ಕಲ್ಯಾಣಸಿರಿ ವಿಶೇಷ

ಗಂಗಾವತಿ: ಕಾಂಗ್ರೆಸ್ ಪಕ್ಷದ ಸಭೆ

ಗಂಗಾವತಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಗಂಗಾವತಿ ವಿಧಾನಸಭೆ ಕ್ಷೇತ್ರದ, ಕಾಂಗ್ರೆಸ್ ಪಕ್ಷದ ಪೂರ್ವಭಾವಿ ಸಭೆಯನ್ನು 08/04/2024 ಸೋಮವಾರ ಬೆಳಿಗ್ಗೆ 11 ಗಂಟೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಪ್ರದಾನ ಕಾರ್ಯದರ್ಶಿ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಚ್‌.ಆರ್.ಶ್ರೀನಾಥ ಇವರ ನೇತೃತ್ವದಲ್ಲಿ ಜರುಗುವುದು ಎಂದು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಾಮೀದ್ ಮನಿಯಾರ್ ಹೇಳಿದ್ದಾರೆ.

ಕೊಪ್ಪಳ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗಾಗಿ ಮತ್ತು ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗಾಗಿ ಮಾಜಿ ಎಂಎಲ್ಸಿ ಎಚ್.ಆರ್. ಶ್ರೀನಾಥ ಅವರ ವೈಟೌಸ್ ಅವರ ಕಾಂಪೌಂಡ್ ನಲ್ಲಿ ಈ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ, ಈ ಕಾರ್ಯಕ್ರಮದಲ್ಲಿ ಲೋಕಸಭಾ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್, ಸಚಿವರಾದ ಶಿವರಾಜ್ ತಂಗಡಗಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಮತ್ತು ಮಾಜಿ ಶಾಸಕರಾದ ಅಮರೇಗೌಡ ಪಾಟೀಲ್ ಬಯ್ಯಪುರ, ಕಾಡ ಅಧ್ಯಕ್ಷರು ಹಸನ ಸಾಬ್‌ ದೋಟಿ ಹಾಳ್, ಮಾಜಿ ಸಚಿವರಾದ ಮಲ್ಲಿಕಾರ್ಜುನ ನಾಗಪ್ಪ, ಶಾಸಕರಾದ

ಬಸವರಾಜ ರಾಯರೆಡ್ಡಿ, ರಾಘವೇಂದ್ರ ಹಿಟ್ನಾಳ್, ಮುಖಂಡರಾದ ಹನುಮಂತಪ್ಪ ಅರಿಶಿನ ಕೇರಿ ಹಾಗೂ ಮುಂಚೂಣಿ ವಿವಿಧ ಘಟಕಾಗಳಾದ ಯುವ ಘಟಕ, ಹಿಂದುಳಿದ ವರ್ಗಗಳ ಘಟಕ, ಎಸ್ಸಿ /ಎಸ್ ಟಿ ಘಟಕ, ಅಲ್ಪಸಂಖ್ಯಾತ ಘಟಕ, ಕಾರ್ಮಿಕ ಘಟಕ, ಮಹಿಳಾ ಘಟಕ, ಎಲ್ಲಾ ಪದಾಧಿಕಾರಿಗಳು ಮತ್ತು ವಿಧಾನ ಸಭಾ ಕ್ಷೇತ್ರದ ಗ್ರಾಮೀಣ ಹಾಗೂ ನಗರ ಭಾಗದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮತ್ತು ಎಚ್.ಆ‌ರ್.ಜಿ. ಅಭಿಮಾನಿಗಳು ಭಾಗವಹಿಸಿ, ಕಾಂಗ್ರೆಸ್ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕು ಎಂದು ವಿನಂತಿಸಿದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

8 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

9 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

9 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

9 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

9 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

9 hours ago