Breaking News

ಶಿವರಾತ್ರಿ ಪ್ರಯುಕ್ತ ಮಾದಪ್ಪನ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ಪ್ರಾಧಿಕಾರದವತಿಯಿಂದ ಸಕಲ ಸೌಕರ್ಯಗಳನ್ನು ಒದಗಿಸಲು ಸದಾ ಸಿದ್ದ : ಕಾರ್ಯದರ್ಶಿ ಎ ಇ ರಘು

The authority is always ready to provide all facilities to the devotees who come to see Madappa on Shivratri: Secretary AE Raghu

ವರದಿ : ಬಂಗಾರಪ್ಪ ಸಿ .
ಹನೂರು:ಪ್ರಸಿದ್ದ ಯಾತ್ರ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಕ್ಷೇತ್ರಕ್ಕೆ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಲಕ್ಷಾಂತರ ಭಕ್ತರು ಪಾದಯಾತ್ರೆಯ ಮೂಲಕ ಹಾಗೂ ವಾಹನಗಳಲ್ಲಿ ಆಗಮಿಸುತ್ತಾರೆ ಅವರೆಲ್ಲರಿಗೂ
ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಎಲ್ಲಾ ರೀತಿಯ ಸೌಲಭ್ಯ ಗಳನ್ನು ಒದಗಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಶ್ರೀ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ ಇ ರಘ ತಿಳಿಸಿದರು .

ಹನೂರು ಕ್ಷೇತ್ರ ವ್ಯಾಪ್ತಿಯಲ್ಲಿನ ಶ್ರೀ ಮಹದೇಶ್ವರ ಬೆಟ್ಟದಲ್ಲಿ ಮಾತನಾಡಿದ ಪ್ರಾಧಿಕಾರದ ಕಾರ್ಯದರ್ಶಿಗಳು ,ನಮ್ಮ ಕ್ಷೇತ್ರಕ್ಕೆ
ಕಳೆದ ಮೂರು ದಿನಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಮಾದಪ್ಪನ ಭಕ್ತರು ದೂರದ ಊರುಗಳಿಂದ ಆಗಮಿಸುತಗತಿದ್ದು ಕನಕಪುರ, ರಾಮನಗರ, ಬಿಡದಿ, ಚನ್ನಪಟ್ಟಣ ಕಡೆಗಳಿಂದ ಬರುವ ಜನರು ಕಾವೇರಿ ನದಿ ಸಂಗಮದ ಮೂಲಕ ಆಗಮಿಸುತ್ತಿದ್ದಾರೆ. ಇದಲ್ಲದೆ ಮಂಡ್ಯ ಜಿಲ್ಲೆಯ ವಿವಿಧ ಗ್ರಾಮಗಳಿಂದ ಸಾವಿರಾರು ಸಂಖ್ಯೆಯಲ್ಲಿ ಪಾದಯಾತ್ರೆಯ ಮೂಲಕ ಹನೂರು ಮಾರ್ಗವಾಗಿ ಬರುತ್ತಿದ್ದಾರೆ.
ಕಳೆದ ಎರಡು ವರ್ಷಗಳಿಗೆ ಹೋಲಿಕೆ ಮಾಡಿದರೆ ಈ ವರ್ಷ ಭಕ್ತಾದಿಗಳ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗಿದೆ. ಹರಕೆ ಹೊತ್ತ ಭಕ್ತಾದಿಗಳು ಹಗಲು-ರಾತ್ರಿ, ಚಳಿ- ಬಿಸಿಲು ಲೆಕ್ಕಿಸದೆ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾರೆ.
ಪ್ರತಿ ವರ್ಷದಂತೆ ಈ ವರ್ಷವೂ ತಾಲ್ಲೂಕಿನ ಶಾಗ್ಯ ಗ್ರಾಮದ ಬಳಿ ಪಾದಯಾತ್ರೆಯ ಮೂಲಕ ಬರುವಂತಹ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಖಾಸಗಿಯವರು ಹಮ್ಮಿಕೊಂಡಿದ್ದಾರೆ .
ನೂರಾರು ಭಕ್ತಾದಿಗಳು ಸರದಿಯ ರೂಪ ದಲ್ಲಿ ಹಣವನ್ನು ಸಂಗ್ರಹಿಸಿ ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾರ್ಗ ಮಧ್ಯದ ನೆರಳಿನಲ್ಲಿ ವಿಶ್ರಾಂತಿಯನ್ನು ಪಡೆಯುತ್ತಾ ಅಡುಗೆ ತಯಾರಿಸಿ ಒಟ್ಟಿಗೆ ಸೇರಿ ಸಹ ಭೋಜನ ವನ್ನು ಸವಿದು ಸಂಚರಿಸುತ್ತಿರುವುದು ಕಂಡುಬರುತ್ತಿದೆ.
ಪಾದಯಾತ್ರೆಗಳ ಅನುಕೂಲಕ್ಕಾಗಿ ತಾಳಬೆಟ್ಟ ದಿಂದ ಮಲೆ ಮಹದೇಶ್ವರ ಬೆಟ್ಟದವರೆಗೆ ಸುಮಾರು 10 ಕಡೆ ಮಿನಿ ಟ್ಯಾಂಕ್‌ಗಳನ್ನು ಪ್ರಾಧಿಕಾರದ ವತಿಯಿಂದ ಇಡಲಾಗಿದ್ದು ಸಮರ್ಪಕವಾಗಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಇದಲ್ಲದೆಭಕ್ತಾದಿಗಳ ಆರೋಗ್ಯ ದೃಷ್ಟಿಯಿಂದ ತಾಳಬೆಟ್ಟ ದಲ್ಲಿ ತಾತ್ಕಾಲಿಕ ಪ್ರಾಥಮಿಕ ಆರೋಗ್ಯ ಕೇಂದ್ರ ತೆರೆಯಲಾಗಿದೆ. ಐವತ್ತಕ್ಕೂ ಹೆಚ್ಚು ಮೊಬೈಲ್ ಶೌಚಾಲಯಗಳನ್ನು ಇಡಲಾಗುತ್ತಿದೆ. ಪಾದಯಾತ್ರೆಯ ಮೂಲಕ ಬರುವಜನರು ತಾವು ಬಳಸುವ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಬೀಸಾಡದೆ ಪ್ರಾಧಿಕಾರದ ವತಿಯಿಂದ ಇಡಲಾಗಿರುವ ಕಸದ ಬುಟ್ಟಿ ಗಳಲ್ಲೇ ಹಾಕಬೇಕು. ಮ.ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತವಾಗಿಸಬೇಕೆಂದು ಪ್ರಾಧಿಕಾರದ ವತಿಯಿಂದ ಮನವಿ ಮಾಡಲಾಗಿದೆ.
ಸನ್ನಿಧಿಯಲ್ಲಿ ತಂಗುವ ಭಕ್ತರಿಗೆ ವಿಶೇಷ ವ್ಯವಸ್ಥೆ ಹಾಗೂ ಪ್ರಸಾದದ ನೀಡುವ ಸ್ಥಳದಲ್ಲಿಯೇ ಸೂಕ್ತವಾದ ರೀತಿಯಲ್ಲಿ ಮಾಡಲಾಗಿದೆ,ಹಿರಿಯ ವಯಸ್ಸಿನವರಿಗೆ ಪ್ರತ್ಯೇಕ ಸ್ಥಳವನ್ನು ದರ್ಶನಕ್ಕೆ ಕಾಯ್ದಿರಿಸಲಾಗಿದೆ ಕೆಲವು ಕಡೆ ಬಿಸಿಲಿನ ತಾಪಕ್ಕಾಗಿ ಪೆಂಡಲ್ ಗಳನ್ನು ಹಾಕಿಸಲಾಗಿದೆ ಒಟ್ಟಾರೆಯಾಗಿ ಭಕ್ತರ ಅನುಕೂಲಕ್ಕಾಗಿ ಪ್ರಾಧಿಕಾರವು ಸಕಲ ಸೌಕರ್ಯಗಳನ್ನು ನೀಡುತ್ತದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ರಘುರವರು ತಿಳಿಸಿದ್ದಾರೆ .

About Mallikarjun

Check Also

ಮತದಾನ ಮಾಡದವರ ಪೌರತ್ವ ನಿಷೇಧಿಸಿ: ಸಗ್ರೀವಾ

ಗಂಗಾವತಿ.ಮೇ.06: ಲೋಕಸಭಾ ಚುನಾವಣೆ ನಿಮಿತ್ತ ಮೇ.07ರಂದು ನಡೆಯುವ ಮತದಾನದಲ್ಲಿ ಎಲ್ಲರೂ ಉತ್ಸಾಹದಿಂದ ಪಾಲ್ಗೊಂಡು ಮತ ಚಲಾಯಿಸಬೇಕು. ಮತದಾನ ಮಾಡದೆ ಹೊರ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.