Breaking News

ಸುಮಲತಾಅಂಬರೀಶ್ ಬಿಜೆಪಿಸೇರಲಿದ್ದಾರೆ

ಬೆಂಗಳೂರು,: ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ರ‍್ಥಿಯಾಗಿ ಗೆಲುವು ಸಾಧಿಸಿದ ನಟಿ ಸುಮಲತಾ ಅಂಬರೀಶ್ , ಈ ಬಾರಿ ಬಿಜೆಪಿಯಿಂದ ಸ್ರ‍್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಮೈತ್ರಿ ಕಾರಣದಿಂದಾಗಿ ಅವರಿಗೆ ಟಿಕೆಟ್ ನೀಡಲಿಲ್ಲ. ಆದರೂ, ಅವರು ಬಿಜೆಪಿ ಸೇರುತ್ತಿದ್ದಾರೆ. ಈ ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ಅವರು ಬರೆದುಕೊಂಡಿದ್ದಾರೆ. ಮಂಡ್ಯದ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿಸಿಕೊಂಡು ಹಾಗೂ ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿ ಎನ್ನುವ ಆಶಯದೊಂದಿಗೆ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವುದಾಗಿ ಘೋಷಿಸಿದ್ದೆ. ಈಗ ಬಿಜೆಪಿ ನಾಯಕರ ಸಮ್ಮುಖದಲ್ಲಿ ೫ ಏಪ್ರಿಲ್ ೨೦೨೪ರ ಶುಕ್ರವಾರ ಬೆಳಿಗ್ಗೆ ೧೧.೩೦ಕ್ಕೆ ಬೆಂಗಳೂರಿನ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸರ‍್ಪಡೆ ಆಗುತ್ತಿರುವೆ. ಮಂಡ್ಯದ ನನ್ನ ಸ್ವಾಭಿಮಾನಿ ಬಂಧುಗಳ, ಡಾ.ಅಂಬರೀಶ್ ಅವರ ಅಭಿಮಾನಿಗಳ ಹಾಗೂ ಹಿತೈಷಿಗಳ ಹಾರೈಕೆ ಮತ್ತು ಆಶರ‍್ವಾದ ಎಂದಿನಂತೆ ಇರಲಿ ಎಂದು ಅವರು ಬರೆದಿದ್ದಾರೆ.

ಜಾಹೀರಾತು

ನಿನ್ನೆಯಷ್ಟೇ ಮಂಡ್ಯದಲ್ಲಿ ತಮ್ಮ ಚುನಾವಣೆ ನಿಲುವು ಕುರಿತಂತೆ ಪ್ರಕಟಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಮೆಚ್ಚಿಕೊಂಡು ತಾವು ಬಿಜೆಪಿ ಸೇರುವುದಾಗಿ ತಿಳಿಸಿದ್ದರು. ಅದರಂತೆ ನಾಳೆ ಅವರು ಅಧಿಕೃತವಾಗಿ ಭಾರತೀಯ ಜನತಾ ಪಕ್ಷವನ್ನು ಸೇರುತ್ತಿದ್ದಾರೆ.

About Mallikarjun

Check Also

ಧಾರವಾಡ: ಮತ್ತೆ ನಕ್ಕಿತು ಭೂಮಿ ಕವನ ಸಂಕಲನದ ಬಿಡುಗಡೆ ಕಾರ್ಯಕ್ರಮ

Dharwad: Nakkitu Bhoomi poetry collection release program again ಧಾರವಾಡ ಕನ್ನಡ ಸಾಹಿತ್ಯ ಪರಿಷತ್ತಿನ ಸಾಹಿತ್ಯ ಭವನದಲ್ಲಿ ದಿನಾಂಕ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.