
ಗಂಗಾವತಿ, ಏ.11: ಕಳೆದ 10 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ಕಾರ್ಯನಿರ್ವಹಿಸಿ ಅತ್ಯುತ್ತಮ ಪಕ್ಷ ಸಂಘಟನಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ದಲಿತ ಯುವ ಮುಖಂಡ ಮಲ್ಲೇಶ್ ದೇವರಮನಿ ಅವರಿಗೆ ಕಾಂಗ್ರೆಸ್ ಪಕ್ಷವು ಸೂಕ್ತ ಸ್ಥಾನಮಾನ ನೀಡುವ ಮೂಲಕ ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ ಗೌರವಿಸಿದೆ.

ಇತ್ತೀಚಿಗೆ ನಗರದ ವಿಧಾನಪರಿಷತ್ ಮಾಜಿ ಸದಸ್ಯ ಹೆಚ್.ಆರ್.ಶ್ರೀನಾಥ್ ಅವರ ನಿವಾಸದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಎಸ್.ಸಿ. ಘಟಕದ ಅಧ್ಯಕ್ಷ ಮಲ್ಲೇಶ್ ದೇವರಮನಿ ಅವರಿಗೆ ಹೈಕಮಾಂಡ್ ನಗರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನ ನೀಡುವ ಮೂಲಕ ಮಹತ್ತರ ಜವಾಬ್ದಾರಿಯನ್ನು ನೀಡಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಮರೇಗೌಡ ಭಯ್ಯಾಪುರ ಅವರು ಮಲ್ಲೇಶ್ ದೇವರಮನಿ ಅವರಿಗೆ ಅಧಿಕೃತವಾಗಿ ಆದೇಶ ಪತ್ರವನ್ನು ನೀಡುವ ಮೂಲಕ ಪಕ್ಷ ಸಂಘಟನೆಯಲ್ಲಿ ಮತ್ತಷ್ಟು ತೊಡಗಿಸಿಕೊಳ್ಳುವಂತೆ ಸೂಚನೆ ನೀಡಿ ಅಭಿನಂದಿಸಿದರು.
ಮಲ್ಲೇಶ್ ದೇವರಮನಿ ಕಳೆದ ಹತ್ತು ವರ್ಷದಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷ ಸಂಘಟನೆ ಮೂಲಕ ಯುವ ಮುಖಂಡರ ಮುಂಚೂಣಿಯ ಹಂತಕ್ಕೆ ತಲುಪಿದ್ದಾರೆ. ಇವರ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಕಾರ್ಯಕ್ಕೆ ಮೆಚ್ಚಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅಭಿನಂದಿಸಿ ಗೌರವಿಸಿದ್ದಾರೆ. ಈ ಹಿಂದೆ ಇವರ ಪಕ್ಷ ನಿಷ್ಠೆ, ಸಂಘಟನಾ ಕಾರ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರಸಭೆಗೆ ನಾಮಿನೆಟ್ ಸದಸ್ಯರನ್ನಾಗಿ ನೇಮಿಸಿ ಗೌರವಿಸಿದ್ದರು. ಸದ್ಯಕ್ಕೆ ಕಾಂಗ್ರೆಸ್ ಪಕ್ಷದ ಯುವ ಮುಖಂಡರ ಸಾಲಿನಲ್ಲಿ ಗುರುತಿಸಿಕೊಂಡಿರುವ ಮಲ್ಲೇಶ್ ದೇವರಮನಿ ರಾಜಕೀಯವಾಗಿ ಉತ್ತುಂಗಕ್ಕೇರುವ ಸಾಕಷ್ಟು ಅವಕಾಶಗಳಿವೆ.
ಈ ಕುರಿತಂತೆ ಮಾತನಾಡಿದ ಮ್ಲಲೇಶ್ ದೇವರಮನಿ, ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಬೆಲೆಯಿದೆ. ಸಂಘಟನೆ ಹಾಗೂ ಶ್ರಮವಹಿಸಿ ಪಕ್ಷದ ಪರ ಕಾರ್ಯನಿರ್ವಹಿಸಿದರೆ ಹೈಕಮಾಂಡ್ ಗುರುತಿಸಿ ಗೌರವಿಸುತ್ತದೆ ಎಂಬುವುದಕ್ಕೆ ನನಗೆ ದೊರೆತ ನಗರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನ ಒಂದು ಸೂಕ್ತ ಉದಾಹರಣೆ. ಈ ಸ್ಥಾನಮಾನದಿಂದ ನನ್ನ ಜವಾಬ್ದಾರಿ ಇನ್ನೂ ಹೆಚ್ಚಾಗಿದ್ದು, ಪಕ್ಷ ಸಂಘಟನೆಯಲ್ಲಿ ಇನ್ನಷ್ಟು ತೊಡಗಿಸಿಕೊಳ್ಳಲು ಉತ್ಸಾಹ ದೊರೆತಂತಾಗಿದೆ. ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಕೊಪ್ಪಳ ಲೋಕಸಭೆ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಅವರನ್ನು ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಅತ್ಯಂತ ಹೆಚ್ಚಿನ ಮತಗಳಿಂದ ಗೆಲುವು ಸಾಧಿಸಲು ಶ್ರಮಿಸುತ್ತೇನೆ. ನನಗೆ ನಗರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನ ನೀಡಲು ಕಾರಣಕರ್ತರಾದ ನನ್ನ ಪಕ್ಷದ ಎಲ್ಲಾ ಹಿರಿಯ ಮುಖಂಡರಿಗೂ ಹೃತ್ಪೂರ್ವಕ ಅಭಿನಂದನೆಗಳು. ಅವರ ನಂಬಿಕೆ ಹುಸಿಯಾಗದಂತೆ ನನ್ನ ಕಾರ್ಯವನ್ನು ನಿಷ್ಠೆಯಿಂದ ಮುಂದುವರೆಸಿಕೊಂಡು ಪಕ್ಷದ ಏಳ್ಗೆಗಾಗಿ ಶ್ರಮಿಸುತ್ತೇನೆ ಎಂದರು.