Breaking News

ಮತದಾನ ಜಾಗೃತಿ ಮೂಡಿಸಲು ವಾಕ್ ಥಾನ್ ಕಾರ್ಯಕ್ರಮ

Walk Thon program to create voting awareness

ಗಂಗಾವತಿ:ಲೋಕಸಭೆ ಚುನಾವಣೆ ಅಂಗವಾಗಿ ತಾಲೂಕು ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ ಮೂಡಿಸಲು ವಾಕ್ ಥಾನ್ ಕಾರ್ಯಕ್ರಮಕ್ಕೆ ಪೌರಾಯಕ್ತರು ಚಾಲನೆ ನೀಡಿದರು.

ಗಂಗಾವತಿಯಲ್ಲಿ ವಾಕ್ ಥಾನ್‌ಗೆ ಚಾಲನೆ ಪ್ರಜಾಪ್ರಭುತ್ವಹಬ್ಬದಲ್ಲಿ ಸರ್ವರೂ ಪಾಲ್ಗೊಳ್ಳಿ- ಮಾಲಗಿತ್ತಿ

ತಾ.ಪಂ. ಇಓ ಲಕ್ಷ್ಮೀದೇವಿ ಮಾತನಾಡಿ, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ನಿರಂತರವಾಗಿ ಸ್ವೀಪ್ ಕಾರ್ಯಕ್ರಮ ಮಾಡಲಾಗುತ್ತಿದೆ. ಪ್ರಜಾಪ್ರಭುತ್ತ ಹಬ್ಬದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು ಎಂದರು.

ನಗರದ ವಿವಿಧ ವೃತ್ತಗಳಲ್ಲಿ ನಡೆದ ವಾಕ್ ಥಾನ್ಲ್ಲಿ ಮತದಾನ ಜಾಗೃತಿ ಗೀತೆಗಳು, ಘೋಷಣೆಗಳ ಮೂಲಕ ಅರಿವು ಮೂಡಿಸಲಾಯಿತು.

ನಗರದ ಗಾಂಧಿ ಸರ್ಕಲ್ ಬಳಿ ಮತದಾನ ಮಹತ್ವ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ನಗರಸಭೆ ಪೌರಾಯುಕ್ತ ಆರ್. ವಿರುಪಾಕ್ಷಮೂರ್ತಿ, ತಾ.ಪಂ. ಸಹಾಯಕ ನಿರ್ದೇಶಕ (ಗ್ರಾ.ಉ.) ಮಹಾಂತಗೌಡ ಪಾಟೀಲ್, ಸಿಡಿಪಿಓ ಪ್ರವೀಣ್ ಕುಮಾರ್ ಹೇರೂರು, ಸಹಾಯಕ ಕೃಷಿ ನಿರ್ದೇಶಕ ಸಂತೋಷ ಪಟ್ಟದಕಲ್ಲು ನಗರ ಪೊಲೀಸ್ ಠಾಣೆ ಪಿಐ ವಾಸುಕುಮಾರ, ಪಿಎಸ್‌ಐಗಳಾದ ಬಸವರಾಜ ಜಿ., ಬಸವರಾಜ ಜಿ.ಕೆ, ತಿಮ್ಮಾರೆಡ್ಡಿ, ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಶರಣೇಗೌಡ ಮಾಲಿ ಪಾಟೀಲ್, ಕಂದಾಯ ಇಲಾಖೆ, ತಾಪಂ ಅಧಿಕಾರಿಗಳು, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳು, ನಗರಸಭೆ, ತಾ.ಪಂ.. ಗ್ರಾ.ಪಂ. ಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ನರೇಗಾ, ಎನ್‌.ಆರ್.ಎಲ್.ಎಂ ಸಿಬ್ಬಂದಿಗಳು ಭಾಗವಹಿಸಿದ್ದರು.

ಚುನಾವಣೆ ಎನ್ನುವುದು ಪ್ರಜಾಪ್ರಭುತ್ವ ಹಬ್ಬ ಇದ್ದಂತೆ. ಎಲ್ಲರೂ ಖುಷಿಯಿಂದ ಪಾಲ್ಗೊಳ್ಳಬೇಕೆಂದು ಗಂಗಾವತಿ ವಿಧಾನ ಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಸಹಾಯಕ ಆಯುಕ್ತ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಹೇಳಿದರು.

ಲೋಕಸಭೆ ಚುನಾವಣೆ ಅಂಗವಾಗಿ ನಗರದ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾ ಸ್ವೀಪ್ ಸಮಿತಿ, ತಾಲೂಕು ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿಗಾಗಿ ಮಂಗಳವಾರ ಆಯೋಜಿಸಿದ್ದ ವಾಕ್ ಥಾನ್‌ಗೆ ಚಾಲನೆ ನೀಡಿ ಮಾತನಾಡಿದರು.

ಮೇ.7 ರಂದು ನಡೆಯುವ ಲೋಕಸಭೆ ಚುನಾವಣೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು. ಸದೃಢ ದೇಶ ಕಟ್ಟಲು ಶೇ.100 ರಷ್ಟು ಮತದಾನ ಆಗಬೇಕು, ಯಾರೊಬ್ಬರೂ ಮತದಾನ ಪ್ರಕ್ರಿಯೆಯಿಂದ ದೂರ ಉಳಿಯಬಾರದು. ಯಾವುದೇ ಆಸೆ, ಆಮೀಷಕ್ಕೆ ಬಲಿಯಾಗದೇ ಮತದಾನ ಮಾಡಬೇಕು ಎಂದರು.

ತಹಸೀಲ್ದಾರ ಯು.ನಾಗರಾಜ ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಳಕ್ಕೆ ಸ್ವೀಪ್ ಕಾರ್ಯಕ್ರಮ ಮಾಡಲಾಗುತ್ತಿದ್ದು. ಪ್ರತಿಯೊಬ್ಬರೂ ತಪ್ಪದೇ ಮತ ಚಲಾಯಿಸಬೇಕು ಎಂದರು.

About Mallikarjun

Check Also

ಮತದಾನ ಮಾಡದವರ ಪೌರತ್ವ ನಿಷೇಧಿಸಿ: ಸಗ್ರೀವಾ

ಗಂಗಾವತಿ.ಮೇ.06: ಲೋಕಸಭಾ ಚುನಾವಣೆ ನಿಮಿತ್ತ ಮೇ.07ರಂದು ನಡೆಯುವ ಮತದಾನದಲ್ಲಿ ಎಲ್ಲರೂ ಉತ್ಸಾಹದಿಂದ ಪಾಲ್ಗೊಂಡು ಮತ ಚಲಾಯಿಸಬೇಕು. ಮತದಾನ ಮಾಡದೆ ಹೊರ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.