Breaking News

ಕೊಟ್ಟಲಗಿಅಮ್ಮಾಜೇಶ್ವರಿಏತನೀರಾವರಿಯೋಜನೆಗೆಮುಖ್ಯಮಂತ್ರಿಸನ್ಮಾನ್ಯಶ್ರೀಸಿದ್ದರಾಮಯ್ಯನವರಿಂದ ಶಂಕುಸ್ಥಾಪನೆ

Foundation stone laying for Kottalagi Ammajeshwari Irrigation Project by Hon’ble Chief Minister Shri Siddaramaiah

ಜಾಹೀರಾತು

ಲಕ್ಷ್ಮಣ ಸವದಿ ಜನಪರ, ರೈತಪರ ಕಾಳಜಿಯುಳ್ಳ ಜನಪ್ರಿಯ ರಾಜಕಾರಣಿ ಎಂದು ಬಣ್ಣಿಸಿದ ರಾಜ್ಯದ ದೊರೆ

ಅಥಣಿ : ಮಾಜಿ ಉಪಮುಖ್ಯಮಂತ್ರಿಗಳು, ಅಥಣಿ ಮತಕ್ಷೇತ್ರದ ಶಾಸಕರಾದ ಲಕ್ಷ್ಮಣ ಸಂ. ಸವದಿಯವರು ರೈತಪರ, ಜನಪರ ಕಾಳಜಿಯುಳ್ಳ ಜನಪ್ರಿಯ ನಾಯಕರಾಗಿದ್ದಾರೆ. ರೈತರ ಕಲ್ಯಾಣಕ್ಕಾಗಿ ಅವರು ಅಥಣಿ ಮತಕ್ಷೇತ್ರವನ್ನು ಸಂಪೂರ್ಣ ನೀರಾವರಿ ಮಾಡಲು ಶ್ರಮಿಸಿದ್ದಾರೆ. ಈಗ ಕೊಟ್ಟಲಗಿ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆಗೆ ಸುಮಾರು 1486 ಕೋಟಿ ರೂ. ಅನುದಾನದಲ್ಲಿ ಕಾಮಗಾರಿಗೆ ಚಾಲನೆ ನೀಡಿದ್ದು, ಇದು ಈ ಭಾಗದ ರೈತರ ನೀರಾವರಿ ಸಮಸ್ಯೆ ನೀಗಿಸಿ ಅವರ ಬಾಳಲ್ಲಿ ಹೊಸ ಬೆಳಕು ಮೂಡಿಸಲಿದೆ. ಆದ್ದರಿಂದ ಇಲ್ಲಿನ ಜನತೆ ರೈತ ನಾಯಕರಾದ ಲಕ್ಷ್ಮಣ ಸಂ. ಸವದಿಯವರ ಕೈ ಮತ್ತಷ್ಟು ಬಲಪಡಿಸಬೇಕು ಎಂದು ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರು ಹೇಳಿದರು.
ಅವರು ಇಂದು ಅಥಣಿ ತಾಲೂಕಿನ ಕೊಟ್ಟಲಗಿ ಗ್ರಾಮದಲ್ಲಿ ಜರುಗಿದ ತಾಲೂಕಿನ ಪೂರ್ವ ಭಾಗದ 10ಕ್ಕೂ ಹೆಚ್ಚು ಹಳ್ಳಿಗಳ ಸುಮಾರು 70 ಸಾವಿರ ಎಕರೆಗೂ ಹೆಚ್ಚಿನ ಪ್ರದೇಶದ ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಲಿರುವ, ಹಾಗೂ 13ಕ್ಕೂ ಹೆಚ್ಚು ಕೆರೆಗಳಿಗೆ ನೀರು ಒದಗಿಸಲಿರುವ ಸುಮಾರು 1486 ಕೋಟಿ ರೂ. ವೆಚ್ಚದ ಮಹತ್ವಾಕಾಂಕ್ಷಿ ಬೃಹತ್ ನೀರಾವರಿ ಯೋಜನೆಯಾದ ಕೊಟ್ಟಲಗಿ ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ, ಹಿಂದುಳಿದವರಿಗೆ, ರೈತರಿಗೆ ಬಹಳಷ್ಟು ಅನುಕೂಲವಾಗಿವೆ. ಆದ್ದರಿಂದ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಜನರಲ್ಲಿ ಮನವಿ ಮಾಡಿದರು.
ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ.ಕೆ. ಶಿವಕುಮಾರ, ಸಚಿವರಾದ ಶ್ರೀ ಸತೀಶ ಜಾರಕಿಹೊಳಿ, ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ, ಎಂ.ಬಿ. ಪಾಟೀಲ ಅವರು ಸಭೆಯನ್ನುದ್ದೇಶಿಸಿ ಮಾತನಾಡಿದರು. ಮಾಜಿ ಉಪಮುಖ್ಯಮಂತ್ರಿಗಳು, ಅಥಣಿ ಮತಕ್ಷೇತ್ರದ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸಂ. ಸವದಿಯವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಚಿವರಾದ ಶ್ರೀ ಆರ್.ಬಿ. ತಿಮ್ಮಾಪುರ, ಸರ್ಕಾರದ ಮುಖ್ಯ ಸಚೇತಕ ಶ್ರೀ ಅಶೋಕ ಪಟ್ಟಣ, ವಿ.ಪ. ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಕುಡಚಿ ಶಾಸಕರಾದ ಮಹೇಂದ್ರ ತಮ್ಮಣ್ಣವರ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶ್ರೀ ಲಕ್ಷ್ಮಣರಾವ ಚಿಂಗಳೆ ಸೇರಿದಂತೆ ಮತ್ತಿತರ ಗಣ್ಯಮಾನ್ಯರು ವೇದಿಕೆ ಮೇಲೆ ಉಪಸ್ಥಿತರಿದ್ದರು. ಅಥಣಿ ಮತಕ್ಷೇತ್ರದಲ್ಲಿನ ವಿವಿಧ ಮುಖಂಡರು, ಮಹಿಳೆಯರು, ರೈತ ಬಾಂಧವರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದು ಬೃಹತ್ ಕಾರ್ಯಕ್ರಮದ ಯಶಸ್ಸಿಗೆ ಸಾಕ್ಷಿಯಾಯಿತು.

About Mallikarjun

Check Also

ಸುಳ್ವಾಡಿ ವಿಷ ಪ್ರಸಾದ ಪ್ರಕರಣ ಸಾವಿಗೆ ಕಾರಣರಾದ :ಇಮ್ಮಡಿ ಮಹದೇವಸ್ವಾಮಿ ಜಾಮೀನು ಅರ್ಜಿ ಮತ್ತೆ ವಜಾ.

Sulvadi Visha Prasad case: Cause of death: Immadi Mahadevaswamy’s bail application dismissed again. ವರದಿ : …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.