ಧಾರವಾಡ: ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ವಿರುದ್ಧ ಹೋರಾಟವನ್ನ ಈಗ ಆರಂಭ ಮಾಡಿದ್ದೇನೆ ನ್ಯಾಯ ಸಿಗುವವರೆಗೂ ನಾನು ಕೊರಳಲ್ಲಿ ಮಾಲೆ ಹಾಕುವುದಿಲ್ಲ ಎಂದು ದಿಂಗಾಲೇಶ್ವರ ಶ್ರೀಗಳು ಶಪಥ ಮಾಡಿದ್ದಾರೆ. ನನ್ನ ಹೋರಾಟಕ್ಕೆ ನ್ಯಾಯ ಸಿಗುವವರೆಗೂ ನಾನಿರುವ ವೇದಿಕೆಯಲ್ಲಿ ಮಾಲೆ ಹಾಕಲು ಬೀಡುವದಿಲ್ಲ. ಗುರಿ ಮುಟ್ಟುವವರೆಗೂ ರಾಜ್ಯದ ಜನತೆ ನನಗೆ ಮಾಲೆ ಹಾಕಬೇಡಿ ಎಂದು ಭಕ್ತರಿಗೆ ತಿಳಿಸಿದ್ದಾರೆ. ನಗರದ ಸೇವಾಲಯದಲ್ಲಿ ಮಂಗಳವಾರ ನಡೆದ ಭಕ್ತರ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಈಗಾಗಲೇ ನಮ್ಮ ನಿಲುವು ಕೇಂದ್ರದವರೆಗೂ ಮುಟ್ಟಿದೆ ಎಂದು ತಿಳಿಸಿದರು.ನನ್ನ ಹೋರಾಟ ಈಗಿನಿಂದ ಆರಂಭವಾಗಿಲ್ಲ, ಮೊದಲನೆಯ ಹೋರಾಟ ಐದು ರ‍್ಷ ಮುಗುವಿದ್ದಾಗ ಮೊದಲು ತಾಯಿಯೊಂದಿಗೆ ಹೋರಾಟ ಮಾಡಿದವನು ನಾನು. ನಾನೂ ಹತ್ತು ರ‍್ಷದವನು ಇದ್ದಾಗ ಹೋರಾಟ ಮಾಡಿ ಮನೆ ಬಿಟ್ಟು, ಸನ್ಯಾಸಿ ಆದವನು ವ್ಯಕ್ತಿಯ ಹಿತಕ್ಕಾಗಿ ಹೋರಾಟ ಮಾಡಿದವನು ನಾನಲ್ಲ. ವೀರಶೈವ ಲಿಂಗಾಯತ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದವನು ನಾನು. ಲಿಂಗಾಯತ ಮತ್ತು ವೀರಶೈವ ಬೇರೆ ಬೇರೆ ಎಂದು ಹೋರಾಟ ಮಾಡುತ್ತಿದ್ದಾಗ, ಅವೆರಡೂ ಒಂದೇ ಎಂದು ಕಾಂಗ್ರೆಸ್ ರ‍್ಕಾರದ ವಿರುದ್ಧ ಹೋರಾಟ ಮಾಡಿದ್ದೆ. ಯಡಿಯೂರಪ್ಪನವರನ್ನ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದಾಗ ಬಿಜೆಪಿ ಹೈಕಮಾಂಡ್ ವಿರುದ್ಧ ಹೋರಾಟ ಮಾಡಿದ್ದೆ. ಹಿಂದಿನ ರ‍್ಕಾರದಲ್ಲಿ ೪೦% ಕಮಿಷನ್ ವಿರುದ್ಧ ಹೋರಾಟ ಮಾಡಿದ್ದೆ ಎಂದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…