Breaking News

ಪ್ರಜಾಪ್ರಭುತ್ವವ್ಯವಸ್ಥೆಯಲ್ಲಿ ಮತದಾರರೇ ಪ್ರಭುಗಳು

ಸಾವಳಗಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮಗೆ ಬೇಕಾದ ಉತ್ತಮ ವ್ಯವಸ್ಥೆಯನ್ನು ಆಯ್ಕೆ ಮಾಡಿಕೊಳ್ಳಲು ಪ್ರತಿಯೊಬ್ಬರಿಗೂ ಹಕ್ಕಿದೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗ್ರಾಮದ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಭಾರತಿ ಚೆಲುವಯ್ಯ ಹೇಳಿದರು.

ಜಾಹೀರಾತು

ಬಾಗಲಕೋಟ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ಗ್ರಾಮ ಪಂಚಾಯತ ಮಟ್ಟದ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮವು ಶನಿವಾರ ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿವಿಧ ವಾದ್ಯಮೇಳಗಳೊಂದಿಗೆ ವಿವಿಧ ಇಲಾಖೆಯ ಸರ್ಕಾರಿ ನೌಕರರು ಹಾಗೂ ಶಾಲಾ ವಿದ್ಯಾರ್ಥಿಗಳು ಪ್ಲೇಕ್ಸ ಹಾಗೂ ಬ್ಯಾನರಗಳನ್ನು ಹಿಡಿದು ಸಾರ್ವಜನಿಕರಿಗೆ ಮತದಾನದ ಅರಿವು ಮೂಡಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರೇ ಪ್ರಭುಗಳು. ಅವರು ಚಲಾಯಿಸುವ ಪ್ರತಿಯೊಂದು ಮತಕ್ಕೂ ಅದರದೇ ಆದ ಮೌಲ್ಯವಿದ್ದು 18 ವರ್ಷ ದಾಟಿದ ಎಲ್ಲರೂ ತಪ್ಪದೆ ಎಲ್ಲರೂ ಮತದಾನ ಮಾಡಬೇಕು’ ಎಂದು ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಗಿರೀಶ ಕಡಕೋಳ ಹೇಳಿದರು.

ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ಗ್ರಾಮಸ್ಥರು, ಗ್ರಾಮದ ಹಿರಿಯರು ಶಿಕ್ಷಕರು, ವಿದ್ಯಾರ್ಥಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

About Mallikarjun

Check Also

ಕಲ್ಯಾಣಿ ಸ್ಟೀಲ್ ಕಂಪನಿಯವರು ಗಿಣಿಗೇರಾ ಗ್ರಾಮದ ಪಕ್ಕದಲ್ಲಿ ಕರಿಬೂದಿ ಡಂಪ್ ಮಾಡುವುದನ್ನು ನಿಲ್ಲಿಸಲು ಮನವಿ

Appeal to Kalyani Steel Company to stop dumping black ash near Ginigera village ಕೊಪ್ಪಳ ತಾಲೂಕಿನ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.