ಗಂಗಾವತಿ ಏ.20:ಆರೋಗ್ಯ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಅಪಾರ ಉದ್ಯೋಗ ಅವಕಾಶಗಳಿರುವ ವೃತ್ತಿಪರ ಮೆಡಿಕಲ್ ಕೋರ್ಸ್‌ಗಳಿಗೆ ಉಚಿತ ಪ್ರವೇಶ ಪಡೆಯಲು ಆಸಕ್ತ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ
ಆಹ್ವಾನಿಸಲಾಗಿದೆ.
ನಗರದ ಪ್ರತಿಷ್ಠಿತ ಸ್ಪೂರ್ತಿ ಇನ್‌ಸ್ಕೂಟ್ ಆಫ್ ನರ್ಸಿಂಗ್ ಈ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಈ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ. ಎ.,25 ರಂದು ಪ್ರವೇಶ ಪರೀಕ್ಷೆ ಹಮ್ಮಿಕೊಳ್ಳಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸುವಂತೆ ಸಂಸ್ಥೆಯ ವ್ಯವಸ್ಥಾಪಕರು ಕೋರಿದ್ದಾರೆ.
ಪಿಯುಸಿ ದ್ವಿತೀಯ ವರ್ಷದಲ್ಲಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡಿ ಉತ್ತೀರ್ಣರಾದ ಮತ್ತು ಹತ್ತನೇ ತರಗತಿ ಫಲಿತಾಂಶ ನಿರೀಕ್ಷಿಸುತ್ತಿರುವ ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆ ಬರೆಯಬಹುದು. ಪ್ರವೇಶ ಪರೀಕ್ಷೆಯಲ್ಲಿ ರಾ೦ಕ್ ಗಳಿಸುವ ಪ್ರತಿಭಾವಂತ ಮಕ್ಕಳಿಗೆ ಉಚಿತ ಪ್ರವೇಶ ಕಲ್ಪಿಸಿಕೊಡಲಾಗುವುದು. ರ್ಯಾಂಕ ಪಡೆಯುವ ಮತ್ತು ಬಡತನದ (ಬಿಪಿಎಲ್) ರೇಖೆಗಿಂತ ಕೆಳಗಿರುವ ಮಕ್ಕಳಿಗೆ ನರ್ಸಿಂಗ್ ಮತ್ತು ಪ್ಯಾರಾ ಮೆಡಿಕಲ್ ಕೋರ್ಸ್‌ಗಳಿಗೆ ಉಚಿತ ಪ್ರವೇಶ ಅವಕಾಶ ಕಲ್ಪಿಸುವುದಲ್ಲದೇ, ವಿದ್ಯಾರ್ಥಿ ವೇತನ (ಸ್ಕಾಲರ್ ಶಿಫ್) ನೀಡಲಾಗುವುದು. ಪ್ರವೇಶ ಪರೀಕ್ಷೆಯು ಏ.25 ರಂದು ರಾಯಚೂರು ರಸ್ತೆಯ ವಿದ್ಯಾನಗರದಲ್ಲಿರುವ ಸ್ಫೂರ್ತಿ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಆವರಣದಲ್ಲಿ ನಡೆಯಲಿದೆ. ಹೆಸರು ನೊಂದಾಯಿಸಲು ಆಕ್ತರು ಹೆಚ್ಚಿನ ಮಾಹಿತಿಗೆ ಮೊ: 8073328581 ಅಥವಾ 7019520292 ಸಂಪರ್ಕಸಬಹುದು