Breaking News

ಲೋಕೇಶ್ವರ್ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತ ರಿಂದ ತಿಪಟೂರು ಶಾಸಕರವಿರುದ್ಧಅಸಮಾಧಾನ.

Against Tipatur MLA by Lokeshwar fans and Congress workers displeasure

ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಕ್ರಾಸ್ ಗುಡ್ಡದಪಾಳ್ಯ ತಾತನ ಮನೆ ಫಾರ್ಮ್ ಹೌಸ್ ನಲ್ಲಿ ತಾಲ್ಲೂಕಿನ ಕಾಂಗ್ರೆಸ್ ಮುಖಂಡರಾದ ಲೋಕೇಶ್ವರ್ ಅವರ ಅಭಿಮಾನಿಗಳು ಹಾಗೂ ಕಾರ್ಯಕರ್ತರ ಸಭೆಯನ್ನು ಆಯೋಜನೆ ಮಾಡಲಾಯಿತು ತಾಲ್ಲೂಕಿನ 26 ಗ್ರಾಮ ಪಂಚಾಯಿತಿ ಹಾಗೂ ನಗರದ 31 ವಾರ್ಡ್ನ ಅಭಿಮಾನಿಗಳು ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು ಸಭೆಯಲ್ಲಿ ತಾಲ್ಲೂಕಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಶಾಸಕರಾದ ಕೆ ಷಡಕ್ಷರಿ ಅವರು ಕಡೆಗಣಿಸುತ್ತಿದ್ದಾರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ಜಿಲ್ಲಾ ಮಂತ್ರಿಗಳು ಸಹ ತಾಲ್ಲೂಕಿನ ಕಾಂಗ್ರೆಸ್ ನಲ್ಲಿರುವ ಸಮಸ್ಯೆಯನ್ನು ಬಗೆಹರಿಸಿಲ್ಲ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಗಲು ರಾತ್ರಿ ಎನ್ನದೆ ಕಾಂಗ್ರೆಸ್ ಪಕ್ಷಕ್ಕಾಗಿ ಸಮಯ ವ್ಯರ್ಥ ಮಾಡದೆ 24 ಗಂಟೆ ದುಡಿದಿದ್ದಾರೆ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತವನ್ನು ಕಡೆಗಣಿಸಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಲೋಕೇಶ್ವರ್ ಅಭಿಮಾನಿ ಬಳಗದವರು ಶಾಸಕ ಕೆ ಷಡಕ್ಷರಿ ವಿರುದ್ಧ ಅಸವಾದಾನ ವ್ಯಕ್ತಪಡಿಸಿದ್ದಾರೆ ಇದೇ ವೇಳೆ ಅಭಿಮಾನಿಗಳು ಮತ್ತು ಕಾರ್ಯಕರ್ತರಿಗೆ ಉದ್ದೇಶಿಸಿ ಮಾತನಾಡಿದ ಲೋಕೇಶ್ವರ್
ಅವರು ಕಾಂಗ್ರೆಸ್ ಕಾರ್ಯಕರ್ತರನ್ನು ಹಾಲಿ ಶಾಸಕರು ಚುನಾವಣೆಯಲ್ಲಿ ಗೆದ್ದ ನಂತರ ದೂರ ಇಟ್ಟಿದ್ದಾರೆ ಇನ್ನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ಬರಲಿದ್ದು ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಎಸ್ ಪಿ ಮುದ್ದಹನುಮಗೌಡ ರವರನ್ನು ಅಭ್ಯರ್ಥಿಯನ್ನಾಗಿ ಮಾಡಲಾಗಿದೆ ಮುದ್ದಾ ಹನುಮಗೌಡರ ಬಗ್ಗೆ ಪ್ರೀತಿ ಗೌರವ ನಮಗೆ ಇದೆ ಆದರೆ ಪಕ್ಷಕ್ಕಾಗಿ ದುಡಿದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ತಾಲ್ಲೂಕಿನಲ್ಲಿ ಗೌರವ ಸಿಗುತ್ತಿಲ್ಲ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಎಸ್ ಪಿ ಮುದ್ದಹನುಮೇಗೌಡರ ಅವರ ಪರವಾಗಿ ನಾವು ಕೆಲಸ ಮಾಡಲು ಸಿದ್ದರಿದ್ದೇವೆ ಆದರೆ ತಾಲೂಕಿನಲ್ಲಿ ಪಕ್ಷಕ್ಕಾಗಿ ದುಡಿಯುವವರನ್ನು ಶಾಸಕರು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರವರು ಈ ಹಿಂದೆ ತಾಲ್ಲೂಕಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ನೊಂದ ಕಾರ್ಯಕರ್ತರ ಸಭೆಯ ಬಗ್ಗೆ ಮಾಹಿತಿ ಪಡೆದು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವಂತೆ ಶಾಸಕರಿಗೆ ತಿಳಿಸಿದರು ಆದರೆ ಶಾಸಕರು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ತಾಲೂಕಿನಲ್ಲಿ ವಿಧಾನಸಭಾ ಚುನಾವಣೆ ನಡೆದು ಒಂದು ವರ್ಷ ಕಳೆದಿವೆ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಸಣ್ಣಪುಟ್ಟ ಕೆಲಸಗಳು ಕೂಡ ಶಾಸಕರಿಂದ ಆಗಿಲ್ಲ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರಿಗೆ ಯಾವುದೇ ರೀತಿಯ ರಾಜಕೀಯ ಸ್ಥಾನಮಾನ ನೀಡಿಲ್ಲ ಎಂದು ಲೋಕೇಶ್ವರ್ ಅವರು ಅಸಮಾಧಾನ ವ್ಯಕ್ತಪಡಿಸಿದರು.
ಈ ಸಭೆಯಲ್ಲಿ ನಗರಸಭಾ ಸದಸ್ಯ ಸೊಪ್ಪುಗಣೇಶ್ ಆಶಿಫಾ ಬಾನು ಭಾರತಿ ಮಂಜುನಾಥ್ ಲೋಕೇಶ್ವರ್ ಅಭಿಮಾನಿಗಳು ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದ್ದರು.
ವರದಿ ಮಂಜು ಗುರುಗದಹಳ್ಳಿ.

About Mallikarjun

Check Also

ಮತದಾನ ಮಾಡದವರ ಪೌರತ್ವ ನಿಷೇಧಿಸಿ: ಸಗ್ರೀವಾ

ಗಂಗಾವತಿ.ಮೇ.06: ಲೋಕಸಭಾ ಚುನಾವಣೆ ನಿಮಿತ್ತ ಮೇ.07ರಂದು ನಡೆಯುವ ಮತದಾನದಲ್ಲಿ ಎಲ್ಲರೂ ಉತ್ಸಾಹದಿಂದ ಪಾಲ್ಗೊಂಡು ಮತ ಚಲಾಯಿಸಬೇಕು. ಮತದಾನ ಮಾಡದೆ ಹೊರ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.