ಗಂಗಾವತಿ : ತಾಲೂಕಿನ ಸಂಗಾಪುರ ಗ್ರಾ.ಪಂ. ವ್ಯಾಪ್ತಿಯ ಸಂಗಾಪುರದಲ್ಲಿ ಬಿಸಿಯೂಟದಿಂದ ಅಸ್ವಸ್ಥಗೊಂಡಿದ್ದ ಮಕ್ಕಳ ಮನೆಗಳಿಗೆ ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಬುಧವಾರ ಖುದ್ದಾಗಿ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು.
ನಂತರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳು ಚೇತರಿಕೆಗೊಂಡ ವರದಿಯ ಮಾಹಿತಿ ವೈದ್ಯರಿಂದ ಪಡೆದರು.
ನಂತರ ಗ್ರಾಮದ ಶಾಲೆಗೆ ಜಿ.ಪಂ. ಸಿಇಓ ರಾಹುಲ್ ರತ್ನಂ ಪಾಂಡೆಯ ಅವರು ಭೇಟಿ ನೀಡಿ ‘ಶಾಲೆಯಲ್ಲಿರುವ ಕುಡಿವ ನೀರು, ಬಳಕೆ ನೀರು ಹಾಗೂ ಬಿಸಿಯೂಟ ಕೊಠಡಿ ಸೇರಿ ಇತರೆ ಸೌಲಭ್ಯಗಳ ಪರಿಶೀಲಿಸಿದರು. ಶಾಲಾ ಅನುದಾನ ಬಳಕೆ ಮಾಡಿಕೊಂಡು ಮಕ್ಕಳಿಗೆ ಸುಸಜ್ಜಿತ ಸೌಲಭ್ಯ ಕಲ್ಪಿಸಬೇಕು. ಅಡುಗೆಕೊಣೆಯಲ್ಲಿ ಶುಚಿತ್ವ ಕಾಪಾಡಿಕೊಳ್ಳಬೇಕು. ಇಂಥ ಪ್ರಕರಣಗಳು ಮತ್ತೆ ಕಂಡು ಬಂದರೆ ಶಿಸ್ತು ಕ್ರಮ ಜರುಗಿಸುವ ಎಚ್ಚರಿಕೆಯನ್ನು ಶಾಲೆಯ ಮುಖ್ಯಶಿಕ್ಷಕರಿಗೆ’ ನೀಡಿದರು.
ಈ ವೇಳೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ, ಆರ್ ಡಬ್ಲ್ಯುಎಸ್ ಎಇಇ ವಿಜಯ ಕುಮಾರ್, ತಾ.ಪಂ. ಸಹಾಯಕ ನಿರ್ದೇಶಕರಾದ ಮಹಾಂತಗೌಡ ಪಾಟೀಲ್,
ಕ್ಷೇತ್ರ ಶಿಕ್ಷಣಾಧಿಕಾರಿಗಳು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…