Breaking News

ವಿಜೃಂಭಣೆಯಿಂದ ಜರುಗಿದ ಮಾದಪ್ಪನ ರಥೋತ್ಸವ ಸಾಲೂರು ಶ್ರೀ ಗಳು ಹಾಗೂ ಶಾಸಕರು ಭಾಗಿ

Madappa’s Chariotsava, which was celebrated with pomp, was attended by Mr. and MLAs of Salur.

ಜಾಹೀರಾತು


ವರದಿ : ಬಂಗಾರಪ್ಪ ಸಿ

ಹನೂರು : ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರಸ್ವಾಮಿ ದೇವಾಲಯದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವದ ಅಂಗವಾಗಿ ನಾಲ್ಕನೇ ದಿನವಾದ ಭಾನುವಾರ ಅಮಾವಾಸ್ಯೆಯ ಅಂಗವಾಗಿ ಮಹದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಪುನಸ್ಕಾರಗಳು ನಡೆದವು.

ಮಹಾರಥೋತ್ಸವ: ಸೋಮವಾರದ ಬೆಳಿಗ್ಗೆ 9.40 ರಿಂದ 10.10 ರ ವರೆಗೆ ನಡೆಯುವ ಶುಭ ಮುಹೂರ್ತದಲ್ಲಿ ಮಹದೆಶ್ವರ ಸ್ವಾಮಿಯ ಮಹಾರಥೋತ್ಸವ ನಡೆಯಿತು . ಈ ರಥೋತ್ಸವವದಲ್ಲಿ
ಶ್ರೀ ಸಾಲೂರು ಬೃಹನ್ ಮಠದ ಪೀಠಾಧಿಪತಿ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ, ಬೇಡಗಂಪಣ ಅರ್ಚಕರು ಹಾಗೂ ಲಕ್ಷಾಂತರ ಭಕ್ತರು ಸೇರಿದಂತೆ ದೇವರ ಗುಡ್ಡರ ಸಮ್ಮುಖದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಿದ ಶಾಸಕರಾದ ಎಮ್ ಆರ್ ಮಂಜುನಾಥ್ ಮಾತನಾಡಿ ತೇರನ್ನು ವಿವಿಧ ಬಗೆಯ ಪುಷ್ಪಗಳು , ತಳಿರು ತೋರಣ, ಬಣ್ಣದ ಬಟ್ಟೆಗಳಿಂದ ಸಿಂಗರಿಸಲಾಗಿದೆ ,ಸ್ಥಳಿಯ ಸಂಪ್ರದಾಯದಂತೆ
ಬೇಡಗಂಪಣ ಸಮುದಾಯದ ಪುಟ್ಟ ಬಾಲೆಯರ ಬೆಲ್ಲದ ಆರತಿಯೊಂದಿಗೆ, ಮಂಗಳವಾದ್ಯಗಳ ಸಮೇತ, ತಾಳ ಮೇಳಗಳ ಜೊತೆಯಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಜರುಗಿತು .
ದೂರದ ಊರುಗಳಿಂದ ಬಂದಿದ್ದ ಭಕ್ತರು, ಉರುಳು ಸೇವೆ, ಮುಡಿ ಸೇವೆ, ಪಂಜಿನ ಸೇವೆ, ಕಡಲೆ ಸೇವೆ, ಫಲಹಾರ ಸೇವೆ ಇನ್ನಿತರ ಉತ್ಸವಗಳಲ್ಲಿ ಪಾಲ್ಗೊಂಡರು. ಹಲವು ಭಕ್ತರು ತಾವು ಬೆಳೆದ ವರ್ಷದ ಮೊದಲ ಬೆಳೆಯ ದವಸ ಧಾನ್ಯಗಳನ್ನು ಮಾದಪ್ಪನ ದಾಸೋಹಕ್ಕೆ ನೀಡಿ ಹರಕೆ ತೀರಿಸಿದರು.
ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಾದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಕೊನೆಯ ದಿನವಾದ ಸೋಮವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಿತು ಮಾದಪ್ಪ ಎಲ್ಲಾರಿಗೂ ಶುಭವನ್ನುಂಟು ಮಾಡಲಿ ಎಂದು ತಿಳಿಸಿದರು .

ಈ ದಿನ ರಥೋತ್ಸವಕ್ಕಾಗಿ ,ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ , ಪ್ರಾಧಿಕಾರದ ಕಾರ್ಯದರ್ಶಿ ರಘು, ಸೇರಿದಂತೆ ಸ್ಥಳೀಯ ಪೊಲೀಸ್‌ ಅಧಿಕಾರಿಗಳು ಜೊತೆಯಲ್ಲಿ ಸಾವಿರಾರು ಭಕ್ತರು ಹಾಜರಿದ್ದರು .

About Mallikarjun

Check Also

screenshot 2025 07 30 13 52 28 88 6012fa4d4ddec268fc5c7112cbb265e7.jpg

ಕ್ರಿಸ್ತರಾಜ ವಿದ್ಯಾಸಂಸ್ಥೆಯಲ್ಲಿ ಯಶಸ್ವಿಯಾಗಿ ನಡೆದ “ಗ್ರೀನ್ ಕ್ಯಾಂಪಸ್ ಕ್ಲೀನ್ ಕ್ಯಾಂಪಸ್” ಉದ್ಘಾಟನಾ ಕಾರ್ಯಕ್ರಮ.

The inauguration program of "Green Campus Clean Campus" was successfully held at Christaraja Educational Institution. …