Farmers besieged KEB office demanding electricity

ಸಾವಳಗಿ: ಕೃಷಿ ಪಂಪ್‌ಸೆಟ್‌ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿ ರೈತ ಸಮುದಾಯ ಕೆಇಬಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಕೆಇಬಿ ಕಛೇರಿಗೆ ಸಾವಳಗಿ, ಟಕ್ಕಳಕಿ, ಶೂರಪಾಲಿ ಟಕ್ಕೋಡ, ಕುರಗೋಡ, ಸೇರಿದಂತೆ ಅನೇಕ ವಿವಿಧ ಗ್ರಾಮಕ್ಕೆ ಸರಿಯಾಗಿ ವಿದ್ಯುತ್ ಸಂಪರ್ಕ ನೀಡುತ್ತಿಲ್ಲವೆಂದು ಸೋಮವಾರ ಸಾವಳಗಿ ಹಾಗೂ ಸುತ್ತಮುತ್ತಲಿನ ರೈತರು ಕೂಡಿಕೊಂಡು ಕೆಇಬಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಮಳೆ ಕೊರತೆಯಿಂದಾಗಿ ಬರಗಾಲ ಸೃಷ್ಟಿಯಾಗಿದ್ದು, ರೈತರನ್ನು ಹೈರಾಣಾಗಿಸಿದೆ. ವಿದ್ಯುತ್ ಕೊರತೆಯಿಂದ ಬೆಳೆಗಳು ಹಾಗೂ ತರಕಾರಿ ಬೆಳೆಗಳನ್ನು ಉಳಿಸಿಕೊಳ್ಳಲು ಪರದಾಡುವಂತಾಗಿದೆ. ನಿರೀಕ್ಷಿತ ಉತ್ಪಾದನೆ ಕೊರತೆಯಿಂದ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಕೃಷಿ ಪಂಪ್‌ಸೆಟ್‌ಗಳಿಗೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡಬೇಕು ಎಂದು ರೈತರು ಆಗ್ರಹಿಸಿದರು.