Purushottam Das Heggade’s novel “Yayati” released ಅತಿ ಕಾಮ ಅತಿರೇಖವಾದ್ದು, ಮನಷ್ಯನ ಶ್ರೇಯಸ್ಸಿಗೆ ಪೂರಕವಲ್ಲ ; ಸಂಸ್ಕೃತಿ ಚಿಂತಕ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.