Breaking News

ಪಲ್ಸ್ ಪೋಲಿಯೊ ಹನಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮಾಜಿ ಶಾಸಕಿ ಪರಿಮಳನಾಗಪ್ಪ

Former MLA Parimana Nagappa participated in the Pulse Polio Honey program.


ವರದಿ : ಬಂಗಾರಪ್ಪ ಸಿ
ಹನೂರು : ಸರ್ಕಾರದಿಂದ ರೂಪಿಸಿರುವ ಯಶಸ್ವಿ ಕಾರ್ಯಕ್ರಮಗಳಲ್ಲೋಂದಾದ ಪಲ್ಸ್ ಪೋಲಿಯೊ ಕಾರ್ಯಕ್ರಮವು ನಮ್ಮ ರಾಜ್ಯಾದ್ಯಂತ ಮಾರ್ಚ್ 3 ರಿಂದ 6ರವರೆಗೆ ಲಸಿಕೆಯನ್ನು ಚಿಕ್ಕ ಮಕ್ಕಳಿಗೆ ಹಾಕಲು ಪ್ರಾರಂಭಿಸಿದ್ದು ಇಂತಹ ಕಾರ್ಯಕ್ರಮಗಳಲ್ಲಿ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಲಸಿಕೆ ಹಾಕಬೇಕಾಗಿದೆ ಅಲ್ಲದೆ ಈ ಕಾರ್ಯಕ್ರಮದಿಂದ ಯಾವುದೇ ಮಗುವು ಸಹ ಪಲ್ಸ್ ಪೋಲಿಯೋ ಹನಿಯಿಂದ ವಂಚಿತವಾಗದಂತೆ ಸಂಭಂದಪಟ್ಟ ಅಧಿಕಾರಿಗಳು ಕ್ರಮವಹಿಸಬೇಕೆಂದು ಎಂದು ಸರಕಾರ ಸೂಚನೆಯನ್ನು ನೀಡಿದೆ ಇದನ್ನು ಸದುಪಯೋಗ ಪಡಿಸಿಕೊಳ್ಳಲು ಮಾಜಿ ಶಾಸಕಿ ಪರಿಮಳ ನಾಗಪ್ಪ ತಿಳಿಸಿದರು .
ಕೊಳ್ಳೇಗಾಲ ತಾಲೂಕಿನ ಕೊಂಗರಹಳ್ಳಿ ಗ್ರಾಮದ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿನ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ನಮ್ಮ ಭಾಗವು ಹೆಚ್ಚು ಭಾಗವು ಗ್ರಾಮೀಣ ಪ್ರದೇಶಗಳಿಂದ ಕೂಡಿದ್ದು ಮಕ್ಕಳಿಗೂ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ವಿತರಣೆಯಾಗಬೇಕೆಂದು ಸರ್ಕಾರ ಅಧಿಕಾರಿಗಳು ಶ್ರಮಪಡುತ್ತಿದ್ದಾರೆ ಅದೆ ರೀತಿಯಲ್ಲಿ ಐದು ವರ್ಷದ ಒಳಗಿನ ಮಕ್ಕಳಿಗೆಲ್ಲ ಸಂಪೂರ್ಣವಾಗಿ ಪೋಲಿಯೋ ಹನಿ ಹಾಕಿಸಬೇಕಾಗಿದೆ ಎಂದು ತಿಳಿಸಿದರು .
ಇದೇ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ ಡಾ ಶ್ರೀನಿವಾಸ್‌, ಕೊಂಗರಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾಧಿಯಾಗಿ ಸದಸ್ಯರು ಸೇರಿದಂತೆ, ಆಸ್ಪತ್ರೆ ಸಿಬ್ಬಂದಿಗಳು ಇನ್ನಿತರರು ಹಾಜರಿದ್ದರು.

About Mallikarjun

Check Also

ಹನೂರು ವಿದಾನಸಭಾ ಕ್ಷೇತ್ರದಲ್ಲಿ ಮೂಲಭೂತ ಸೌಲಭ್ಯಗಳಿಗೆ ಆಗ್ರಹಿಸಿ ಮತದಾನ ಬಹಿಷ್ಕಾರ ಮತಗಟ್ಟೆ ಧ್ವಂಸ

ವರದಿ : ಬಂಗಾರಪ್ಪ ಸಿ .ಹನೂರು : ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕಾರದ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.