ಕಲ್ಯಾಣಸಿರಿ ವಿಶೇಷ

20 ವರ್ಷದ ಸೇವೆಗೆ ಸಂಧ ಗೌರವಗವಿಸಿದ್ದಪ್ಪ ಹಾವರಗಿ ಒಲಿದ ಜಿಲ್ಲಾ ಉಪಾಧ್ಯಕ್ಷ

District Vice President of Olida Havaragi Siddappa was felicitated for 20 years of service


ಗಂಗಾವತಿ,14: ಕಳೆದ20 ವರ್ಷದಿಂದ ಸಂಘ-ಪರಿವಾರ ಸೇರಿದಂತೆ ಬಿಜೆಪಿ ಪಕ್ಷದಲ್ಲಿ ಸಕ್ರೀಯ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತಿರುವ ಇಂದರಗಿ ಗ್ರಾಮ ಪಂಚಾಯತಿ ಸದಸ್ಯ ಕ್ರಿಯಾಶೀಲ ಯುವ ಗವಿಸಿದ್ದಪ್ಪ ಹಾವರಗಿ, ಕೊಪ್ಪಳ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಉಪಾಧ್ಯಸ್ಥಾನ ನೀಡಲಾಗಿದೆ. ಕಳೆದ ಹಲವು ವರ್ಷದಿಂದ ಗವಿಸಿದ್ದಪ್ಪ ಹಾವರಗಿ ಪಕ್ಷಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ಪಕ್ಷದ ಹಿರಿಯರ ಸಲಹೆ ಮೆರೆಗೆ ಕೊಪ್ಪಳ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಉಪಾಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿದ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಕೊಪ್ಪಳ ಜಿಲ್ಲಾಧ್ಯಕ್ಷರಾದ ಕೆ.ಎಸ್. ಹನುಮಂತಪ್ಪ ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗವಿಸಿದ್ದಪ್ಪ ಹಾವರಗಿ, ತಡವಾದರೂ ಪರವಾಗಿಲ್ಲ. ಪಕ್ಷ ನಮ್ಮಂತ ತೆರೆಮರೆಯ ಕಾರ್ಯಕರ್ತರನ್ನು ಗುರುತಿಸುತ್ತಿದೆ. ಪಕ್ಷ ಜವಾಬ್ದಾರಿ ನೀಡಲಿ, ಬಿಡಲಿ. ಆದರೆ ನಮಗೆ ನೀಡುವ ಕೆಲಸವನ್ನು ನಾವು ಅಚ್ಚುಕಟ್ಟಾಗಿ ಮಾಡುತ್ತೇವೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವಲ್ಲಿ ಮತ್ತು ಪಕ್ಷವನ್ನು ಬೇರುಮಟ್ಟದಿಂದ ಸಂಘಟಿಸುವ ನಿಟ್ಟಿನಲ್ಲಿ ಹಿರಿಯರ ಸಲಹೆ ಮೆರೆಗೆ ಪ್ರಮಾಣಿಕ ಯತ್ನ ಮಾಡುತ್ತೇವೆ ಎಂದು ಗವಿಸಿದ್ದಪ್ಪ ಹಾವರಗಿ ತಿಳಿಸಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

16 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

16 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

16 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

16 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

17 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

17 hours ago