ಗಂಗಾವತಿ : ತಾಲೂಕಿನ ಸಣಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಹನುಮನಹಳ್ಳಿ ಗ್ರಾಮದಲ್ಲಿ ಲೋಕಸಭಾ ಚುನಾವಣೆ ಅಂಗವಾಗಿ ಸೋಮವಾರ ರಾತ್ರಿ ಗಂಗಾವತಿ ವಿಧಾನಸಭಾ ಕ್ಷೇತ್ರ- 62 ಮಾನ್ಯ ಸಹಾಯಕ ಚುನಾವಣಾ ಅಧಿಕಾರಿಗಳು ಹಾಗೂ ಉಪ ವಿಭಾಗಾಧಿಕಾರಿಗಳಾದ ಕ್ಯಾಪ್ಟೆನ್ ಮಹೇಶ ಮಾಲಗಿತ್ತಿ ಅವರ ಅಧ್ಯಕ್ಷತೆಯಲ್ಲಿ ಗ್ರಾಮಸ್ಥರಿಗೆ ಮತದಾನ ಜಾಗೃತಿ ಮೂಡಿಸಲಾಯಿತು.
ಗ್ರಾಮದಲ್ಲಿ ಮತದಾನ ಜಾಗೃತಿ ಸಂದೇಶ ಸಾರುವ ರಂಗೋಲಿ ಚಿತ್ರಗಳು, ಜಾಗೃತಿ ಫಲಕ ಹಾಗೂ ಮೇಣದಬತ್ತಿ ಹಿಡಿದು ಜಾಗೃತಿ ಮೂಡಿಸಲಾಯಿತು. ನಂತರ ಮತದಾನ ಮಹತ್ವದ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಉಪ ವಿಭಾಗಾಧಿಕಾರಿಗಳಾದ ಕ್ಯಾಪ್ಟೆನ್ ಮಹೇಶ ಮಾಲಗಿತ್ತಿ ಅವರು ಮಾತನಾಡಿ, ಮೇ 07 ರಂದು ಲೋಕಸಭಾ ಚುನಾವಣೆ ಮತದಾನ ನಡೆಯಲಿದೆ. ಯಾರೂ ಕೂಡ ಆ ದಿನ ಬೇರೆಡೆ ಊರಿಗೆ ತೆರಳದೆ ಕಡ್ಡಾಯವಾಗಿ ಮತ ಚಲಾಯಿಸಬೇಕು. ಯಾವುದೇ ಆಸೆ, ಆಮೀಷಕ್ಕೆ ಬಲಿಯಾಗದೆ ಮತದಾನ ಮಾಡಬೇಕು ಎಂದರು.
ಈ ವೇಳೆ, ತಹಸೀಲ್ದಾರರಾದ ನಾಗರಾಜ ಯು., ಡಿವೈಎಸ್ಪಿ,
ಗ್ರಾ.ಪಂ. ಪಿಡಿಓ ಶ್ರೀಮತಿ ವತ್ಸಲಾ, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು, ಸ್ವಸಹಾಯ ಗುಂಪಿನ ಸದಸ್ಯರು, ಗ್ರಾಪಂ ಎಲ್ಲ ಸಿಬ್ಬಂದಿಗಳು ಸೇರಿ ಗ್ರಾಮಸ್ಥರು ಇದ್ದರು.