Breaking News

ಆನೆಗುಂದಿ ಉತ್ಸವದಲ್ಲಿ ಸ್ಥಳೀಯ ಕಲಾವಿದರಿಗೆ ಆಧ್ಯತೆ ನೀಡಲು ಒತ್ತಾಯ: ಚಿದಾನಂದ ನಾಯಕ

Urge to give preference to local artists in Anegundi festival: Chidananda Nayaka

ಗಂಗಾವತಿ: ಇದೇ ತಿಂಗಳು ೧೧ ಮತ್ತು ೧೨ ರಂದು ಎರಡು ದಿನಗಳ ಕಾಲ ಆನೆಗೊಂದಿ ಉತ್ಸವ ನಡೆಯಲಿದ್ದು, ಉತ್ಸವದಲ್ಲಿ ಸ್ಥಳೀಯ ಕಲಾವಿದರಿಗೆ ಕಲೆ ಪ್ರದರ್ಶನಕ್ಕಾಗಿ ಆಧ್ಯತೆ ನೀಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಬಿಮಾನಿ ಬಣ) ಸಂಘಟನೆಯ ಕೊಪ್ಪಳ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿದಾನಂದ ನಾಯಕ ಪ್ರಕಟಣೆಯಲ್ಲಿ ಸ್ಥಳೀಯ ಶಾಸಕರಿಗೆ, ತಾಲೂಕಾಡಳಿತ ಹಾಗೂ ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ.
ನಮ್ಮ ಕೊಪ್ಪಳ ಜಿಲ್ಲೆಯು ಸಂಗೀತ, ಜಾನಪದ, ಸಾಂಸ್ಕೃತಿಕವಾಗಿ ಶ್ರೀಮಂತ ಜಿಲ್ಲೆಯಾಗಿದ್ದು, ಈ ಭಾಗದಲ್ಲಿ ಸಾಕಷ್ಟು ಕಲಾವಿದರು ಇದ್ದು, ಸರಿಯಾದ ವೇದಿಕೆ ಸಿಗದೇ ತಮ್ಮ ಕಲೆಯನ್ನು ಪ್ರದರ್ಶಿಸಲು ಅವಕಾಶ ವಂಚಿತರಾಗಿರುತ್ತಾರೆ. ಇಂತಹ ಕಲಾವಿದರನ್ನು ಗುರುತಿಸಿ, ಕಲೆಯನ್ನು ಪ್ರದರ್ಶಿಸಲು ಅವಕಾಶ ಮಾಡಿಕೊಡಬೇಕು. ಹಾಗೆಯೇ ಆನೆಗೊಂದಿ ಉತ್ಸವವನ್ನು ಪ್ರತಿವರ್ಷ ಹಂಪಿ ಉತ್ಸವದ ಜೊತೆಗೆ ನಡೆಸುವ ಮೂಲಕ ವಿಜಯನಗರ ಸಾಮ್ರಾಜ್ಯದ ಗತವೈಭವನ್ನು ಹೆಚ್ಚಿಸಬೇಕು. ಈ ಉತ್ಸವಗಳಲ್ಲಿ ಸ್ಥಳೀಯ ಬಡ ಕಲಾವಿದರನ್ನು ಗುರುತಿಸಿ ಅವಕಾಶ ನೀಡಬೇಕೆಂದು ಸ್ಥಳೀಯ ಶಾಸಕರು, ಸಂಸದರು, ಜಿಲ್ಲಾಡಳಿತ ಹಾಗೂ ತಾಲೂಕಾಡಳಿತಕ್ಕೆ ನಮ್ಮ ಕರವೇ (ಸ್ವಾಭಿಮಾನಿ ಬಣ) ಸಂಘಟನೆ ಆಗ್ರಹಿಸಿದೆ ಎಂದು ತಿಳಿಸಿದರು.

About Mallikarjun

Check Also

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ. ಅಪಾರ ಪ್ರಮಾಣದಲ್ಲಿ ನಷ್ಟ.

ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಕುಪ್ಪಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಟ್ಟಿಗೆಹಳ್ಳಿ ಗ್ರಾಮದ ದಲಿತ ಸಮುದಾಯದ ಕೆಂಪರಾಮಯ್ಯ ಸನ್ ಆಫ್ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.