Appointed Member of Karnataka Music and Dance Academy Ramesh Gabbur is honored in the college
ಗಂಗಾವತಿ: ಕರ್ನಾಟಕ ಸಂಗೀತ ಮತ್ತು ನೃತ್ಯ ಅಕಾಡೆಮಿ ಸದಸ್ಯರಾಗಿ ನೇಮಕಗೊಂಡ ಸರ್ಕಾರಿ ಜೂನಿಯರ್ ಕಾಲೇಜ್ ಗ್ರಂಥಪಾಲಕರಾದ ಶ್ರೀ ರಮೇಶ ಗಬ್ಬೂರ್‌ರವರನ್ನು ಕಾಲೇಜಿನಲ್ಲಿ ಮಾರ್ಚ್-೧೮ ರಂದು ಸನ್ಮಾನಿಸಲಾಯಿತು.
ಕೊಪ್ಪಳ ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಶ್ರೀ ಸೋಮಶೇಖರ್ ಗೌಡ ಅವರು ಶ್ರೀಯುತರಿಗೆ ಅಭಿನಂದನೆಗಳನ್ನು ತಿಳಿಸುತ್ತಾ, ಕರ್ನಾಟಕ ರಾಜ್ಯವು ಕಲೆ, ಸಂಗೀತ, ಸಾಹಿತ್ಯ ಮತ್ತು ಸಾಂಸ್ಕೃತಿಕವಾಗಿ ಶ್ರೀಮಂತವಾಗಿದೆ. ನಾಡಿನ ಸಂಗೀತ, ನೃತ್ಯ ಕಲಾ ಪ್ರಕಾರಗಳನ್ನು ಪೋಷಿಸಿ ಬೆಳೆಸುವ ಕ್ಷೇತ್ರದಲ್ಲಿ ಶ್ಯಾಘನೀಯ ಕಾರ್ಯವನ್ನು ಮಾಡಲಿ ಎಂದು ಹಾರೈಸಿದರು. ಯೋಗ್ಯ ವ್ಯಕ್ತಿಯನ್ನು ಗುರುತಿಸಿ ಸೂಕ್ತ ಸ್ಥಾನಮಾನ ನೀಡಿದ ಕರ್ನಾಟಕ ಸರ್ಕಾರಕ್ಕೂ, ಕನ್ನಡ ಮತ್ತು ಸಂಸ್ಕೃತಿಯ ಇಲಾಖೆಯ ಸಚಿವರಿಗೆ ಅಭಿನಂದನೆಯನ್ನು ತಿಳಿಸಿದರು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ಶ್ರೀ ರಮೇಶ ಗಬ್ಬೂರ್‌ರವರು ಸಂಗೀತ ಮತ್ತು ನೃತ್ಯ ಕ್ಷೇತ್ರದಲ್ಲಿ ಒಂದಷ್ಟು ಕ್ರಿಯಾತ್ಮಕ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ, ಹಲವಾರು ಮಹತ್ತರ ಕಾರ್ಯಗಳನ್ನು ಅಕಾಡೆಮಿಯಿಂದ ನಡೆಸುವ ಮೂಲಕ ಸಂಗೀತ, ನೃತ್ಯ ಕಲಾ ಪ್ರಕಾರಗಳನ್ನು ಪ್ರೋತ್ಸಾಹಿಸುವ ಮತ್ತು ಅವುಗಳ ಸರ್ವಾಂಗಣ ಅಭಿವೃದ್ಧಿಗೆ ಸಂಪೂರ್ಣವಾಗಿ ನಾನು ಸೇವೆ ಸಲ್ಲಿಸುತ್ತೇನೆ ಎಂದು ನುಡಿದರು.
ಸದರಿ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಚಾರ್ಯರಾದ ಶ್ರೀ ಬಸಪ್ಪ ನಾಗೋಲಿ, ಪ್ರಗತಿಪರ ಚಿಂತಕರಾದ ಡಾ. ಲಿಂಗಣ್ಣ ಜಂಗಮರಹಳ್ಳಿ, ಶ್ರೀ ಕುಮಾರಸ್ವಾಮಿ, ಶ್ರೀಮತಿ ರಮಾ, ಶ್ರೀಮತಿ ಶ್ರೀದೇವಿ, ಉಪನ್ಯಾಸಕಿ ಮತ್ತು ಕಾಲೇಜಿನ ಇತರೆ ಸಿಬ್ಬಂದಿಯವರು ಹಾಜರಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…