Preliminary meeting of Athani Constituency workers on behalf of Congress candidate Priyanka Jarakiholi from Chikkodi Lok Sabha Constituency
ಅಥಣಿ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಮುಖಂಡರ. ಕಾರ್ಯಕರ್ತರ ಹಾಗೂ ಅಭಿಮಾನಿಗಳ ಪೂರ್ವಭಾವಿ ಸಭೆಯು ಪಟ್ಟಣದ ಶಿವಣಗಿ ಸಾಂಸ್ಕೃತಿಕ ಭವನದಲ್ಲಿ ಮಾಜಿ ಉಪಮುಖ್ಯಮಂತ್ರಿ ಹಾಗೂ ಅಥಣಿ ಜನಪ್ರಿಯ ಶಾಸಕರಾದ ಸನ್ಮಾನ ಶ್ರೀ ಲಕ್ಷ್ಮಣ ಸಂ ಸವದಿ ಯವರ ನೇತೃತ್ವದಲ್ಲಿ ಜರುಗಿತು.
ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕರಾದ ಸನ್ಮಾನ ಶ್ರೀ ಲಕ್ಷ್ಮಣ ಸಂ ಸವದಿ ಅವರು ಮಾತನಾಡಿ ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ತೀವ್ರ ಸ್ಪರ್ಧೆ ಒಡ್ಡಲು ರಣತಂತ್ರ ರೂಪಿಸುವುದು.
ಅಥಣಿ ಮತಕ್ಷೇತ್ರದಿಂದ ಪ್ರಿಯಾಂಕಾ ಜಾರಕಿಹೊಳಿಗೆ ಅತಿ ಹೆಚ್ಚು ಮತಗಳು ಬರಬೇಕು ಹಾಗೆ ತಂತ್ರ ರೂಪಿಸಬೇಕು.
ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಪಕ್ಷದ ಮುಖಂಡರು. ಕಾರ್ಯಕರ್ತರು ಹಾಗೂ ಅಭಿಮಾನಿ ಬಳಗದವರು ಕ್ಷೇತ್ರದ ಮತದಾರರ ಮನೆಮನೆ ಹೋಗಿ ಕೇಂದ್ರ ಬಿಜೆಪಿ ಸರ್ಕಾರದ ವೈಫಲ್ಯಗಳು ಮತ್ತು ಕಾಂಗ್ರೆಸ್ ಪಕ್ಷದ ಸಾಧನೆಗಳು ಹಾಗೂ ಪಂಚ ಗ್ಯಾರಂಟಿ ಯೋಜನೆಗಳ ಮಾಹಿತಿಯನ್ನು ಜನಸಾಮಾನ್ಯರಿಗೆ ತಲುಪಿಸುವ ಕೆಲಸವನ್ನು ಮಾಡಬೇಕು. ಅಥಣಿ ಮತಕ್ಷೇತ್ರಕ್ಕೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೊಟ್ಯಾಂತರ ರೂಗಳ. ಅನುದಾನ ಬಿಡುಗಡೆ ಮಾಡಿದ್ದು. ಅಮ್ಮಾಜೇಶ್ವರಿ ಯಾತ ನೀರಾವರಿ ಯೋಜನೆ. ಪಶುವೈದ್ಯಕೀಯ ಮಹಾವಿದ್ಯಾಲಯ. ಪಟ್ಟಣಕ್ಕೆ 24×7 ಶುದ್ಧ ಕುಡಿಯುವ ನೀರಿನ ಯೋಜನೆ. ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನ ಅನುಷ್ಠಾನ ಮಾಡಿದ್ದಾರೆ ಒಟ್ಟಿನಲ್ಲಿ ಅಥಣಿ ಮತಕ್ಷೇತ್ರ ಅಭಿವೃದ್ಧಿ ಪರ್ವ ಕಾಣುತ್ತಿದೆ ಎಂದರು.
ನಾನು ವಿಧಾನಸಭಾ ಚುನಾವಣೆಯಲ್ಲಿ ಸುಮಾರು 76 ಸಾವಿರ ಮತಗಳ ಅಂತರದಿಂದ ಜಯ ಸಾಧಿಸಿದ್ದು ಈ ಭಾರಿ ಲೋಕಸಭಾ ಚುನಾವಣೆಯಲ್ಲಿ ಅಥಣಿ ಮತಕ್ಷೇತ್ರದಿಂದ 80 ಸಾವಿರಕ್ಕೂ ಹೆಚ್ಚು ಅಂತರ ಅಥಣಿಯಿಂದ ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಲೋಕೊಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿ. ಮಾಜಿ ಸಚಿವರಾದ ವೀರಕುಮಾರ ಪಾಟೀಲ. ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ. ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಯುವ ನಾಯಕರಾದ ಚಿದಾನಂದ ಸವದಿ. ರಾಹುಲ ಜಾರಕಿಹೊಳಿ. ಕಾಂಗ್ರೆಸ್ ಮುಖಂಡರಾದ ಗಜಾನನ ಮಂಗಸೂಳಿ. ಸದಾಶಿವ ಬುಟಾಳಿ. ಅಥಣಿ ಬ್ಲಾಕ್ ಅಧ್ಯಕ್ಷ ಸಿದ್ಧಾರ್ಥ ಸಿಂಗೆ. ತೆಲಸಂಗ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಮೋಘಸಿದ್ಧ ಖೊಬ್ರಿ. ದಿಗ್ವಿಜಯ್ ಸಿಂಗ್ ಪವಾರದೇಸಾಯಿ. ಶಾಮ ಪೂಜಾರಿ. ಅಸ್ಲಮ್ ನಾಲಬಂದ. ಶಿವು ಗುಡ್ಡಾಪುರ. ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು. ಕಾರ್ಯಕರ್ತರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.