Breaking News

ವಿಜೃಂಬಣೆಯಿಂದ ನಡೆದ ಮಲೆ ಮಾದಪ್ಪನ ರಥೋತ್ಸವ ಸಾವಿರಾರು ಭಕ್ತರು ಸಾಕ್ಷಿಯಾದರು

Thousands of devotees witnessed the Rathotsava of Male Madappa which was held with great enthusiasm.


ವರದಿ: ಬಂಗಾರಪ್ಪ ಸಿ .
ಹನೂರು: ರಾಜ್ಯದ ಪ್ರಸಿದ್ಧ ಯಾತ್ರ ಧಾರ್ಮಿಕ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ಪ್ರಯುಕ್ತ ಕೊನೆಯ ದಿನವಾದ ಮಂಗಳವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಿತು.
ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟದಲ್ಲಿ ನಡೆದ ಮಾದಪ್ಪನ ರಥೋತ್ಸವದ ಕಾರ್ಯದಲ್ಲಿ
ಶ್ರೀ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿಗಳು ಸೇರಿದಂತೆ ಬೇಡಗಂಪಣ ಅರ್ಚಕರು ಹಾಗೂ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ತೇರನ್ನು ವಿವಿಧ ಬಗೆಯ ಪುಷ್ಪಗಳು, ತಳಿರು ತೋರಣ, ಬಣ್ಣದ ಬಟ್ಟೆಗಳಿಂದ ಸಿಂಗರಿಸಲಾಗಿತ್ತು.
ರಥೋತ್ಸವಕ್ಕೂ ಮುನ್ನ ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ನೇತೃತ್ವದಲ್ಲಿ ಬೇಡಗಂಪಣ ಅರ್ಚಕ ವೃಂದದವರು ದೇಗುಲದ ಗರ್ಭಗುಡಿಯಲ್ಲಿ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ತೇರಿನ ಬಳಿ ಧಾರ್ಮಿಕ ವಿಧಿ ವಿಧಾನ, ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಆ ಬಳಿಕ ಉತ್ಸವ ಮೂರ್ತಿ ಇರಿಸಿ ಬೂದು ಕುಂಬಳಕಾಯಿ ದೃಷ್ಟಿ ತೆಗೆದು ಮಹಾಮಂಗಳಾರತಿ ಹಾಗೂ ಬೇಡಗಂಪಣ ಸಮುದಾಯದ ಹೆಣ್ಣು ಮಕ್ಕಳಿಂದ ಬೆಲ್ಲದ ಆರತಿ ಬೆಳಗಲಾಯಿತು. ಬಳಿಕವಷ್ಟೇ ಮಹಾ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.
ದೇಗುಲದ ಮುಖ್ಯದ್ವಾರದ ಆವರಣದಿಂದ ಸತ್ತಿಗೆ ಸೂರಿಪಾನಿ, ಛತ್ರಿ, ಚಾಮರ, ನಂದಿ ದ್ವಜ ಹಾಗೂ ಮಂಗಳವಾದ್ಯದೊಂದಿಗೆ ತೇರು ಎಳೆಯಲಾಯಿತು. ಹುಲಿವಾಹನ, ಬಸವ ವಾಹನ ಹಾಗೂ ರುದ್ರಾಕ್ಷಿ ವಾಹನೋತ್ಸವವು ನಡೆಯಿತು. ವೀರಗಾಸೆ ಕುಣಿತ ಭಕ್ತಾದಿಗಳ ಗಮನ ಸೆಳೆಯಿತು. ಭಕ್ತರು ತೇರಿಗೆ ಹಣ್ಣು, ದವಸ ಧಾನ್ಯಗಳನ್ನು ಎಸೆದು ಮಾದಪ್ಪನ ಕೃಪೆಗೆ ಪಾತ್ರರಾದರು. ತಮಿಳುನಾಡು ಹಾಗೂ ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು. ಯಾವುದೇ ಅಹಿತಕರ ಘಟನೆಗಳು ನಡೆಯಬಾರದು ಎಂದು ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು ಎಂದು ಪ್ರಾಧಿಕಾರದ ಕಾರ್ಯದರ್ಶಿ ರಘು ತಿಳಿಸಿದರು . ಇದೇ ಸಂದರ್ಭದಲ್ಲಿ ಆಡಳಿತ ಮಂಡಳಿಯ ಅಧಿಕಾರಿಗಳು,ನೌಕರರು, ಆರಕ್ಷಕ ಸಿಬ್ಬಂದಿವರ್ಗ ,ಭಕ್ತರು ಹಾಜರಿದ್ದರು.

About Mallikarjun

Check Also

ಕರ್ನಾಟಕ ಗ್ರಾಮೀಣ ಬ್ಯಾಂಕ್ ಸಿಬ್ಬಂದಿ ಕಿರುಕುಳ ತಪ್ಪಿಸಿ..!

12೦೦ ಗ್ರಾಹಕರಿಗೆ ಜೀವ ಭದ್ರತೆ ಒದಗಿಸಬೇಕೆಂದು ರಕ್ಷಣಾ ವೇದಿಕೆ ಮನವಿ: ಗಂಗಾವತಿ: 2018ನೇ ಸಾಲಿನಲ್ಲಿ lಗಂಗಾವತಿ ತಾಲೂಕು ಕರ್ನಾಟಕ ಗ್ರಾಮೀಣ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.